ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ: ಅರವಿಂದ್ ಕೇಜ್ರಿವಾಲ್

Date:

ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ತಿಳಿಸಿದ್ದು,ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದಕ್ಕೆ ಎರಡು ಪಕ್ಷಗಳು ಒಟ್ಟಾಗಿವೆ ಎಂದು ತಿಳಿಸಿದ್ದಾರೆ.

- Advertisement -

ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಿಳಿಸಿರುವ ಅವರು, ಜೂನ್‌ 4ರಂದು ದೊಡ್ಡ ಆಶ್ಚರ್ಯಕ್ಕಾಗಿ ಕಾದಿದ್ದು ಲೋಕಸಭೆ ಚುನಾವಣೆಯಲ್ಲಿ ವಿಪಕ್ಷಗಳ ಒಕ್ಕೂಟ ಇಂಡಿಯಾ ಗೆಲುವು ಗಳಿಸಲಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

“ಎಎಪಿಯು ಕಾಂಗ್ರೆಸ್‌ನೊಂದಿಗಿನ ವಿವಾಹ ಶಾಶ್ವತವಲ್ಲ. ಈಗ ನಮ್ಮ ಉದ್ದೇಶ ಬಿಜೆಪಿ ಸೋಲಿಸುವುದಾಗಿದೆ ಹಾಗೂ ಪ್ರಸ್ತುತ ಆಡಳಿತದಲ್ಲಿರುವ ಸರ್ವಾಧಿಕಾರ ಹಾಗೂ ಗೂಂಡಾಗಿರಿಯನ್ನು ಕೊನೆಗೊಳಿಸುವುದಾಗಿದೆ” ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಎಎಪಿ ಮತ್ತು ಕಾಂಗ್ರೆಸ್ ಒಕ್ಕೂಟ ಮಾಡಿಕೊಂಡಿದ್ದರೆ, ಪಂಜಾಬ್‌ನಲ್ಲಿ ಎರಡೂ ಪಕ್ಷಗಳು ಪ್ರತ್ಯೇಕವಾಗಿ ಕಣಕ್ಕಿಳಿದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಕಳಿಸುವ ಮೋದಿ ಗ್ಯಾರಂಟಿಯು ‘ಜನತಂತ್ರದ ಜನನಿ’ಯ ಅಣಕ ಅಲ್ಲವೇ?

“ದೇಶವನ್ನು ಕಾಪಾಡುವುದು ಮುಖ್ಯವಾಗಿದೆ. ಎಎಪಿ ಮತ್ತು ಕಾಂಗ್ರೆಸ್ ಒಟ್ಟಾಗಿ ಬಿಜೆಪಿಯನ್ನು ಸೋಲಿಸಲು ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಿವೆ. ಪಂಜಾಬ್‌ನಲ್ಲಿ ಬಿಜೆಪಿಗೆ ಯಾವುದೇ ಅಸ್ತಿತ್ವವಿಲ್ಲ” ಎಂದು ಕೇಜ್ರಿವಾಲ್ ಹೇಳಿದರು.

ಇದೇ ಸಂದರ್ಭದಲ್ಲಿ ದೆಹಲಿ ಅಬಕಾರಿ ಹಗರಣದ ಬಗ್ಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್, ನಾನು ಜೈಲಿಗೆ ಹೋಗುವುದು ಸಮಸ್ಯೆಯಲ್ಲ. ಈ ದೇಶದ ಭವಿಷ್ಯ ಅಪಾಯದಲ್ಲಿದೆ. ಅವರು ಎಷ್ಟು ದಿನ ನನ್ನನ್ನು ಜೈಲಿಗೆ ಹಾಕಲಿ ನಾನು ಹೆದರುವುದಿಲ್ಲ. ಬಿಜೆಪಿಯವರು ನನ್ನನ್ನು ಕೆಳಗಿಳಿಸಲು ಬಯಸುತ್ತಾರೆ ಆದರೆ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಕೇಜ್ರಿವಾಲ್ ಹೇಳಿದರು.

ಒಂದು ವೇಳೆ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ ಎಲ್ಲ ವಿಪಕ್ಷ ನಾಯಕರು ಜೈಲಿನಲ್ಲಿರುತ್ತಾರೆ. ರಷ್ಯಾದಲ್ಲಿ ವ್ಲಾಡಿಮಿರ್ ಪುಟಿನ್‌ ಆಡಳಿದ ಪರಿಸ್ಥಿತಿ ಇಲ್ಲಿಯೂ ಉಂಟಾಗುತ್ತದೆ ಎಂದು ಕೇಜ್ರಿವಾಲ್ ಎಚ್ಚರಿಸಿದರು.

ದೆಹಲಿ ಅಬಕಾರಿ ಹಗರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್ ಕೇಜ್ರಿವಾಲ್ ಜೂನ್‌ 2ರೊಳಗೆ ನ್ಯಾಯಾಲಯಕ್ಕೆ ಶರಣಾಗಬೇಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಯತ್ನಿಸಿದ್ದ 8 ವಿದ್ಯಾರ್ಥಿಗಳಿಗೆ ಐಐಐಟಿ ಹೈದರಾಬಾದ್ ನೋಟಿಸ್

ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ...

ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಗೆ ಸೋನಿಯಾ ಹೆಸರು: ಮ್ಯಾಜಿಸ್ಟ್ರೇಟ್ ಆದೇಶ ರದ್ದು

ಭಾರತೀಯ ಪೌರತ್ವ ಪಡೆಯುವ ಮುನ್ನವೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ...

UAPA ಇರಲಿ, ಯಾವುದೇ ಕೇಸಿರಲಿ ಲಿಖಿತ ಕಾರಣವಿಲ್ಲದ ಬಂಧನ ಅಕ್ರಮ: ಸುಪ್ರೀಂ ಕೋರ್ಟ್

ಭಯೋತ್ಪಾದನೆ ತಡೆ ಕಾಯ್ದೆ (UAPA) ಸೇರಿದಂತೆ ಯಾವುದೇ ಕಾಯ್ದೆಯಡಿ ಆರೋಪಿಯನ್ನು ಬಂಧಿಸಿದರೂ,...

ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ: ಸಿಸಿಟಿವಿಯಲ್ಲಿ 105 ಕೃತ್ಯ ಸೆರೆ

ಅಯೋಧ್ಯೆಯ ರಾಮಮಂದಿರದಲ್ಲಿ ದೇಣಿಗೆ ಹಣ ದುರ್ಬಳಕೆ ಹಾಗೂ ಕಳ್ಳತನ ನಡೆದಿದೆ ಎನ್ನಲಾದ...