ಅಶೋಕ ವಿವಿ ಅಲಿ ಖಾನ್ ಪ್ರಕರಣ: ದಾರಿ ತಪ್ಪಿದ ಮಗನಾದ ಎಸ್‌ಐಟಿ; ಸುಪ್ರೀಂ ಕೋರ್ಟ್‌ ಕಿಡಿ

Date:

ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಬಳಿಕ ನಡೆದಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ಟೀಕಿಸಿದ್ದರು. ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಯಲ್ಲಿ ಹರಿಯಾಣ ಎಸ್‌ಐಟಿ ಸರಿಯಾದ ಮಾರ್ಗವನ್ನು ಅಳವಡಿಸಿಕೊಳ್ಳದೆ, ‘ತನ್ನನ್ನು ತಾನೇ ದಾರಿ ತಪ್ಪಿಸಿಕೊಂಡಿದೆ’ ಎಂದು ಸುಪ್ರೀಂ ಕೋರ್ಟ್‌ ಕಿಡಿಕಾರಿದೆ.

- Advertisement -

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು, “ಅಲಿ ಖಾನ್ ವಿರುದ್ಧ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದ ಹರಿಯಾಣ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಎಸ್‌ಐಟಿ ಅಲಿ ಖಾನ್ ಅವರ ವಿವಾದಾತ್ಮಕ ಪೋಸ್ಟ್‌ಗಳ ಕುರಿತ ಎರಡು ಎಫ್‌ಐಆರ್‌ಗಳ ಬಗ್ಗೆ ಮಾತ್ರವೇ ತನಿಖೆ ನಡೆಸಬೇಕು. ಆ ಪೋಸ್ಟ್‌ಗಳನ್ನು ಅಪರಾಧದ ಅಂಶಗಳು ಇವೆಯೇ ಎಂಬುದನ್ನು ಪರಿಶೀಲಿಸಬೇಕು. ನಾಲ್ಕು ವಾರಗಳಲ್ಲಿ ತನಿಖಾ ವರದಿಯನ್ನು ಸಲ್ಲಿಸಬೇಕು” ಎಂದು ತಾಕೀತು ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಅಲಿ ಖಾನ್ ಅವರ ಮೊಬೈಲ್ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತನಿಖೆಗಾಗಿ ಎಸ್‌ಐಟಿ ವಶಪಡಿಸಿಕೊಳ್ಳಲು ಯಾವುದೇ ಕಾರಣವಿಲ್ಲ. ಅಲಿ ಖಾನ್ ಅವರು ತನಿಖೆಗೆ ಸಹಕರಿಸುತ್ತಿದ್ದಾರೆ. ಹೀಗಿರುವಾಗ, ಅವರಿಗೆ ಮತ್ತೆ ಸಮನ್ಸ್ ನೀಡುವ ಅಗತ್ಯವಿಲ್ಲ” ಎಂದು ಪೀಠ ಹೇಳಿದೆ.

ಈ ಲೇಖನ ಓದಿದ್ದೀರಾ?: ತಮಿಳು ಚಿತ್ರರಸಿಕರು ಮೆಚ್ಚಿದ ‘ಕನ್ನಡತ್ತು ಪೈಂಕಿಳಿ’ ಬಿ. ಸರೋಜಾದೇವಿ

ಅಲಿ ಖಾನ್ ವಿರುದ್ಧ ಹರಿಯಾಣ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ರೇಣು ಭಾಟಿಯಾ ದೂರು ನೀಡಿದ್ದರು. ಆಪರೇಷನ್ ಸಿಂಧೂರ ಕುರಿತು ಅಲಿ ಖಾನ್ ಮಾಡಿದ್ದ ಪೋಸ್ಟ್‌ ‘ದೇಶದ ಸಾರ್ವಭೌಮತ್ವ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡಿದೆ’ ಎಂದು ಆರೋಪಿಸಿದ್ದರು. ಅವರ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಅಲಿ ಖಾನ್ ಅವರನ್ನು ಮೇ 1ರಂದು ಬಂಧಿಸಿದ್ದರು. ಬಳಿಕ ಜಾಮೀನು ದೊರೆಯಿತ್ತು. ಆದಾಗ್ಯೂ, ಜಾಮೀನು ನೀಡುವ ವೇಳೆ ವಿಧಿಸಲಾಗಿದ್ದ ಹಲವಾರು ಷರತ್ತುಗಳನ್ನು ಮೇ 21ರಂದು ಸುಪ್ರೀಂ ಕೋರ್ಟ್ ಸಡಿಲಗೊಳಿಸಿದೆ. ಸಬ್‌ ಜುಡಿಷಿಯರಿ ಪ್ರಕರಣದ ಕುರಿತಾದ ವಿಷಯಗಳನ್ನು ಹೊರತುಪಡಿಸಿ ಯಾವುದೇ ವಿಚಾರದಲ್ಲಿ ತಮ್ಮ ಅಭಿಪ್ರಾಯಗಳನ್ನು ಪೋಸ್ಟ್‌ಗಳು, ಲೇಖನಗಳ ಮೂಲಕ ವ್ಯಕ್ತಪಡಿಸಲು ಅವಕಾಶವನ್ನೂ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...