​’ಅಪ್ಪ ಎಲ್ಲಿದ್ದಾರೆಂದು ನಿಮ್ಮ ತಾಯಿಯನ್ನು ಕೇಳಿ’: ಸಿಎಂ ವಿಜಯ್ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷನ ವಿವಾದಾತ್ಮಕ ಹೇಳಿಕೆ

Date:

‘ತಮ್ಮ ತಂದೆ ಎಲ್ಲಿದ್ದಾರೆ ಎಂಬುದನ್ನು ವಿಧಾನಸಭೆಯಲ್ಲಿ ಹುಡುಕುವ ಬದಲು, ಮನೆಗೆ ಹೋಗಿ ತಾಯಿಯನ್ನು ಕೇಳಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಗುರಿಯಾಗಿಸಿಕೊಂಡು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಹೊಸ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

- Advertisement -

​ಶನಿವಾರ ಬಿಜೆಪಿ ರಾಜ್ಯ ಕೇಂದ್ರ ಕಚೇರಿ ‘ಕಮಲಾಲಯಂ’ನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಾಗೇಂದ್ರನ್, ನಟನೆಯಿಂದ ರಾಜಕೀಯಕ್ಕೆ ಬಂದು ಮುಖ್ಯಮಂತ್ರಿಯಾಗಿರುವ ವಿಜಯ್ ಅವರು ಈ ಹಿಂದೆ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರನ್ನು ಗುರಿಯಾಗಿಸಿಕೊಂಡು ಹೇಳಿದ್ದ ‘ಕುಟ್ಟಿ ಕಥೈ’ (ಸಣ್ಣ ಕಥೆ) ಗೆ ತಾವು ಈ ತಿರುಗೇಟು ನೀಡುತ್ತಿರುವುದಾಗಿ ಸಮರ್ಥಿಸಿಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

​ಏಪ್ರಿಲ್ 2026ರ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಸೋಲು ಅನುಭವಿಸಿದ ಬಳಿಕ, ಮುಖ್ಯಮಂತ್ರಿ ವಿಜಯ್ ಅವರು ವಿಧಾನಸಭೆಯಲ್ಲಿ ‘ಕುಟ್ಟಿ ಕಥೈ’ ಒಂದನ್ನು ಹೇಳಿದ್ದರು. ಕೊಳತ್ತೂರು ಕ್ಷೇತ್ರದಲ್ಲಿ ಎಂ.ಕೆ. ಸ್ಟಾಲಿನ್ ಅವರ ಸೋಲನ್ನು ಪರೋಕ್ಷವಾಗಿ ಉಲ್ಲೇಖಿಸಿದ್ದ ವಿಜಯ್, ‘ಉದಯನಿಧಿ ಸ್ಟಾಲಿನ್ ಅವರ ತಂದೆ (ಎಂ.ಕೆ.ಸ್ಟಾಲಿನ್) ಎಲ್ಲಿದ್ದಾರೆ?’ ಎಂದು ಹಾಸ್ಯದ ದಾಟಿಯಲ್ಲಿ ವ್ಯಂಗ್ಯವಾಡಿದ್ದರು.

​ಸಿಎಂ ವಿಜಯ್ ಅವರ ವಿಧಾನಸಭೆಯಲ್ಲಿನ ಇದೇ ಹೇಳಿಕೆಯನ್ನು ಅಣಕಿಸಿರುವ ನೈನಾರ್ ನಾಗೇಂದ್ರನ್, ‘ಅಪ್ಪ ಎಲ್ಲಿದ್ದಾರೆ ಎಂದು ವಿಧಾನಸಭೆಯಲ್ಲಿ ಕೇಳಿದರೆ ಉತ್ತರ ಸಿಗುವುದಿಲ್ಲ, ಬದಲಾಗಿ ಮನೆಗೆ ಹೋಗಿ ತಮ್ಮ ತಾಯಿಯನ್ನು ಕೇಳಬೇಕು’ ಎಂದು ವೈಯಕ್ತಿಕ ನಿಂದನೆ ಮಾಡಿದ್ದಾರೆ. ಅಂದು ಸಿಎಂ ವಿಜಯ್ ಅವರ ಹೇಳಿಕೆಯನ್ನು ಡಿಎಂಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಟೀಕಿಸಿದ್ದವು. ವಿಜಯ್ ಅವರ ವ್ಯಂಗ್ಯಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸ್ಟಾಲಿನ್, ‘ನಾನು ಶಾಸಕಾಂಗದಲ್ಲಿ ಇಲ್ಲದಿದ್ದರೂ ಜನರ ಹೃದಯದಲ್ಲಿ ನೆಲೆಸಿದ್ದೇನೆ’ ಎಂದು ಹೇಳಿದ್ದರು.

ಬಿಜೆಪಿ ರಾಜ್ಯಾಧ್ಯಕ್ಷರ ಈ ಹೇಳಿಕೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸಚಿವ ಎ. ರಾಜ್‌ಮೋಹನ್ ಮಾತ್ರವಲ್ಲದೆ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.​ನಾಗೇಂದ್ರನ್ ಅವರ ಹೇಳಿಕೆಯನ್ನು ‘ಅನಾಗರಿಕ ಮತ್ತು ಅನುಚಿತ’ ಎಂದು ಕರೆದಿರುವ ರಾಜ್ಯ ಸಚಿವ ಎ. ರಾಜ್‌ಮೋಹನ್, ‘ಎಷ್ಟೇ ಪ್ರಚೋದನೆಗಳು ಅಥವಾ ವೈಯಕ್ತಿಕ ದಾಳಿಗಳು ಎದುರಾದರೂ ರಾಜಕೀಯ ಶಿಷ್ಟಾಚಾರವನ್ನು ಕಾಪಾಡಿಕೊಳ್ಳುವಂತೆ ಸಿಎಂ ವಿಜಯ್ ಅವರು ತಮ್ಮ ಸಹೋದ್ಯೋಗಿಗಳಿಗೆ ಸದಾ ಕಟ್ಟುನಿಟ್ಟಿನ ಸೂಚನೆ ನೀಡುತ್ತಲೇ ಬಂದಿದ್ದಾರೆ’ ಎಂದು ಹೇಳಿದ್ದಾರೆ.

​ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಕೂಡ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ಇದು ರಾಜಕೀಯ ಸಭ್ಯತೆಯ ಮಿತಿಗಳನ್ನು ಮೀರಿದೆ ಎಂದಿದ್ದಾರೆ. ‘ಸರ್ಕಾರವನ್ನು ಪ್ರಶ್ನಿಸುವುದು ಮತ್ತು ರಾಜಕೀಯ ಭಿನ್ನಾಭಿಪ್ರಾಯ ಹೊಂದುವುದು ಪ್ರಜಾಸತ್ತಾತ್ಮಕ ಪ್ರಕ್ರಿಯೆಯ ನ್ಯಾಯಸಮ್ಮತ ಭಾಗವಾಗಿದೆ. ಆದರೆ ನಾಯಕರೊಬ್ಬರ ಕುಟುಂಬ, ಅದರಲ್ಲೂ ವಿಶೇಷವಾಗಿ ಅವರ ತಾಯಿಯನ್ನು ಎಳೆತಂದು ಮಾಡುವ ವೈಯಕ್ತಿಕ ನಿಂದನೆಗಳು ಎಂದಿಗೂ ಸ್ವೀಕಾರಾರ್ಹವಲ್ಲ. ಇದು ಅತ್ಯಂತ ಕೀಳು ಮಟ್ಟದ ರಾಜಕೀಯವಾಗಿದ್ದು, ಯುವ ಪೀಳಿಗೆಯೆದುರು ಇಂತಹ ರಾಜಕೀಯವನ್ನು ಎಂದಿಗೂ ಪ್ರೋತ್ಸಾಹಿಸಬಾರದು’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...

ಮಹಿಳೆಯರಿಲ್ಲದ ಸಂಪುಟ; ಮಾತು ತಪ್ಪಿತೇ ಕಾಂಗ್ರೆಸ್?

ರಾಜ್ಯದ ಮಹಿಳೆಯರು ಜನಸಂಖ್ಯೆಯಲ್ಲಿ ಸರಿಸುಮಾರು ಅರ್ಧದಷ್ಟಿದ್ದರೂ, ಅಧಿಕಾರದ ವಿಚಾರ ಬಂದಾಗ ಅವರು...

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...