‘ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದಿದ್ದಾರೆ’: ಅರವಿಂದ್ ಕೇಜ್ರಿವಾಲ್

Date:

ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಎರಡು ದಿನಗಳಲ್ಲಿ ತಿಹಾರ್‌ ಜೈಲಿನ ಪೊಲೀಸರಿಗೆ ಶರಣಾಗಬೇಕಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಸುದ್ದಿಗಾರರೊಂದಿಗೆ ಮಾತನಾಡಿದರು

- Advertisement -

“ಎಷ್ಟು ದಿನಗಳ ಕಾಲ ಜೈಲಿನಲ್ಲಿರುತ್ತೇನೆ ಎಂಬುದು ತಿಳಿದಿಲ್ಲ. ಸರ್ವಾಧಿಕಾರದಿಂದ ದೇಶವನ್ನು ಕಾಪಾಡುವ ನಿಟ್ಟಿನಲ್ಲಿ ಜೈಲಿಗೆ ವಾಪಸಾಗುತ್ತಿರುವುದರಿಂದ ನನ್ನ ಉತ್ಸಾಹ ಮತ್ತಷ್ಟು ಹೆಚ್ಚಾಗಿದೆ. ಅದಲ್ಲದೆ ವೈದ್ಯರು ನನಗೆ ನನ್ನ ದೇಹದಲ್ಲಿ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದು ಹೇಳಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಿಜೆಪಿಯವರು ಹಲವು ಮಾರ್ಗಗಳಲ್ಲಿ ನನ್ನನ್ನು ಕುಗ್ಗಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರು ಯಶಸ್ವಿಯಾಗುವುದಿಲ್ಲ. ಜೈಲಿನಲ್ಲಿದ್ದಾಗ ನನಗೆ ಹಲವು ರೀತಿಯಲ್ಲಿ ಕಿರುಕುಳ ನೀಡಿದ್ದಾರೆ. ನನಗೆ ಔಷಧಿ ಕೊಡುವುದನ್ನು ನಿಲ್ಲಿಸಿದರು. ಜೈಲಿಗೆ ಹೋಗುವಾಗ ನನ್ನ ತೂಕ 70 ಕೆಜಿಯಷ್ಟಿತ್ತು. ಈಗ 64 ಕೆಜಿಗೆ ಇಳಿದಿದ್ದೇನೆ. ಜೈಲಿನಿಂದ ಬಿಡುಗಡೆಯಾದರೂ ನನ್ನ ತೂಕ ಹೆಚ್ಚುಗೊಂಡಿಲ್ಲ. ವೈದ್ಯರು ನನಗೆ ಗಂಭೀರ ಕಾಯಿಲೆಯ ಲಕ್ಷಣಗಳಿವೆ ಎಂದು ಹೇಳಿದ್ದಾರೆ. ಹಲವು ಪರೀಕ್ಷೆಗಳನ್ನು ಮಾಡಿಸಬೇಕಾಗಿದೆ” ಎಂದು ಅರವಿಂದ್ ಕೇಜ್ರಿವಾಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

“ಸುಪ್ರೀಂ ಕೋರ್ಟ್ ಚುನಾವಣೆಯಲ್ಲಿ ಪ್ರಚಾರ ಮಾಡಲು 21 ದಿನಗಳ ಸಮಯ ನೀಡಿತ್ತು.ನಾಡಿದ್ದು ನಾನು ತಿಹಾರಿ ಜೈಲಿಗೆ ಹೋಗಬೇಕಿದೆ. ಮಧ್ಯಾಹ್ನ 3 ಗಂಟೆಗೆ ಹೋಗಿ ಶರಣಾಗುತ್ತೇನೆ. ಬಿಜೆಪಿಯವರು ನನಗೆ ಇನ್ನಷ್ಟು ತೊಂದರೆ ನೀಡುವ ಸಾಧ್ಯತೆಯಿದೆ. ಆದರೆ ಇದಕ್ಕೆಲ್ಲ ನಾನು ಬಗ್ಗುವುದಿಲ್ಲ. ನಾನು ಹೊರಗಿರಲಿ ಅಥವಾ ಒಳಗಿರಲಿ ದೆಹಲಿ ಕೆಲಸಗಳನ್ನು ನಿಲ್ಲಿಸಲು ಬಿಡುವುದಿಲ್ಲ” ಎಂದು ಕೇಜ್ರಿವಾಲ್ ತಿಳಿಸಿದರು.

“ನಿಮ್ಮ ಉಚಿತ ವಿದ್ಯುತ್, ಮೊಹಲ್ಲ ಕ್ಲಿನಿಕ್‌ಗಳು, ಉಚಿತ ‍ಔಷಧಿ, ಚಿಕಿತ್ಸೆ, 24 ಗಂಟೆ ವಿದ್ಯುತ್ ಒಳಗೊಂಡ ಹಲವು ಸೇವೆಗಳು ಮುಂದುವರೆಯುತ್ತವೆ. ಜೈಲಿನಿಂದ ಹೊರಬಂದ ನಂತರ ಪ್ರತಿ ತಿಂಗಳು ದೆಹಲಿಯ ಸೋದರಿಯರಿಗೆ 1 ಸಾವಿರ ನೀಡುವ ಯೋಜನೆಯನ್ನು ಪ್ರಾರಂಭಿಸುತ್ತೇನೆ” ಎಂದು ಕೇಜ್ರಿವಾಲ್‌ ಹೇಳಿದರು.

“ನನ್ನ ಪೋಷಕರಿಗೆ ತುಂಬಾ ವಯಸ್ಸಾಗಿದೆ. ನಮ್ಮ ತಾಯಿ ತುಂಬ ಅನಾರೋಗ್ಯದಿಂದಾರೆ. ನಾನು ಜೈಲಿನಲ್ಲಿ ಅವರ ಬಗ್ಗೆ ತುಂಬ ಚಿಂತೆ ಮಾಡುತ್ತೇನೆ. ನನ್ನ ಪೋಷಕರನ್ನು ಚೆನ್ನಾಗಿ ನೋಡಿಕೊಳ್ಳಿ ಅವರಿಗಾಗಿ ಪ್ರಾರ್ಥಿಸಿ” ಎಂದು ಕೇಜ್ರಿವಾಲ್ ದೆಹಲಿ ಜನತೆಗೆ ಮನವಿ ಮಾಡಿದರು.

ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮೇ.10 ರಂದು ಜೂನ್‌ 2ರವರೆಗೆ ಮಧ್ಯಂತರ ಜಾಮೀನು ನೀಡಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...