ಎಎಸ್‌ಒ ಪ್ರಶ್ನೆ ಪತ್ರಿಕೆ ಸೋರಿಕೆ; 14 ಆರೋಪಿಗಳ ಜಾಮೀನು ಅರ್ಜಿ ವಜಾ: ಒಡಿಶಾ ಹೈಕೋರ್ಟ್

Date:

ಒಡಿಶಾ ಹೈಕೋರ್ಟ್‌ನ ಸಹಾಯಕ ವಿಭಾಗೀಯ ಅಧಿಕಾರಿ (ASO) ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ 14 ಜಾಮೀನು ಅರ್ಜಿಗಳನ್ನು ಒಡಿಶಾ ಹೈಕೋರ್ಟ್ ವಜಾಗೊಳಿಸಿದೆ. “ಈ ರೀತಿಯ ಸಾರ್ವಜನಿಕ ನೇಮಕಾತಿ ಪರೀಕ್ಷೆಗಳ ಅಕ್ರಮಗಳು ಕೇವಲ ಸಾಮಾನ್ಯ ಅಪರಾಧವಲ್ಲ, ಬದಲಿಗೆ ಇಡೀ ಸಮಾಜದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯ ಮೇಲಿನ ದಾಳಿಯಾಗಿದೆ” ಎಂದು ನ್ಯಾಯಾಲಯ ಕಳವಳ ವ್ಯಕ್ತಪಡಿಸಿದೆ.

- Advertisement -

ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ಸತ್ಪತಿ ಅವರ ಏಕಸದಸ್ಯ ಪೀಠವು, “ಪರೀಕ್ಷೆ ರದ್ದತಿಯಿಂದಾಗಿ ಸಾವಿರಾರು ಅರ್ಹ ಮತ್ತು ಪ್ರತಿಭಾವಂತ ಅಭ್ಯರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾರ್ವಜನಿಕ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳು ಅತ್ಯಂತ ಉನ್ನತ ಮಟ್ಟದ ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಹೊಂದಿರಬೇಕಾದುದು ಅನಿವಾರ್ಯ. ಹೀಗಿರುವಾಗ, ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡಿ, ಅಭ್ಯರ್ಥಿಗಳಿಗೆ ಮಾದರಿ ಉತ್ತರ ಪತ್ರಿಕೆಗಳನ್ನು ಒದಗಿಸುವ ಮೂಲಕ ಪರೀಕ್ಷಾ ವ್ಯವಸ್ಥೆಯನ್ನೇ ಬುಡಮೇಲು ಮಾಡುವುದು ಅರ್ಹ ಅಭ್ಯರ್ಥಿಗಳ ನೈತಿಕ ಸ್ಥೈರ್ಯವನ್ನು ನಾಶ ಮಾಡುತ್ತದೆ. ಇದು ಸಮಾಜದ ವಿರುದ್ಧ ಎಸಗಿದ ದ್ರೋಹವಾಗಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ತನಿಖೆಯ ಸಂದರ್ಭದಲ್ಲಿ ಆರೋಪಿಗಳ ಮೊಬೈಲ್ ಫೋನ್‌ಗಳು, ಹಾರ್ಡ್ ಡಿಸ್ಕ್‌ಗಳು, ಎಲೆಕ್ಟ್ರಾನಿಕ್ ಉಪಕರಣಗಳು, ಹಣಕಾಸು ವಹಿವಾಟಿನ ದಾಖಲೆಗಳು ಹಾಗೂ ಅಭ್ಯರ್ಥಿಗಳ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನ್ಯಾಯಾಲಯ ಗಮನಿಸಿದೆ. “ಪರೀಕ್ಷೆ ನಡೆಸುವ ಜವಾಬ್ದಾರಿ ಹೊತ್ತಿದ್ದ ಸಂಸ್ಥೆಯ ನಿರ್ದೇಶಕರೇ ಈ ಜಾಲದಲ್ಲಿ ಭಾಗಿಯಾಗಿರುವುದು ಸಂಸ್ಥೆಯ ಮೇಲಿನ ಸಾರ್ವಜನಿಕರ ನಂಬಿಕೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಲಕ್ಷಾಂತರ ಪ್ರಾಮಾಣಿಕ ಅಭ್ಯರ್ಥಿಗಳ ಉದ್ಯೋಗದ ಅವಕಾಶವನ್ನು ಇಂತಹ ಜಾಲಗಳು ಕಸಿದುಕೊಳ್ಳುತ್ತಿದ್ದು, ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಈ ಲೇಖನ ಓದಿದ್ದೀರಾ?: ಕಾಡಿನಿಂದ ಕಡಲಾಚೆಗೆ : ಅಲೆಮಾರಿ ಹಕ್ಕಿಪಿಕ್ಕಿ ಜನಾಂಗ ವಿದೇಶಗಳಲ್ಲಿ ಸಿಕ್ಕಿಬೀಳುತ್ತಿರುವುದು ಯಾಕೆ?

2025ರಲ್ಲಿ ಒಡಿಶಾ ಹೈಕೋರ್ಟ್ ಒಟ್ಟು 147 ಎಎಸ್‌ಒ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿತ್ತು. ಇದಕ್ಕಾಗಿ ಸುಮಾರು 32,000ಕ್ಕೂ ಹೆಚ್ಚು ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ನಡೆಸುವ ಜವಾಬ್ದಾರಿಯನ್ನು ಭುವನೇಶ್ವರ ಮೂಲದ ‘ಸಿಲಿಕಾನ್ ಟೆಕ್ಲ್ಯಾಬ್ ಪ್ರೈವೇಟ್ ಲಿಮಿಟೆಡ್’ ಎಂಬ ಖಾಸಗಿ ಸಂಸ್ಥೆಗೆ ವಹಿಸಲಾಗಿತ್ತು. ಪೂರ್ವಭಾವಿ ಪರೀಕ್ಷೆಯ ನಂತರ ಒಟ್ಟು 7,113 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದಿದ್ದರು. ಆದರೆ, ಪರೀಕ್ಷಾ ಪ್ರಕ್ರಿಯೆಯ ಪರಿಶೀಲನೆ ನಡೆಸುವಾಗ ಬೃಹತ್ ಮಟ್ಟದ ಅಕ್ರಮಗಳು ನಡೆದಿರುವುದು ಬೆಳಕಿಗೆ ಬಂದಿತ್ತು.

ಈ ಬೆನ್ನಲ್ಲೇ, ಪರೀಕ್ಷಾ ಸಂಸ್ಥೆಯ ಅಧಿಕಾರಿಗಳು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ತನಿಖೆಯಲ್ಲಿ; ಆರೋಪಿಗಳು ಕ್ರಿಮಿನಲ್ ಸಂಚು ರೂಪಿಸಿ, ಹಣದ ಆಮಿಷಕ್ಕೆ ಒಳಗಾಗಿ ಪರೀಕ್ಷೆಗೆ ಮುನ್ನವೇ ಪ್ರಶ್ನೆ ಪತ್ರಿಕೆ ಮತ್ತು ಮಾದರಿ ಉತ್ತರಗಳನ್ನು ಕೆಲವು ಅಭ್ಯರ್ಥಿಗಳಿಗೆ ತಲುಪಿಸಿರುವುದು ದೃಢಪಟ್ಟಿತ್ತು. ಅಕ್ರಮದ ಹಿನ್ನೆಲೆಯಲ್ಲಿ ಮುಖ್ಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಆರೋಪಿಗಳನ್ನು ಬಂಧಿಸಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...