ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಭುಯಾನ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಹಿರಿಯ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಹಿಂದೆ ಜಾಮೀನು ವಿಸ್ತರಿಸಲು ಗುವಾಹಟಿ ಹೈಕೋರ್ಟ್‌ನ ನಿರಾಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಖೇರಾ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠವು ಜಾಮೀನು ನೀಡಿದೆ.
ಇದನ್ನು ಓದಿದ್ದೀರಾ? ‘ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ’: ಸುಪ್ರೀಂ ಅಂಗಳದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ವಾದ
ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಣಿಕಿ ಶರ್ಮಾ ಅವರ ಬಳಿ ಮೂರು ದೇಶಗಳ ಪಾಸ್‌ಪೋರ್ಟ್‌ಳಿವೆ. ವಿದೇಶಗಳಲ್ಲಿ ಗಮನಾರ್ಹ ಆಸ್ತಿಯನ್ನು ಹೊಂದಿದ್ದಾರೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಇತ್ತೀಚೆಗೆ ಆರೋಪಿಸಿದ್ದರು. ಈ ಆರೋಪವು ಅಸ್ಸಾಂನಲ್ಲಿ ರಾಜಕೀಯ ವಿವಾದ ಸೃಷ್ಟಿಸಿತ್ತು.




