ದೆಹಲಿ ಅಬಕಾರಿ ನೀತಿ ಪ್ರಕರಣ; ಕೇಜ್ರಿವಾಲ್‌ ಮತ್ತೆ 4 ದಿನ ಇಡಿ ವಶಕ್ಕೆ

Date:

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಯಲ್ಲಿದ್ದಾರೆ. ಕೇಜ್ರಿವಾಲ್‌ ಅವರನ್ನು ಇನ್ನೂ 4 ದಿನಗಳ ಕಾಲ ತನ್ನ ಕಸ್ಟಡಿಯಲ್ಲಿಟ್ಟುಕೊಳ್ಳಲು ಇಡಿಗೆ ರೋಸ್ ಅವೆನ್ಯೂ ಕೋರ್ಟ್ ಅನುಮತಿ ನೀಡಿದೆ. ಏಪ್ರಿಲ್ 1ರವರೆಗೆ ಕೇಜ್ರಿವಾಲ್ ಇಡಿ ವಶದಲ್ಲಿ ಇರಲಿದ್ದಾರೆ.

ಕೆಲವು ದಿನಗಳ ಹಿಂದೆ ಜಾರಿ ನಿರ್ದೇಶನಾಲಯದ ಸಮನ್ಸ್ಅನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಬಳಿಕ, ಇಡಿ ಅಧಿಕಾರಿಗಳು ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.

ತನ್ನ ಬಂಧನವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಅರವಿಂದ್ ಕೇಜ್ರಿವಾಲ್ ಅಂದೇ ಆ ಅರ್ಜಿಯನ್ನು ಹಿಂಪಡೆದಿದ್ದರು. ಅದಾದ ಬಳಿಕ ರೋಸ್ ಅವೆನ್ಯೂ ಕೋರ್ಟ್​​ ದೆಹಲಿ ಮುಖ್ಯಮಂತ್ರಿಯನ್ನು ಒಂದು ವಾರ ಇಡಿ ಕಸ್ಟಡಿಗೆ ನೀಡಿತ್ತು. ಅದಾದ ಬಳಿಕ ಈಗ ಮತ್ತೆ ಈ ಅವಧಿಯನ್ನು ನಾಲ್ಕು ದಿನ ವಿಸ್ತರಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದನ್ನು ಓದಿದ್ದೀರಾ?  ಅರವಿಂದ್ ಕೇಜ್ರಿವಾಲ್ ಮನೆಯಲ್ಲಿ ಇಡಿಗೆ ಸಿಕ್ಕಿದು ಬರೀ 70,000 ರೂಪಾಯಿ: ಎಎಪಿ

ಇನ್ನು, ಈ ನಡುವೆ ಕೇಜ್ರಿವಾಲ್ ತನ್ನ ಬಂಧನದ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ತನಿಖಾ ಸಂಸ್ಥೆ ವರ್ತಿಸಿದ ರೀತಿ ನನ್ನ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸಿದೆ ಎಂದು ವಾದಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ನಿರಾಕರಿಸಿದ ಕೋರ್ಟ್ ಏಪ್ರಿಲ್ 2ರ ಒಳಗಾಗಿ ಉತ್ತರಿಸುವಂತೆ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿಗೊಳಿಸಿದೆ. ಏಪ್ರಿಲ್ 3ರಂದು ದೆಹಲಿ ಹೈಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಲಿದೆ.

ಇನ್ನು ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಕೇಜ್ರಿವಾಲ್ ಅವರನ್ನು ನೇರವಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅನುಮತಿ ನೀಡಲಾಗಿದ್ದು, ಕೇಜ್ರಿವಾಲ್ ಕೋರ್ಟ್‌ನಲ್ಲಿ ತನಿಖಾ ಸಂಸ್ಥೆ ತನ್ನ ಪಕ್ಷವನ್ನು ನಾಶ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ಇನ್ನು 100 ಕೋಟಿ ರೂಪಾಯಿ ಲಂಚ ಪಡೆದಿರುವ ಆರೋಪ ಮಾಡಲಾಗಿದೆ. ಆದರೆ ಅದರಲ್ಲಿ ಕೊಂಚ ಮೊತ್ತವೂ ಕೂಡಾ ಇಡಿ ವಶಕ್ಕೆ ಸಿಕ್ಕಿಲ್ಲ. ಯಾವ ನ್ಯಾಯಾಲಯವೂ ಅರವಿಂದ್ ಕೇಜ್ರಿವಾಲ್ ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿಲ್ಲ ಎಂದು ಎಎಪಿ ಹೇಳಿದೆ.

“ನಾನು ಬಂಧಿತನಾಗಿದ್ದೇನೆ, ಆದರೆ ಯಾವ ನ್ಯಾಯಾಲಯವೂ ಕೂಡಾ ನನ್ನನ್ನು ತಪ್ಪಿತಸ್ಥ ಎಂದು ಸಾಬೀತುಪಡಿಸಿಲ್ಲ. ಸಿಬಿಐ 31,000 ಪುಟಗಳ ಚಾರ್ಚ್‌ಶೀಟ್ ಸಲ್ಲಿಸಿದೆ. ಇಡಿ 25,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದೆ. ನೀವು ಎರಡನ್ನೂ ಜೊತೆಯಾಗಿ ಓದಿದರೂ ನಿಮಗೆ ಕೆಲವು ಪ್ರಶ್ನೆಗಳು ಬರುತಜಾರಿ ನಿರ್ದೇಶನಾಲಯ್ತದೆ. ನಾನು ಯಾಕೆ ಬಂಧನಕ್ಕೊಳಗಾದೆ ಎಂಬ ಪ್ರಶ್ನೆ ಬರುತ್ತದೆ” ಎಂದು ಕೋರ್ಟ್‌ ಮುಂದೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...

ಹದಗೆಟ್ಟ ರಸ್ತೆ| 600ಕ್ಕೂ ಹೆಚ್ಚು ತ್ರಿಪುರಾ ಬುಡಕಟ್ಟು ಮತದಾರರಿಂದ ಚುನಾವಣೆ ಬಹಿಷ್ಕಾರ

ತ್ರಿಪುರಾ ಪೂರ್ವ ಲೋಕಸಭಾ ಕ್ಷೇತ್ರದ ಭಾಗವಾದ ಧಲೈ ಜಿಲ್ಲೆಯ ದೂರದ ಬುಡಕಟ್ಟು...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...