ಕೇಜ್ರೀವಾಲ್ ಬಂಧನವಾದರೆ ಜೈಲಿನಿಂದಲೇ ಸರ್ಕಾರ ನಿರ್ವಹಣೆ: ಸಚಿವೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು ಕೇಜ್ರಿವಾಲ್ ಅವರನ್ನು ಕೇಂದ್ರ ಸಂಸ್ಥೆ ಬಂಧಿಸಿದರೂ ಜೈಲಿನಿಂದ ಸರ್ಕಾರವನ್ನು ನಡೆಸಬೇಕು ಎಂದು ಹೇಳಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿದ ದೆಹಲಿ ಸಚಿವೆ ಅತಿಶಿ,”ನಾವು ಜನರ ನಡುವೆ ಕೆಲಸ ಮಾಡುತ್ತಿದ್ದೇವೆ. ಆಮ್ ಆದ್ಮಿ ಪಕ್ಷ ಮತ್ತು ಅರವಿಂದ್ ಕೇಜ್ರಿವಾಲ್ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಜನರು ಹೇಳುತ್ತಿದ್ದಾರೆ. ಅದಕ್ಕಾಗಿಯೇ ಅವರು ಜೈಲಿಗೆ ಹೋದರೂ ಅವರು ಕೆಲಸ ಮಾಡಬೇಕು ಎಂದು ಎಲ್ಲ ಶಾಸಕರು ಇಂದು ಮುಖ್ಯಮಂತ್ರಿಗೆ ಮನವಿ ಮಾಡಿದರು. ದೆಹಲಿಯ ಜನರು ಅವರನ್ನು ಮುಖ್ಯಮಂತ್ರಿಯಾಗಿ ಆಗಿ ಆಯ್ಕೆ ಮಾಡಿದ್ದಾರೆ ಮತ್ತು ಅವರು ಸಿಎಂ ಆಗಿಯೇ ಉಳಿಯಬೇಕು ಎಂದು ಹೇಳಿದರು. ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಮತ್ತು ಸಂಪುಟ ಸಭೆಯನ್ನು ಜೈಲಿನಲ್ಲಿಯೇ ನಡೆಸಲು ಅನುಮತಿ ಕೇಳುತ್ತೇವೆ” ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಈ ಸುದ್ದಿ ಓದಿದ್ದೀರಾ? ದೆಹಲಿ ವಾಯು ಮಾಲಿನ್ಯ: 4 ರಾಜ್ಯಗಳಲ್ಲಿ ತ್ಯಾಜ್ಯ ಸುಡುವುದನ್ನು ತಕ್ಷಣ ನಿಲ್ಲಿಸುವಂತೆ ಸುಪ್ರೀಂ ಆದೇಶ

ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಕರೆದಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಅವರು ಕೇಂದ್ರ ಸರ್ಕಾರದ ಷಡ್ಯಂತ್ರದಿಂದ ತಾವು ಬಂಧನವಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ನ. 2 ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯವು ಕೇಜ್ರಿವಾಲ್‌ ಅವರಿಗೆ ಸೂಚಿಸಿತ್ತು. ಆದರೆ ಅಂದು ಮಧ್ಯಪ್ರದೇಶದಲ್ಲಿ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರದಲ್ಲಿ ಅವರು ಪಾಲ್ಗೊಳ್ಳುವುದಾಗಿ ಹೇಳಿದ್ದರು. ತಮಗೆ ನೋಟಿಸ್ ನೀಡಿರುವುದು ಕಾನೂನುಬಾಹಿರ ಹಾಗೂ ರಾಜಕೀಯ ಪ್ರೇರಿತ. ಬಿಜೆಪಿ ಕೋರಿಕೆಯಂತೆ ತನಗೆ ಸಮನ್ಸ್ ಕಳುಹಿಸಲಾಗಿದೆ ಎಂದಿದ್ದರು.

ಅರವಿಂದ್ ಕೇಜ್ರಿವಾಲ್ ಅವರ ಸಂಪುಟದಲ್ಲಿ ಡಿಸಿಎಂ ಆಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಫೆಬ್ರವರಿಯಲ್ಲಿ ಬಂಧಿಸಿದ ನಂತರ ಅವರು ಕ್ಯಾಬಿನೆಟ್ ಹುದ್ದೆಯಿಂದ ಕೆಳಗಿಳಿದಿದ್ದರು. ಸಿಸೋಡಿಯಾ ಇನ್ನೂ ಜೈಲಿನಲ್ಲಿದ್ದಾರೆ. ಕಳೆದ ವಾರ, ಸುಪ್ರೀಂ ಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...