ಅಸಾದುದ್ದೀನ್ ಓವೈಸಿ ಮನೆ ಮೇಲೆ ಅಪರಿಚಿತರ ದಾಳಿ; ಎಫ್‌ಐಆರ್‌ ದಾಖಲು

Date:

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿರುವ ತಮ್ಮ ಮನೆಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದಾರೆಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ದೂರು ನೀಡಿದ್ದು, ಅವರ ದೂರಿನ ಮೇರೆಗೆ ದೆಹಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

- Advertisement -

ಬಲಪಂಥೀಯ ಸಂಘಟನೆಗಳ ಸದಸ್ಯರು ಎನ್ನಲಾದ ಕೆಲವು ಅಪರಿಚಿತ ದುಷ್ಕರ್ಮಿಗಳು ಗುರುವಾರ ದೆಹಲಿಯ ಲುಟ್ಯೆನ್‌ನ ಅಶೋಕ ರಸ್ತೆಯಲ್ಲಿರುವ ಸಂಸದ ಅಸಾದುದ್ದೀನ್ ಓವೈಸಿ ಅವರ ನಿವಾಸದ ಹೊರಗಿರುವ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143 (ಕಾನೂನುಬಾಹಿರ ಸಭೆ), 147 (ಗಲಭೆ), 506 (ಅಪರಾಧ ಬೆದರಿಕೆ), ಮತ್ತು 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು) ಅಡಿಯಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ” ಎಂದು ಹಿರಿಯ ದೆಹಲಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಗಮನಾರ್ಹವೆಂದರೆ, ಓವೈಸಿ ಅವರ ಮನೆ ಮೇಲೆ ದಾಳಿ ನಡೆದಿರುವುದು ಇದೇ ಮೊದಲಲ್ಲ. ಈ ಹಿಂದೆಯೂ, ವಾಸ್ತವವಾಗಿ ಹಲವು ಬಾರಿ, ದೆಹಲಿ ಪೊಲೀಸ್ ಪ್ರಧಾನ ಕಚೇರಿ ಎದುರು ಇರುವ ಓವೈಸಿ ನಿವಾಸದ ಮೇಲೆ ಬಲಪಂಥೀಯ ಸಂಘಟನೆಗಳ ಸದಸ್ಯರು ವಿಧ್ವಂಸಕ ಕೃತ್ಯ ನಡೆಸಿದ್ದರು ಎಂದು ವರದಿಯಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ತಮ್ಮ ಟ್ವೀಟ್‌ನಲ್ಲಿ ಟ್ಯಾಗ್ ಮಾಡಿರುವ ಓವೈಸಿ, “ಇದು ನಿಮ್ಮ ಮೇಲ್ವಿಚಾರಣೆಯಲ್ಲಿ ನಡೆಯುತ್ತಿದೆ. ದಯವಿಟ್ಟು ಸಂಸದರ ಸುರಕ್ಷತೆಯನ್ನು ಖಾತರಿಪಡಿಸುತ್ತೀರೋ ಅಥವಾ ಇಲ್ಲವೋ ಎಂಬುದನ್ನು ನಮಗೆ ತಿಳಿಸಿ” ಎಂದು ಪೋಸ್ಟ್ ಮಾಡಿದ್ದಾರೆ.

“ಇಂತಹ ಘಟನೆಗಳಿಗೆ ನಾನು ಹೆದರುವುದಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ ಮತ್ತು ನನ್ನನ್ನು ಎದುರಿಸುವಷ್ಟು ಪುರುಷರಾಗಿರಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಎಸೆದ ನಂತರ ಓಡಿಹೋಗಬೇಡಿ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...