ಮೂರನೇ ಬಾರಿಯು ಇ.ಡಿ ನೀಡಿದ ಸಮನ್ಸ್‌ಗೆ ಗೈರು ಹಾಜರಾದ ಅರವಿಂದ್ ಕೇಜ್ರೀವಾಲ್

Date:

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್‌ ಮೂರನೇ ಬಾರಿಯೂ ಜಾರಿ ನಿರ್ದೇಶನಾಲಯ ಕಳಿಸಿದ್ದ ಸಮನ್ಸ್‌ಗೆ ಗೈರು ಹಾಜರಾಗಿದ್ದಾರೆ.

- Advertisement -

ದೆಹಲಿ ಅಬಕಾರಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 3ರಂದು ಹಾಜರಾಗಲು ಅರವಿಂದ ಕೇಜ್ರೀವಾಲ್‌ ಅವರಿಗೆ ಇ.ಡಿ ಸಮನ್ಸ್‌ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ದೆಹಲಿ ಮುಖ್ಯಮಂತ್ರಿ ಇ.ಡಿಗೆ ನೀಡಿದ ಪ್ರತಿಕ್ರಿಯೆಯಲ್ಲಿ, ತನಿಖೆಗೆ ಸಹಕರಿಸಲು ಸಿದ್ದವಿರುವುದಾಗಿ ತಿಳಿಸಿದ್ದು, ಆದರೆ ನೋಟಿಸ್‌ ನೀಡಿರುವುದು ಕಾನೂನು ಬಾಹಿರವಾಗಿದೆ ಎಂದು ತಿಳಿಸಿದ್ದಾರೆ.

ತನಿಖಾ ಸಂಸ್ಥೆಯು ಉದ್ದೇಶಪೂರ್ವಕವಾಗಿ ನಮ್ಮ ಮುಖ್ಯಮಂತ್ರಿಗಳನ್ನು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವುದನ್ನು ತಡೆಯುವುದಕ್ಕಾಗಿ ಬಂಧಿಸುವ ಉದ್ದೇಶ ಹೊಂದಿದೆ. ಕೇಂದ್ರ ಸರ್ಕಾರವು ವಿಪಕ್ಷ ನಾಯಕರನ್ನು ಬಂಧಿಸಲಾಗುತ್ತಿದ್ದು, ಭ್ರಷ್ಟ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾಗುತ್ತಿಲ್ಲ ಎಂದು ಎಎಪಿ ದೂರಿದೆ.

ಬಿಜೆಪಿಯೊಂದಿಗೆ ಕೈಜೋಡಿಸಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ತನಿಖಾ ಸಂಸ್ಥೆ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ವೇಳೆ ತನಿಖೆಗೆ ಸಹಕರಿಸಿದರೂ ಬಂಧಿಸುವುದರಲ್ಲಿ ಯಾವುದೇ ಆಶ್ಚರ್ಯವಿಲ್ಲ ಎಂದು ಅಮ್‌ ಆದ್ಮಿ ಪಕ್ಷ ವಾಗ್ದಾಳಿ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸವರ್ಷದ ಹೊಸ್ತಿಲಲ್ಲಿ ನಮ್ಮನ್ನಗಲಿದ ನಿಜಾಯತಿಯ ಪತ್ರಕರ್ತ ಜಾನ್ ಪಿಲ್ಜರ್

ಆದಾಗ್ಯೂ ದೆಹಲಿಯ ರೋಸ್‌ ಅವೆನ್ಯೂಯಲ್ಲಿರುವ ಎಎಪಿ ಕಚೇರಿಯ ಹೊರಗೆ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಇ.ಡಿ ಕ್ರಮದ ವಿರುದ್ಧ ಕಾಂಗ್ರೆಸ್ ಕೂಡ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ನಾಯಕ ಉದಿತ್ ರಾಜ್, “ಇ.ಡಿಯು ಜಾರ್ಖಂಡ್‌ ಮುಖ್ಯಮಂತ್ರಿಯ ಸಂಬಂಧಿತರು, ಛತ್ತೀಸ್‌ಗಢ ಮಾಜಿ ಮುಖ್ಯಮಂತ್ರಿ ಭೂಪೇಶ್ ಭಗೇಲ್ ವಿರುದ್ಧ ನೋಟಿಸ್ ಜಾರಿಗೊಳಿಸಿದೆ. ಅರವಿಂದ್‌ ಕೇಜ್ರೀವಾಲ್‌ ವಿಪಕ್ಷ ಒಕ್ಕೂಟದ ಭಾಗವಾಗಿದ್ದಾರೆ. ಈ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ. ಇದೆಲ್ಲವನ್ನು ಗಮನಿಸಿದರೆ ಇ.ಡಿ ಮಾಡಲು ಬೇರೆ ಕೆಲಸವಿಲ್ಲದೆ ವಿಪಕ್ಷಗಳ ನಾಯಕರ ಮೇಲೆ ಒತ್ತಡ ಹೇರುತ್ತಿರುವುದು ನಿಜವೆನಿಸುತ್ತಿದೆ” ಎಂದು ದೂರಿದರು.

ಈ ಬೆಳವಣಿಗೆಯ ಬಗ್ಗೆ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲಾ, ಇಂದು ಮತ್ತೊಮ್ಮೆ ಅರವಿಂದ್ ಕೇಜ್ರೀವಾಲ್ ಅವರು ಮೂರನೇ ಸಮನ್ಸ್‌ಗೆ ಗೈರು ಹಾಜರಾಗಿದ್ದಾರೆ. ಇದರಿಂದ ಅವರು ಏನನ್ನೋ ಮುಚ್ಚಿಟ್ಟು ಅಪರಾಧಿ ರೀತಿ ತಲೆತಪ್ಪಿಸಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಈ ಮೊದಲು ಅರವಿಂದ್ ಕೇಜ್ರೀವಾಲ್ ನವೆಂಬರ್‌ 2 ಹಾಗೂ ಡಿಸೆಂಬರ್‌ 21ರಂದು ಇ.ಡಿ ನೀಡಿದ್ದ ಸಮನ್ಸ್‌ಗೆ ಗೈರು ಹಾಜರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...