ಅಬಕಾರಿ ನೀತಿ ಹಗರಣ; ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

Date:

ಅಬಕಾರಿ ಹಗರಣ ಸಂಬಂಧಿಸಿ ಏಪ್ರಿಲ್ 16ರಂದು ವಿಚಾರಣೆಗೆ ಹಾಜರಾಗುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್ ನೀಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಎಎಪಿ ನಾಯಕ ಹಾಗೂ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದ್ದು, ಸಿಸೋಡಿಯಾ ಅವರು ಏಪ್ರಿಲ್ 17ರ ವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಸಾರ್ವಜನಿಕ ಆಸ್ತಿ ವಿರೂಪಗೊಳಿಸಿದ ಆರೋಪದ ಪ್ರಕರಣದಲ್ಲಿ ಅವರು ಏಪ್ರಿಲ್ 27ರಂದು ವಿಚಾರಣೆಗೆ ಹಾಜರಾಗಬೇಕೆಂದು ಗೋವಾ ಪೊಲೀಸರು ಕೂಡ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ?: ಪುಲ್ವಾಮ ದಾಳಿ ದೋಷ ಮುಚ್ಚಿಟ್ಟು ಮೋದಿ ಚುನಾವಣಾ ಲಾಭ ಪಡೆದಿದ್ದರು: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

“ದೇಶದ ಪ್ರಗತಿ ಬಯಸದ ಹಲವು ದೇಶವಿರೋಧಿ ಶಕ್ತಿಗಳು ರಾಷ್ಟ್ರದಲ್ಲಿವೆ. ಇವರೆಲ್ಲ ಮನೀಶ್ ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದರು. ಸಿಸೋಡಿಯಾ ಅವರನ್ನು ಜೈಲಿಗೆ ಕಳುಹಿಸಿದ ದೇಶದ ಶತ್ರುಗಳೆ ಎಎಪಿಯ ಎಲ್ಲ ನಾಯಕರನ್ನು ಸೆರೆಮನೆಗೆ ಕಳುಹಿಸಲು ಹೊಂಚು ಹಾಕಿವೆ” ಎಂದು ಕೇಜ್ರಿವಾಲ್‌ ಆರೋಪಿಸಿದ್ದಾರೆ.

ಕೇಜ್ರಿವಾಲ್ ಸರ್ಕಾರ ಅಬಕಾರಿ ಹಗರಣ ಮಾಡಿ ಭಾರೀ ವಂಚನೆ ಎಸಗಿದೆ ಎಂದು ಸಿಬಿಐ ಆರೋಪಿಸಿದೆ. ಸಂಸ್ಥೆಯೊಂದರ ಪರವಾಗಿ ಅಬಕಾರಿ ನೀತಿ ರೂಪಿಸಲು ಲಂಚ ಪಡೆಯಲಾಗಿತ್ತು ಎಂದೂ ಸಿಬಿಐನ ಆಪಾದನೆ. ಈ ಆರೋಪಗಳನ್ನು ತಳ್ಳಿಹಾಕಿರುವ ಎಎಪಿ, ಕೇಂದ್ರದ ಬಿಜೆಪಿ ಸರ್ಕಾರದ ರಾಜಕೀಯ ಸೇಡಿನ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇ.10 ರಂದು ಸುಪ್ರೀಂನಿಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ಆದೇಶ

ದೆಹಲಿ ಅಬಕಾರಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌...

ಅಯೋಧ್ಯೆ, ಕಾಶಿ, ಮಥುರಾ ನಂತರ ಅಜ್ಮೀರ್ ಮಸೀದಿ ಮೇಲೆ ಸಂಘಿಗಳ ಕಣ್ಣು

ಸಂಘ ಪರಿವಾರದ ಮುಖಂಡರು, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಸದಸ್ಯರು ಹಾಗೂ...

ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ...