ಅಖಿಲ್ ಗೋಗೊಯ್ ಜೊತೆ ಕಾಂಗ್ರೆಸ್ ಮೈತ್ರಿ ಅಂತ್ಯ

Date:

‘ಮೈತ್ರಿ ಧರ್ಮ’ ಉಲ್ಲಂಘಿಸಿದ ಹಾಗೂ ಮೈತ್ರಿಕೂಟದ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಂಡ ಆರೋಪದ ಮೇಲೆ, ಅಸ್ಸಾಂನಲ್ಲಿ ಅಖಿಲ್ ಗೊಗೊಯ್ ನೇತೃತ್ವದ ಪ್ರಾದೇಶಿಕ ಪಕ್ಷ ‘ರೈಜೋರ್ ದಳ’ದೊಂದಿಗಿನ ರಾಜಕೀಯ ಮೈತ್ರಿಯನ್ನು ಕಾಂಗ್ರೆಸ್ ಇಂದು (ಸೆ. 3) ಅಧಿಕೃತವಾಗಿ ಕಡಿದುಕೊಂಡಿದೆ. ಉಭಯ ಪಕ್ಷಗಳ ನಡುವೆ ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಾರ್ವಜನಿಕ ಆರೋಪ-ಪ್ರತ್ಯಾರೋಪಗಳ ಬೆನ್ನಲ್ಲೇ ಕಾಂಗ್ರೆಸ್ ಈ ಕಠಿಣ ನಿರ್ಧಾರ ಕೈಗೊಂಡಿದೆ.

- Advertisement -

ಲೋಕಸಭೆಯ ವಿಪಕ್ಷ ಉಪನಾಯಕ ಹಾಗೂ ಅಸ್ಸಾಂ ಪ್ರದೇಶ ಕಾಂಗ್ರೆಸ್ ಸಮಿತಿ (APCC) ಅಧ್ಯಕ್ಷ ಗೌರವ್ ಗೊಗೊಯ್ ಅವರ ಸೂಚನೆಯ ಮೇರೆಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಮೈತ್ರಿಯನ್ನು ರದ್ದುಗೊಳಿಸಲಾಗಿದೆ. ಈ ಕುರಿತಾದ ಸಾಂಸ್ಥಿಕ ಸುತ್ತೋಲೆಯನ್ನು ಎಪಿಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ರಮಣ್ಣ ಬರುವಾ ಅವರು ಬಿಡುಗಡೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕೋಮುವಾದಿ ಶಕ್ತಿಗಳ ವಿರುದ್ಧ ಒಗ್ಗಟ್ಟಿನ ಹೋರಾಟ ನಡೆಸಲು, ಕಳೆದ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳಿಗೂ ಮುನ್ನ ಎಡಪಕ್ಷಗಳು ಮತ್ತು ರೈಜೋರ್ ದಳ ಸೇರಿದಂತೆ ವಿವಿಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ವಿರೋಧ ಪಕ್ಷಗಳ ಮೈತ್ರಿಕೂಟವನ್ನು ರಚಿಸಲಾಗಿತ್ತು. ಆದರೆ, ರೈಜೋರ್ ದಳದ ನಾಯಕರು ಸುಳ್ಳು ಪ್ರಚಾರ ಹಾಗೂ ವೈಯಕ್ತಿಕ ನಿಂದನೆಗಳ ಮೂಲಕ ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷವನ್ನೇ ಗುರಿಯಾಗಿಸಿಕೊಂಡಿದ್ದರು. ಅಲ್ಲದೆ, ಮೈತ್ರಿಕೂಟದ ಇತರೆ ಪಕ್ಷಗಳ ನಾಯಕರ ವಿರುದ್ಧವೂ ಆಧಾರರಹಿತ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದರು. ನಿರಂತರವಾಗಿ ಮೈತ್ರಿಕೂಟದ ಮೂಲ ತತ್ವಗಳನ್ನೇ ಬುಡಮೇಲು ಮಾಡಿರುವ ಕಾರಣ ಅವರೊಂದಿಗೆ ಮೈತ್ರಿ ಮುಂದುವರಿಸುವುದು ಅಸಾಧ್ಯವಾಗಿದೆ ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಕಳೆದ ಭಾನುವಾರವಷ್ಟೇ ಎಪಿಸಿಸಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಅಖಿಲ್ ಗೊಗೊಯ್ ಅವರ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸಿತ್ತು. ಅಸ್ಸಾಂ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮೀರಾ ಬೋರ್ತಕೂರ್ ಹಾಗೂ ಎಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ಬೆದಬ್ರತ್ ಬೋರಾ ಅವರು, ಅಖಿಲ್ ಗೊಗೊಯ್ ಅವರನ್ನು ‘ಸರ್ಕಾರದ ಏಜೆಂಟ್’ ರೀತಿಯಲ್ಲಿ ವರ್ತಿಸುತ್ತಿದ್ದಾರೆ ಎಂದು ಎಚ್ಚರಿಸಿದ್ದರು. ಇದೇ ವೇಳೆ, ಪ್ರವಾಹ ಪರಿಹಾರ ಕಾರ್ಯಗಳಲ್ಲಿ ಗೌರವ್ ಗೊಗೊಯ್ ಹಾಗೂ ಮಾಜಿ ವಿಪಕ್ಷ ನಾಯಕ ದೇಬಬ್ರತ ಸೈಕಿಯಾ ನಿರತರಾಗಿದ್ದಾರೆ ಎಂದು ಬೋರಾ ತಮ್ಮ ನಾಯಕರನ್ನು ಸಮರ್ಥಿಸಿಕೊಂಡಿದ್ದರು.

ಶಿವಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಖಿಲ್ ಗೊಗೊಯ್ ಅವರು ಗೆಲುವು ಸಾಧಿಸಲು ಕಾಂಗ್ರೆಸ್ ಬೆಂಬಲವೇ ಮುಖ್ಯ ಕಾರಣ. ಪಕ್ಷದ ಬೆಂಬಲವಿಲ್ಲದಿದ್ದರೆ ಅವರು ಆ ಕ್ಷೇತ್ರದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಬೋರಾ ತಿರುಗೇಟು ನೀಡಿದ್ದರು. ರೈಜೋರ್ ದಳದೊಂದಿಗಿನ ಮೈತ್ರಿ ಮುರಿದುಬಿದ್ದರೂ, ರಾಜ್ಯದಲ್ಲಿ ಜನಪರ ವಿಷಯಗಳಿಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಮತ್ತು ಆಡಳಿತಾರೂಢ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಆಡಳಿತ ವೈಫಲ್ಯದ ವಿರುದ್ಧ ನಿರಂತರವಾಗಿ ಧ್ವನಿಯೆತ್ತುವುದಾಗಿ ಕಾಂಗ್ರೆಸ್ ತಿಳಿಸಿದೆ.

2026ರ ಮೇ ತಿಂಗಳಲ್ಲಿ ನಡೆದ ಅಸ್ಸಾಂ ವಿಧಾನಸಭಾ ಚುನಾವಣೆಯ ಒಟ್ಟು 126 ಸ್ಥಾನಗಳ ಪೈಕಿ ಬಿಜೆಪಿ 82 ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ 19 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (BPF) ಮತ್ತು ಅಸೋಮ್ ಗಣ ಪರಿಷತ್ (AGP) ತಲಾ 10 ಸ್ಥಾನಗಳನ್ನು ಪಡೆದುಕೊಂಡಿದ್ದವು. ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (AIUDF) ಮತ್ತು ರೈಜೋರ್ ದಳ ತಲಾ 2 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC) 1 ಸ್ಥಾನದಲ್ಲಿ ಜಯಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಂದು ಬೆಂಬಲ, ಇಂದು ಪಶ್ಚಾತಾಪ: 2023ರ ಚುನಾವಣಾ ಆಯುಕ್ತರ ಕಾಯ್ದೆಗೆ ಬೆಂಬಲ ನೀಡಿ ತಪ್ಪು ಮಾಡಿದೆ ಎಂದ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶದ ರಾಜಕಾರಣದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆ ನಡೆದಿದೆ. ಮಾಜಿ...

ಯಾದಗಿರಿ | ಪ್ರಜಾಪ್ರಭುತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಯುವಜನರು ಪ್ರಜಾಪ್ರಭುತ್ವದ ಆಶಯಗಳು ಹಾಗೂ ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಅವುಗಳನ್ನು ತಮ್ಮ...

ಬೀದರ್‌ | ಅ.20ರಂದು ರೇಕುಳಗಿಯಲ್ಲಿ 70ನೇ ಧಮ್ಮಚಕ್ರ ಪ್ರವರ್ತನ ದಿನಾಚರಣೆ

ಬೀದರ್ ತಾಲ್ಲೂಕಿನ ರೇಕುಳಗಿ ಗ್ರಾಮದ ಧಮ್ಮಾಂಕುರ ಮೌಂಟ್‌ನ ಅನಾಥ ಪಿಂಡಕ ಬುದ್ಧ...

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ ಸ್ಥಾನ?

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು...