ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ: ಅಸಾದುದ್ದೀನ್ ಓವೈಸಿ ಕಿಡಿ

Date:

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ವಿರುದ್ಧ ಎಐಎಂಐಎಂ ಮುಖ್ಯಸ್ಥ ಹಾಗೂ ಹೈದರಾಬಾದ್‌ ಸಂಸದ ಅಸಾದುದ್ದೀನ್ ಓವೈಸಿ ಅವರು ಕಿಡಿ ಕಾರಿದ್ದು, ಯುದ್ಧದ ನಡುವೆ ಸಾವಿರಾರು ಜನರು ಸಾವನ್ನಪ್ಪಿದ ಮತ್ತು ಗಾಯಗೊಂಡಿರುವ ಗಾಜಾದ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಮತ್ತು ಅವರಿಗೆ ಸಹಾಯ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

- Advertisement -

ಹೈದರಾಬಾದ್‌ನ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅಸಾದುದ್ದೀನ್ ಓವೈಸಿ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಒಬ್ಬ ರಾಕ್ಷಸ, ಕ್ರೂರಿ ಮತ್ತು ಯುದ್ಧ ಅಪರಾಧಿ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಇಂದಿಗೂ ಹೋರಾಡುತ್ತಿರುವ ಗಾಜಾದ ವೀರ ಸೈನಿಕರಿಗೆ ಹೃತ್ಪೂರ್ವಕ ನಮನಗಳು. ಇದಲ್ಲದೆ ಅವರ ಸಾಧನೆಗೆ ನನ್ನ ನಮನಗಳು. ಯಾವುದೇ ಸಂದರ್ಭದಲ್ಲೂ ನಾನು ಪ್ಯಾಲೆಸ್ತೀನ್ ಪರವಾಗಿ ನಿಲ್ಲುತ್ತೇನೆ. ಪ್ಯಾಲೆಸ್ತೀನಿಯನ್ನರ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವಂತೆ ನಾನು ಪ್ರಧಾನಿಗೆ ಮನವಿ ಮಾಡಲು ಬಯಸುತ್ತೇನೆ” ಎಂದು ಹೇಳಿದರು.

“ಪ್ಯಾಲೆಸ್ತೀನ್ ಕೇವಲ ಮುಸ್ಲಿಮರ ವಿಷಯವಲ್ಲ, ಇದು ಮಾನವೀಯ ಸಮಸ್ಯೆಯಾಗಿದ್ದು ಇದಕ್ಕೆ ಒಂದು ಪರಿಹಾರ ಕಂಡುಕೊಳ್ಳುವ ಅವಶ್ಯಕತೆ ಇದೆ. ಗಾಜಾದಲ್ಲಿ 10 ಲಕ್ಷ ಜನರು ನಿರಾಶ್ರಿತರಾಗಿದ್ದಾರೆ. ಜಗತ್ತು ಮೌನವಾಗಿದೆ. 70 ವರ್ಷಗಳಿಂದ ಇಸ್ರೇಲ್ ಪ್ಯಾಲೆಸ್ತೀನ್ ದೇಶವನ್ನು ಆಕ್ರಮಿಸಿಕೊಂಡಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಬದುಕಬೇಕಾದರೆ ಭಾರತ್ ಮಾತಾ ಕಿ ಜೈ ಎಂದು ಹೇಳಬೇಕು: ಕೇಂದ್ರ ಸಚಿವ ಕೈಲಾಶ್ ಚೌಧರಿ

ಈ ಹಿಂದೆ, ಇಸ್ರೇಲ್ ದಾಳಿಯನ್ನು ಖಂಡಿಸುವ ಸಂದರ್ಭದಲ್ಲಿ ಕಾಂಗ್ರೆಸ್ ‘ಪ್ಯಾಲೆಸ್ತೀನ್ ಹಕ್ಕುಗಳಿಗೆ’ ತನ್ನ ಬೆಂಬಲವನ್ನು ವ್ಯಕ್ತಪಡಿಸಿತ್ತು. ಹಮಸ್ ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿಯ ಅಲೆಯನ್ನು ಪ್ರಾರಂಭಿಸಿತು, ನೂರಾರು ಜನರನ್ನು ಕೊಂದಿತು. ಇದು ದಶಕಗಳಲ್ಲಿ ಸಂಘರ್ಷದ ಅತಿದೊಡ್ಡ ಉಲ್ಬಣವಾಗಿದೆ.

ಹಮಸ್ ಹೋರಾಟಗಾರರು ನಡೆಸಿದ ದಾಳಿಯಿಂದ ಇಸ್ರೇಲಿನ 1,300 ಮಂದಿ ಮೃತಪಟ್ಟರೆ, ಇಸ್ರೇಲ್‌ ನಡೆಸಿದ ಪ್ರತಿದಾಳಿಯಲ್ಲಿ ಗಾಜಾದಲ್ಲಿ 2,200 ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಬಿಜೆಪಿ, ಪೊಲೀಸ್ ವ್ಯವಸ್ಥೆ ವಿರುದ್ಧ ಭದ್ರತಾ ಸಿಬ್ಬಂದಿ ಆಕ್ರೋಶ

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ದಮನಕಾರಿ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಭಟನೆ...

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಸಿಪಿಐಎಂ, ಎಸ್‌ಎಫ್‌ಐ ನಾಯಕರು ಮತ್ತು ವಕೀಲರ ಬಂಧನ

ಸಿಜೆಪಿ ಕರೆಕೊಟ್ಟಿರುವ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯ ಜಂತರ್‌ ಮಂತರ್‌ಗೆ ತೆರಳುತ್ತಿದ್ದ...