ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

Date:

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ ಆರೋಪ-ಪ್ರತ್ಯಾರೋಪಗಳು ವಿಚಿತ್ರ ರೂಪ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಮತ್ತು ಧುಬ್ರಿ ಕ್ಷೇತ್ರದ ಕಾಂಗ್ರೆಸ್ ಸಂಸದ ರಕಿಬುಲ್ ಹುಸೇನ್ ನಡುವಿನ ವಾಕ್ಸಮರ ಈಗ ‘ಬಿರಿಯಾನಿ’ ಹಾಗೂ ‘ರಸ್ಕ್’ ಚರ್ಚೆಯಾಗಿ ಬದಲಾಗಿದೆ.

- Advertisement -

ಪ್ರಚಾರ ಭಾಷಣದ ವೇಳೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ಕಾಂಗ್ರೆಸ್ ನಾಯಕ ರಕಿಬುಲ್ ಹುಸೇನ್ ಅವರನ್ನು ಪೌರಾಣಿಕ ಕಥೆಯ ರಾಕ್ಷಸ ‘ಬಕಾಸುರ’ನಿಗೆ ಹೋಲಿಸಿದ್ದರು. ಹುಸೇನ್ ಅವರು ಸರ್ಕಾರಿ ಯೋಜನೆಗಳ ಹಣವನ್ನು ನುಂಗಿ ಹಾಕುತ್ತಿದ್ದಾರೆ ಎಂದು ಶರ್ಮಾ ಟೀಕಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ರಾಜಕೀಯದಲ್ಲಿ ಮಹಿಳೆಯರ ಮೇಲೆ ಗಂಡಾಳ್ವಿಕೆಯ ಸಾಂಸ್ಕೃತಿಕ ರಾಜಕಾರಣ

ರಾಜಕೀಯದ ಮೇಲೆ ಪುರುಷ ಪ್ರಧಾನ ಹಿಡಿತ ಹೇಗೆ ನಿರ್ಮಾಣವಾಯಿತು? ರಾಜಕೀಯವೆಂದರೆ, ಜನರ ಬದುಕಿನ ಮೇಲೆ ನಿರ್ಧಾರ ತೆಗೆದುಕೊಳ್ಳುವ ಸಾರ್ವಜನಿಕ ಕ್ಷೇತ್ರ. ಆದರೆ ಶತಮಾನಗಳ ಕಾಲ ನಮ್ಮ ಸಾಮಾಜಿಕ ಮತ್ತು ಸಾಂಸ್ಕೃತಿಕ ವ್ಯವಸ್ಥೆ ಅದನ್ನು...

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ...

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು ಉಸಿರುಗಟ್ಟಿಸಲು ಅಲ್ಲ. ಒಬ್ಬ ಐಟಿ ಅಧಿಕಾರಿಯ ವಿವೇಚನಾರಹಿತ ನಿರ್ಧಾರಗಳು ಹಾಗೂ ಅದಕ್ಕೆ ಕುಮ್ಮಕ್ಕು ನೀಡುತ್ತಿರುವ ಸಾಂಸ್ಥಿಕ ಮೌನವು ಇಡೀ ಚುನಾವಣಾ...

ಇದನ್ನೂ ಓದಿ: ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ಇದಕ್ಕೆ ವ್ಯಂಗ್ಯವಾಗಿ ತಿರುಗೇಟು ನೀಡಿದ್ದ ಸಂಸದ ರಕಿಬುಲ್ ಹುಸೇನ್, “ದೇವರು ನನ್ನನ್ನು ಬಿರಿಯಾನಿ ತಿನ್ನಲೆಂದೇ ಭೂಮಿಗೆ ಕಳುಹಿಸಿದ್ದಾನೆ. ಬಿರಿಯಾನಿ ತಿನ್ನಲು ಅಗತ್ಯವಿರುವಷ್ಟು ಹಣವನ್ನೂ ಕೊಟ್ಟಿದ್ದಾನೆ” ಎಂದು ಹೇಳಿದ್ದರು. ಮಗು ಹುಟ್ಟಿದಾಗ ತಾಯಿಯ ಹಾಲು ಕುಡಿಯುತ್ತದೆ, ಆದರೆ ನಾನು ಹುಟ್ಟುತ್ತಲೇ ಚಿಕನ್ ಬಿರಿಯಾನಿ ತಿಂದವನು. ಅಲ್ಲದೆ, ಸಾಮಾನ್ಯ ಚಹಾ ಜೊತೆ ತಿನ್ನುವ ‘ರಸ್ಕ್’ ತಿನ್ನುವವರಿಗೆ ಬಿರಿಯಾನಿ ಮತ್ತು ಪುಲಾವ್ ನಡುವಿನ ವ್ಯತ್ಯಾಸ ತಿಳಿಯುವುದಿಲ್ಲ ಎಂದು ವ್ಯಂಗ್ಯವಾಡಿದ್ದರು.

ಹುಸೇನ್ ಹೇಳಿಕೆಗೆ ನಗಾಂವ್‌ನ ಪ್ರಚಾರ ಸಭೆಯಲ್ಲಿ ತೀವ್ರವಾಗಿ ಪ್ರತಿಕ್ರಿಯಿಸಿದ ಸಿಎಂ ಹಿಮಂತ ಶರ್ಮಾ, “ತಾಯಿಯ ಹಾಲು ಕುಡಿಯಲು ಹುಟ್ಟಿದವರು ಮನುಷ್ಯರು, ಬಿರಿಯಾನಿ ತಿನ್ನಲೆಂದೇ ಹುಟ್ಟಿದೆ ಎನ್ನುವವರು ಪ್ರಾಣಿಗಳು” ಎಂದು ಕಟುವಾಗಿ ವಾಗ್ದಾಳಿ ನಡೆಸಿದರು. ಈ ಹೇಳಿಕೆಯು ಅಸ್ಸಾಂ ರಾಜಕೀಯ ವಲಯದಲ್ಲಿ ದೊಡ್ಡ ವಿವಾದವನ್ನೇ ಸೃಷ್ಟಿಸಿದೆ.

ಈ ಇಬ್ಬರ ವಾಕ್ಸಮರದ ನಡುವೆ ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಕೂಡ ಜಿಗಿದಿದ್ದು, ರಕಿಬುಲ್ ಹುಸೇನ್ ಬಡತನದಿಂದ ಬಂದವರು, ಅವರು ಬಿರಿಯಾನಿ ತಿಂದಲ್ಲ, ಒಣ ಮೀನು ತಿಂದು ಬೆಳೆದವರು ಎಂದು ಲೇವಡಿ ಮಾಡಿದ್ದಾರೆ.

ನಗಾಂವ್ ಕ್ಷೇತ್ರದ ಸಂಸದರಾಗಿದ್ದ ಪ್ರದ್ಯುತ್ ಬೋರ್ಡೋಲೋಯ್ ಅವರು ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಈ ಸ್ಥಾನ ತೆರವಾಗಿದೆ. ಅಕ್ಟೋಬರ್ 6ರಂದು ನಗಾಂವ್ ಕ್ಷೇತ್ರದ ಉಪಚುನಾವಣೆಗೆ ಮತದಾನ ನಡೆಯಲಿದ್ದು, ಅಕ್ಟೋಬರ್ 9ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ, ಕಾಂಗ್ರೆಸ್ ಹಾಗೂ ಎಐಯುಡಿಎಫ್ ನಡುವೆ ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಫ್ಟ್‌ವೇರ್ ಕೈಗೊಂಬೆಯಾದ ಚುನಾವಣಾ ವ್ಯವಸ್ಥೆ: ದೆಹಲಿಯಿಂದಲೇ ಇಡೀ ದೇಶದ ಮತದಾರರ ಪಟ್ಟಿ ನಿಯಂತ್ರಣ!

ತಂತ್ರಜ್ಞಾನವು ಚುನಾವಣಾ ಪ್ರಕ್ರಿಯೆಯನ್ನು ಸುಲಭ ಮತ್ತು ಪಾರದರ್ಶಕಗೊಳಿಸಲು ಇರಬೇಕೇ ವಿನಃ, ಪ್ರಜಾಪ್ರಭುತ್ವವನ್ನು...

ಸೊರಬ | ಸ್ಥಳದಲ್ಲೇ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

ಸೊರಬ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ಔರಾದ್ | ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ರವಿ ಡೋಳೆ ಆಯ್ಕೆ

ಕರ್ನಾಟಕ ರಾಜ್ಯ ಪದವೀಧರ ಪ್ರಾಥಮಿಕ ಶಿಕ್ಷಕರ‌ (6ರಿಂದ 8ನೇ) ಸಂಘದ ಔರಾದ್...