ಅಸ್ಸಾಂ | ಕಲ್ಲಿದ್ದಲು ಗಣಿಯಲ್ಲಿ ಸಿಲುಕಿದ 9 ಕಾರ್ಮಿಕರ ಪೈಕಿ ಒಬ್ಬರ ಮೃತದೇಹ ಪತ್ತೆ

Date:

ಅಸ್ಸಾಂನ ದಿಮಾ ಹಸಾವೊ ಜಿಲ್ಲೆಯಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಪ್ರವಾಹ ಉಂಟಾಗಿ ಗಣಿಯಲ್ಲಿ ಸಿಲುಕಿರುವ ಒಟ್ಟು ಒಂಬತ್ತು ಕಾರ್ಮಿಕರ ಪೈಕಿ ಓರ್ವ ಕಾರ್ಮಿಕರ ಮೃತದೇಹ ಪತ್ತೆಯಾಗಿದೆ. ಇನ್ನು ಈಗಾಗಲೇ ಮೂವರ ಮೃತದೇಹವನ್ನು ರಕ್ಷಣಾ ತಂಡ ನೋಡಿರುವುದಾಗಿ, ಆದರೆ ಮೇಲೆತ್ತಲು ಸಾಧ್ಯವಾಗದಿರುವುದಾಗಿ ವರದಿಯಾಗಿದೆ.

- Advertisement -

ಈ ದುರ್ಘಟನೆ ನಡೆದು ಮೂರು ದಿನವಾದ ಬಳಿಕ ಬುಧವಾರ ಮೃತದೇಹವನ್ನು ಮೇಲಕ್ಕೆತ್ತಲಾಗಿದೆ. ನೌಕಾಪಡೆ, ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿಯ ತಂಡ ಗಣಿಗಾರರನ್ನು ರಕ್ಷಿಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಒಟ್ಟು ಎಂಟು ಮಂದಿ ಬದುಕುಳಿಯುವ ಸಾಧ್ಯತೆ ಕಡಿಮೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಅಸ್ಸಾಂ ಗಣಿ ಪ್ರವಾಹದಲ್ಲಿ ಸಿಲುಕಿದ 9 ಕಾರ್ಮಿಕರು; ಮೂವರ ಸಾವು ಶಂಕೆ

ಮುಂಜಾನೆಯೇ ಈಜು ತಜ್ಞರು ಮೃತದೇಹವನ್ನು ಗಣಿಯಲ್ಲಿ ಪತ್ತೆ ಹಚ್ಚಿದ್ದು, ಅದರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದಾದ ಬಳಿಕ 21 ಪ್ಯಾರಾ ಡೈವರ್‌ಗಳು ತಳದಿಂದ ದೇಹವನ್ನು ಹೊರತೆಗೆದಿದ್ದಾರೆ ಎನ್ನಲಾಗಿದೆ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, “ದುಃಖಿತ ಕುಟುಂಬಕ್ಕೆ ನಮ್ಮ ಸಂತಾಪ ಮತ್ತು ಪ್ರಾರ್ಥನೆ ಸಲ್ಲಿಸುತ್ತೇವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸೇನೆ ಮತ್ತು ಎನ್‌ಡಿಆರ್‌ಎಫ್‌ನ ಡೈವರ್‌ಗಳು ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರಕ್ಷಣಾ ತಂಡಗಳು ರಾತ್ರಿಯಿಡೀ ಕಾರ್ಮಿಕರ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ಮುಂದುವರೆದಿದೆ. ಮೂರು ಮೃತದೇಹಗಳನ್ನು ರಕ್ಷಣಾ ತಂಡಗಳು ಗುರುತಿಸಿವೆ. ಆದರೆ ಇನ್ನೂ ಗಣಿಯಿಂದ ಹೊರತರಲು ಸಾಧ್ಯವಾಗಿಲ್ಲ ಎಂದು ಸ್ಥಳೀಯ ಆಡಳಿತ ಹೇಳಿಕೆಯಲ್ಲಿ ತಿಳಿಸಿದೆ.

ಗಣಿಯಲ್ಲಿ ಕಾರ್ಮಿಕರಿಗೆ ಯಾವುದೇ ರಕ್ಷಣೆ ಇಲ್ಲದೆ ಸಾವನ್ನಪ್ಪಿರುವ ಘಟನೆಗಳು ನಡೆಯುತ್ತಲೇ ಇವೆ. ಅದರಲ್ಲೂ ಅದೆಷ್ಟೋ ಅಕ್ರಮ ಗಣಿಯಲ್ಲಿ ಸಿಲುಕಿ ಜೀವ ಕಳೆದುಕೊಂಡಿರುವ ಕಾರ್ಮಿಕರ ಲೆಕ್ಕವೇ ಇಲ್ಲದಂತಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...