ಪ್ರಮಾಣ ವಚನ ಸ್ವೀಕರಿಸಿ ‘ಜೈ ಭೀಮ್, ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ

Date:

ಎಐಎಂಐಎಂ ಅಧ್ಯಕ್ಷ ಹಾಗೂ ಹೈದರಾಬಾದ್‌ನ ಸಂಸದ ಅಸಾದುದ್ದೀನ್‌ ಓವೈಸಿ ಅವರು 18ನೇ ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ “ಜೈ ಭೀಮ್, ಜೈ ಮೀಮ್, ಜೈ ಪ್ಯಾಲೆಸ್ತೀನ್” ಎಂದು ಘೋಷಣೆ ಕೂಗಿದ್ದಾರೆ.

- Advertisement -

ಓವೈಸಿ ಅವರು ಐದನೇ ಬಾರಿ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, “ತಾವು ಪ್ರಾಮಾಣಿಕತೆಯಿಂದ ಭಾರತದ ತಳಮಟ್ಟದಲ್ಲಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುವುದನ್ನು ಮುಂದುವರೆಸುತ್ತೇನೆ” ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅಸಾದುದ್ದೀನ್‌ ಓವೈಸಿ ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಬಿಜೆಪಿ ಸಂಸದರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದರು. ಇದಕ್ಕೆ ಯಾವುದೇ ರೀತಿ ಪ್ರತಿಕ್ರಿಯೆ ನೀಡದ ಓವೈಸಿ ಪ್ರಮಾಣ ವಚನ ಸ್ವೀಕರಿಸಿ ಕೊನೆಯಲ್ಲಿ , “ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್‌” ಎಂದು ಘೋಷಣೆ ಕೂಗಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರಿಯ ಸೊಕ್ಕಡಗಿಸಲು ಸಂವಿಧಾನವೇ ಅಸ್ತ್ರ ಮತ್ತು ಗುರಾಣಿ

2019ರಲ್ಲಿಯೂ ಓವೈಸಿ ಪ್ರಮಾಣ ವಚನ ಸ್ವೀಕರಿಸಿದ ನಂತರ “ಜೈ ಭೀಮ್, ಅಲ್ಲಾಹು ಅಕ್ಬರ್ ಹಾಗೂ ಜೈ ಹಿಂದ್‌” ಎಂದು ಘೋಷಣೆ ಕೂಗಿದ್ದರು.

2024ರ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಓವೈಸಿ ಬಿಜೆಪಿಯ ಮಾಧವಿ ಲತಾ ಅವರನ್ನು 3 ಲಕ್ಷಕ್ಕೂ ಅಧಿಕ ಅಂತರದ ಮತಗಳಿಂದ ಸೋಲಿಸಿದ್ದರು.

ಉತ್ತರ ಪ್ರದೇಶದ ಬರೈಲಿ ಲೋಕಸಭಾ ಸದಸ್ಯ ಚತ್ರಪಾಲ್‌ ಸಿಂಗ್‌ ಗಂಗ್ವಾರ್‌ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ “ಜೈ ಹಿಂದೂ ರಾಷ್ಟ್ರ” ಎಂದು ಕೂಗಿದಾಗ ಇಂಡಿಯಾ ಮೈತ್ರಿಕೂಟದ ಸಂಸದರು ವಿರೋಧ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...