ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ಗೆ 15 ದಿನ ನ್ಯಾಯಾಂಗ ಬಂಧನ

Date:

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ದೆಹಲಿಯ ರೋಸ್ ಅವಿನ್ಯೂ ಕೋರ್ಟ್ 15 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ. ಇ.ಡಿ ಕಸ್ಟಡಿ ಅವಧಿ ಇಂದು ಅಂತ್ಯವಾದ ಕಾರಣ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೋರ್ಟ್‌ಗೆ ಹಾಜರುಪಡಿಸುದಕ್ಕೂ ಮುನ್ನ ಮಾತನಾಡಿದ ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ವಾಗ್ದಾಳಿ ನಡೆಸಿದರು. ಅವರು ಮಾಡುತ್ತಿರುವುದು ದೇಶಕ್ಕೆ ಒಳ್ಳೆಯದಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೇಜ್ರಿವಾಲ್ ಅವರನ್ನು  ವಿಚಾರಣೆ ಪ್ರಯುಕ್ತ ಹೆಚ್ಚುವರಿ 7 ದಿನ ಕೋರಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆದರೆ ಮ್ಯಾಜಿಸ್ಟ್ರೇಟಲ್‌ ಕೋರ್ಟ್ ಕೇಜ್ರಿವಾಲ್‌ ಅವರ ಇ.ಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1ರವರೆಗೆ ಕೇವಲ 4 ದಿನ ಮಾತ್ರ ಅನುಮತಿ ನೀಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಎಎಪಿಯನ್ನು ಹತ್ತಿಕ್ಕುವುದು ಇ.ಡಿಯ ಪ್ರಮುಖ ಉದ್ದೇಶವಾಗಿದ್ದು ಈ ಕಾರಣದಿಂದಲೇ ಅಬಕಾರಿ ನೀತಿ ಹಗರಣದಲ್ಲಿ ತಮ್ಮನ್ನು ಸಿಲುಕಿಸಲಾಗಿದೆ ಎಂದು ಮ್ಯಾಜಿಸ್ಟ್ರೇಟಲ್‌ ಕೋರ್ಟ್‌ನಲ್ಲಿ ದೆಹಲಿ ಮುಖ್ಯಮಂತ್ರಿ  ಹೇಳಿದ್ದರು.

“ನಾನು ಇ.ಡಿಯ ರಿಮ್ಯಾಂಡ್ ಅರ್ಜಿಯನ್ನು ವಿರೋಧಿಸುತ್ತಿಲ್ಲ. ಜಾರಿ ನಿರ್ದೇಶನಾಲಯ ತನ್ನನ್ನು ಎಷ್ಟು ದಿನ ಬೇಕೋ ಅಷ್ಟು ದಿನ ತನ್ ಕಸ್ಟಡಿಯಲ್ಲಿ ಇಟ್ಟುಕೊಳ್ಳಲಿ. ಆದರೆ ಇದು ಒಂದು ಹಗರಣವಾಗಿದೆ. ಇ.ಡಿಗೆ ಎರಡು ಉದ್ದೇಶಗಳಿವೆ. ಒಂದು ಎಎಪಿಯನ್ನು ಹತ್ತಿಕ್ಕುವುದು. ಮತ್ತೊಂದು ಅಕ್ರಮ ಹಣ ವರ್ಗಾವಣೆಯಲ್ಲಿ ಹಣ ತೆಗೆದುಕೊಂಡಿದ್ದೇನೆಂದು ಅಪರಾಧಿಯನ್ನಾಗಿ ಬಿಂಬಿಸುವುದು” ಎಂದು ಕೇಜ್ರಿವಾಲ್ ತಿಳಿಸಿದ್ದರು.

ಇದೇ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿಗಳು ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ ಎಂದು ಆರೋಪಿಸಿದೆ.

ಕೇಜ್ರಿವಾಲ್ ಕೂಡ ತಮ್ಮನ್ನು ಬಂಧಿಸಿರುವುದರ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಆದರೆ ಮಧ್ಯಂತರ ರಕ್ಷಣೆ ನೀಡಲು ಕೋರ್ಟ್ ನಿರಾಕರಿಸಿದ್ದು, ವಿಚಾರಣೆಯಲ್ಲಿ ಇ.ಡಿ ವಾದ ಮುಗಿಯದೆ ಆದೇಶ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತ್ತು.

ತನಿಖಾ ಸಂಸ್ಥೆಯು ಏ.2ರೊಳಗೆ ಪ್ರತಿಕ್ರಿಯೆ ನೀಡಿ ವಿಚಾರಣೆ ದಿನಾಂಕವನ್ನು ಏ.3ಕ್ಕೆ ಕೋರ್ಟ್ ನಿಗದಿಪಡಿಸಿತ್ತು.

ಅರವಿಂದ್ ಕೇಜ್ರಿವಾಲ್‌ ಬಂಧನ ವಿರೋಧಿಸಿ ನಿನ್ನೆ(ಮಾ.31) ಇಂಡಿಯಾ ಒಕ್ಕೂಟ ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ರ್ಯಾಲಿ ಹಮ್ಮಿಕೊಂಡಿತ್ತು. ಕಾಂಗ್ರೆಸ್‌ ಒಳಗೊಂಡು ದೇಶದ ವಿವಿಧ ಭಾಗದ ವಿರೋಧ ಪಕ್ಷದ ನಾಯಕರು ಪಾಲ್ಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...