ಏಷ್ಯಾದ ಮೊದಲ ಮಹಿಳಾ ‘ಲೋಕೋ ಪೈಲಟ್’ ಸುರೇಖಾ ಯಾದವ್ ನಿವೃತ್ತಿ!

Date:

ಏಷ್ಯಾದ ಮೊದಲ ‘ಲೋಕೋಮೋಟಿವ್ ಪೈಲಟ್’ (ರೈಲು ಚಾಲಕಿ) ಸುರೇಖಾ ಯಾದವ್ ಅವರು ಸೆಪ್ಟೆಂಬರ್ 30ರಂದು ನಿವೃತ್ತರಾಗಲಿದ್ದಾರೆ. ಕಳೆದ 36 ವರ್ಷಗಳಿಂದ ರೈಲ್ವೇ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಸುರೇಖಾ ಅವರು ಸಹೋದ್ಯೋಗಿಗಳು ಗುರುವಾರ ಸಂಜೆ ಸನ್ಮಾನಿಸಿದ್ದಾರೆ. ಅವರ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -

ಸುರೇಖಾ ಅವರ ನಿವೃತ್ತಿ ಬಗ್ಗೆ ರೈಲ್ವೇ ಇಲಾಖೆಯು ಗುರುವಾರ ಮಧ್ಯಾಹ್ನ ಘೋಷಿಸಿತು. “ಏಷ್ಯಾದ ಮೊದಲ ಮಹಿಳಾ ರೈಲು ಚಾಲಕಿ ಸುರೇಖಾ ಯಾದವ್ ಅವರು 36 ವರ್ಷಗಳ ಅದ್ಭುತ ಸೇವೆ ಸಲ್ಲಿಸಿದ್ದು, ಸೆಪ್ಟೆಂಬರ್ 30 ರಂದು ನಿವೃತ್ತರಾಗಲಿದ್ದಾರೆ” ಎಂದು ಟ್ವೀಟ್‌ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಸುರೇಖಾ ಅವರು ನಿಜವಾದ ಮಾರ್ಗದರ್ಶಕಿ. ಅವರು ಎಲ್ಲ ಅಡೆತಡೆಗಳನ್ನು ಮೀರಿ ಸೇವೆ ಸಲ್ಲಿಸಿದ್ದು, ಅಸಂಖ್ಯಾತ ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ. ಗುರಿಮುಟ್ಟದ ಯಾವುದೇ ಕನಸುಗಳಿಲ್ಲ. ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ಸಾಬೀತು ಮಾಡಿದ್ದಾರೆ. ಅವರ ವೃತ್ತಿ ಪ್ರಯಾಣವು ಭಾರತೀಯ ರೈಲ್ವೆಯಲ್ಲಿ ಮಹಿಳಾ ಸಬಲೀಕರಣದ ಸಂಕೇತವಾಗಿ ಶಾಶ್ವತವಾಗಿ ಉಳಿಯುತ್ತದೆ” ಎಂದು ಇಲಾಖೆ ಹೇಳಿದೆ.

ನಿವೃತ್ತಿ ಕುರಿತು ಇಲಾಖೆ ಘೋಷಿಸಿದ ಕೆಲವೇ ಗಂಟೆಗಳಲ್ಲಿ, ದೆಹಲಿಯ ಹಜರತ್ ನಿಜಾಮುದ್ದೀನ್‌ನಿಂದ ಮುಂಬೈನ ಶಿವಾಜಿ ಮಹಾರಾಜ್ ಟರ್ಮಿನಸ್‌ಗೆ ರಾಜಧಾನಿ ಎಕ್ಸ್‌ಪ್ರೆಸ್‌ ಚಲಾಯಿಸಿಕೊಂಡು ಬಂದ ಸುರೇಖಾ ಅವರನ್ನು ಅವರ ಸಹ ರೈಲು ಚಾಲಕರು, ಇಲಾಖೆ ಸಿಬ್ಬಂದಿ ಹಾಗೂ ಕುಟುಂಬದ ಸದಸ್ಯರು ಸನ್ಮಾನಿಸಿದ್ದಾರೆ.

ಉದ್ಯಮಿ, ಮಹೀಂದ್ರಾ ಗ್ರೂಪ್‌ನ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸುರೇಖಾ ಅವರಿಗೆ ಅಭಿನಂದನೆ ಸಲ್ಲಿಸಿ, ಟ್ವೀಟ್ ಮಾಡಿದ್ದಾರೆ. “ದೀರ್ಘ ವೃತ್ತಿಜೀವನದ ಮೂಲಕ ಜನರಿಗೆ ಸೇವೆ ಸಲ್ಲಿಸಿ, ನಿವೃತ್ತಿ ಹೊಂದುತ್ತಿದ್ದೀರಿ. ನಿಮಗೆ ನನ್ನ ಅಭಿನಂದನೆಗಳು. ಅಪ್ರತಿಮ ಬದಲಾವಣೆಗೆ ನಾಂದಿ ಹಾಡಿದ ನಿಮ್ಮಂತಹವರನ್ನು ಗೌರವಿಸುವುದು ಮತ್ತು ನಿಮ್ಮ ಕೊಡುಗೆಗಳನ್ನು ನೆನಪಿಟ್ಟುಕೊಳ್ಳಬೇಕು” ಎಂದು ಹೇಳಿದ್ದಾರೆ.

ಸುರೇಖಾ ಅವರು ಮಹಾರಾಷ್ಟ್ರದ ಸತಾರಾದಲ್ಲಿ ಜನಿಸಿದವರು. ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪಡೆದಿದ್ದಾರೆ. ರೈಲ್ವೇ ಇಲಾಖೆಯಲ್ಲಿ ತರಬೇತಿ ಸಹಾಯಕ ಲೋಕೋ ಪೈಲಟ್ ಆಗಿ ವೃತ್ತಿಜೀವನ ಆರಂಭಿಸಿದ ಅವರು, ಪುರುಷ ಪ್ರಧಾನ ವ್ಯವಸ್ಥೆಯೊಳಗೆ ಎಲ್ಲ ರೀತಿಯ ಅಡೆತಡೆಗಳನ್ನು ದಾಟಿ, ಉನ್ನತ ಸ್ಥಾನಕ್ಕೆ ಬಂದವರು. ಮಾತ್ರವಲ್ಲ, ಸುದೀರ್ಘ ಸೇವೆ ಸಲ್ಲಿಸಿದವರು.

ಏಷ್ಯಾ ಖಂಡದ ಮೊದಲ ಲೋಕೋಮೋಟಿವ್ ಪೈಲಟ್ ಎಂಬ ಹೆಗ್ಗಳಿಕೆಯೂ ಸುರೇಖಾ ಅವರದ್ದು. ತಮ್ಮ ಸಾಧನೆಗಳಿಗಾಗಿ, ಅವರು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಖನೌ ಕೆಫೆ ಮಾಲೀಕನ ಸಾವು ಪ್ರಕರಣ: ರೂಪದರ್ಶಿ ಶ್ರದ್ಧಾ ದುಬೆ ಬಂಧನ

​ಲಖನೌದ ಕೆಫೆ ಮಾಲೀಕ ಶಿವ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ...

ಏಷ್ಯನ್ ಪ್ಯಾರಾ ಗೇಮ್ಸ್‌ | 192 ಕೆಜಿ ಭಾರ ಎತ್ತಿ ಬೆಳ್ಳಿ ಗೆದ್ದ ಅಶೋಕ್ ಮಲಿಕ್

ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 65 ಕೆಜಿ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...

ಪ್ರಧಾನಿ ಮೋದಿಗೆ ಎರಡು ಪತ್ರಗಳನ್ನು ಬರೆದು, ಮೂರು ಮುಖ್ಯ ಕಳವಳ ವ್ಯಕ್ತಪಡಿಸಿದ ಖರ್ಗೆ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಮಾತನಾಡುತ್ತಾ, ಚುನಾವಣಾ ಪಟ್ಟಿಯಲ್ಲಿ...