ಪ್ರಧಾನಿ ಮೋದಿಗೆ ತಲೆಬಾಗಬೇಡಿ: ಭಾರತದಲ್ಲಿ ಖಾತೆ ನಿರ್ಬಂಧಿಸಿದ ಮೆಟಾ ಸಂಸ್ಥೆ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

Date:

ಭಾರತದಲ್ಲಿ ತಮ್ಮ ಸಾಮಾಜಿಕ ಜಾಲತಾಣ (ಮೆಟಾ/ಇನ್‌ಸ್ಟಾಗ್ರಾಮ್) ಖಾತೆಯನ್ನು ನಿರ್ಬಂಧಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಆಪ್) ರಾಷ್ಟ್ರೀಯ ಸಂಚಾಲಕ, ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಹಾಗೆಯೇ “ಪ್ರಧಾನಿ ನರೇಂದ್ರ ಮೋದಿಗೆ ತಲೆಬಾಗಬೇಡಿ” ಎಂದು ಮೆಟಾ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಕೇಜ್ರಿವಾಲ್, “ಮೆಟಾದ ಭಾರತೀಯ ಕಚೇರಿಯನ್ನು ವಿಚಾರಿಸಿದಾಗ ತಮ್ಮ ಖಾತೆಯು ಭಾರತದಲ್ಲಿ ನಿರ್ಬಂಧಕ್ಕೊಳಗಾಗಿದ್ದು, ಬಳಕೆದಾರರಿಗೆ ಲಭ್ಯವಿಲ್ಲದಿರುವುದು ತಿಳಿದುಬಂದಿದೆ” ಎಂದು ತಿಳಿಸಿದ್ದಾರೆ. ಹಾಗೆಯೇ ಇದರ ಸ್ಕ್ರೀನ್‌ಶಾಟ್ ಅನ್ನು ಕೂಡಾ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಪ್ರಧಾನಿ ಮೋದಿ ವಿಡಿಯೋ ಕಿತ್ತೆಸೆದಿದ್ದ ಫೇಸ್‌ಬುಕ್; ಕೊನೆಗೂ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚನೆ

ಇನ್ನು ಸ್ಕ್ರೀನ್‌ಶಾಟ್‌ನಲ್ಲಿ ಕಾಣುವಂತೆ “ಕೆಲವು ಸ್ಥಳಗಳಲ್ಲಿ ಖಾತೆ ಲಭ್ಯವಿಲ್ಲ” (Unavailable in some locations) ಎಂದು ಬರೆಯಲಾಗಿದ್ದರೂ, ನಿರ್ಬಂಧಕ್ಕೆ ಕಾರಣ ಉಲ್ಲೇಖಿಸಲಾಗಿಲ್ಲ. ಯಾವುದೇ ಸ್ಪಷ್ಟ ಮಾಹಿತಿ ನೀಡದೆ ಈ ರೀತಿ ಖಾತೆಯನ್ನು ನಿರ್ಬಂಧಿಸಿರುವುದನ್ನು ಕೇಜ್ರಿವಾಲ್ ಖಂಡಿಸಿದ್ದಾರೆ.

ಈ ಸಂದರ್ಭದಲ್ಲೇ ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅರವಿಂದ್ ಕೇಜ್ರಿವಾಲ್, “ಪ್ರಧಾನಿಯವರ ಮುಂದೆ ಅಷ್ಟೊಂದು ತಲೆಬಾಗಬೇಡಿ. ಹೀಗೆಯೇ ನಡೆದರೆ ಭಾರತದಲ್ಲಿ ಅವರೊಬ್ಬರ (ಪ್ರಧಾನಿ ಮೋದಿ) ಖಾತೆಯನ್ನು ಮಾತ್ರ ನಡೆಸಲು ಅವರು (ಮೋದಿ) ನಿಮಗೆ ಅನುಮತಿ ನೀಡುತ್ತಾರೆ” ಎಂದು ಚಾಟಿ ಬೀಸಿದ್ದಾರೆ.

ಇನ್ನು ಕೇಜ್ರಿವಾಲ್ ಅವರ ಈ ಆರೋಪಗಳ ಕುರಿತು ಮೆಟಾ ಸಂಸ್ಥೆಯಿಂದ ತಕ್ಷಣಕ್ಕೆ ಯಾವುದೇ ಅಧಿಕೃತ ಸ್ಪಷ್ಟನೆ ಬಂದಿಲ್ಲ. ಆದರೆ, ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಮೆಟಾ ಸಂಸ್ಥೆಯು ತೀವ್ರ ಪರಿಶೀಲನೆ ಹಾಗೂ ತನಿಖೆಯನ್ನು ಎದುರಿಸುತ್ತಿದೆ.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ವಿಡಿಯೋವೊಂದನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಲಾಗಿತ್ತು. ತಾಂತ್ರಿಕ ದೋಷದಿಂದ ಹೀಗಾಗಿದೆ ಎಂದು ಸ್ಪಷ್ಟನೆ ನೀಡಿದ್ದ ಮೆಟಾದ ಜಾಗತಿಕ ವ್ಯವಹಾರಗಳ ಮುಖ್ಯಸ್ಥ ಜೋಯಲ್ ಕಾಪ್ಲಾನ್ ಮತ್ತು ಸಿಇಒ ಮಾರ್ಕ್ ಜುಕರ್‌ಬರ್ಗ್, ಸರ್ಕಾರ ಹಾಗೂ ಸಂಸದೀಯ ಸಮಿತಿಗೆ ಬೇಷರತ್ ಕ್ಷಮೆಯಾಚಿಸಿದ್ದರು.

ಇನ್ನೊಂದೆಡೆ ಬಾಲ ಲೈಂಗಿಕ ಶೋಷಣೆ ವಿಷಯ (CSAM) ಹಾಗೂ ಡೀಪ್‌ಫೇಕ್ ವಿಷಯಗಳು ವೇದಿಕೆಯಲ್ಲಿ ಪ್ರಚಾರವಾಗುತ್ತಿರುವ ಕುರಿತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY) ಮೆಟಾ ಸಂಸ್ಥೆಯನ್ನು ತನಿಖೆಗೊಳಪಡಿಸಿದೆ. ಐಟಿ ಕಾಯ್ದೆಯ ಸೆಕ್ಷನ್ 79 ರ ಅಡಿಯಲ್ಲಿ ನೀಡಲಾಗುವ ‘ಸುರಕ್ಷಿತ ವಲಯ’ ಕಾನೂನು ವಿನಾಯಿತಿಗಳನ್ನು ರದ್ದುಗೊಳಿಸುವ ಎಚ್ಚರಿಕೆಯನ್ನು ಸರ್ಕಾರ ಮೆಟಾ ಸಂಸ್ಥೆಗೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ ನಿರೂಪಣೆ

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ,...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...