ಅಸ್ಸಾಂ ಚುನಾವಣೆ | ವರಸೆ ಬದಲಿಸಿದ ಬಿಜೆಪಿ; ನುಸುಳುಕೋರರಿಂದ ಯುವ ಕಲ್ಯಾಣಕ್ಕೆ!

Date:

ಅಸ್ಸಾಂ ವಿಧಾನಸಭಾ ಚುನಾವಣೆಗೆ ಇನ್ನು ಕೇವಲ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ. ಬದಲಾಗಿ, ಯುವಜನರ ಕಲ್ಯಾಣದ ಕುರಿತು ಮಾತನಾಡಲಾರಂಭಿಸಿದ್ದಾರೆ.

- Advertisement -

ಶನಿವಾರ, ಗುವಾಹಟಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಿಜುಷ್ ಹಜಾರಿಕಾ, “ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನತೆಯ ಕಲ್ಯಾಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿವೆ” ಎಂದು ಹೇಳಿದ್ದಾರೆ. ತಮ್ಮ ಸರ್ಕಾರಗಳ ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಿಜೆಪಿಯ ಈ ಹಠಾತ್ ಬದಲಾವಣೆಯು, ಕಳೆದ ಹತ್ತು ವರ್ಷಗಳಿಂದ  ಬಿಜೆಪಿ ಬಳಸುತ್ತಿದ್ದ ‘ನುಸುಳುಕೋರ’ ಎಂಬ ಹಳೆಯ ರಾಗವು ಯುವ ಮತದಾರರನ್ನು ಪ್ರಭಾವಿಸಿಲ್ಲ ಎಂಬ ಸತ್ಯವನ್ನು ಇಪ್ಪಿಕೊಂಡಂತಿದೆ. ಅಲ್ಲದೆ, ಯುವಜನತೆಯಲ್ಲಿ ಎನ್‌ಡಿಎ ವಿರುದ್ಧ ಮೌನ ಅಲೆ ಇರುವ ಸಾಧ್ಯತೆಯನ್ನು ಬಿಜೆಪಿ ಅರಿತುಕೊಂಡಿದೆ. ಆದ್ದರಿಂದ, ಸರ್ಕಾರದ ಕಾರ್ಯವೈಖರಿ ಬರಿ ಭಾಷಣಕ್ಕೆ ಸೀಮಿತವಾಗಿಲ್ಲ, ಬದಲಿಗೆ ಜೀವನೋಪಾಯದ ಸಮಸ್ಯೆಗಳಿಗೂ ಸ್ಪಂದಿಸುತ್ತಿದೆ ಎಂದು ಮನವರಿಕೆ ಮಾಡಲು ಪ್ರಯತ್ನಿಸುತ್ತಿದೆ.

ಸಚಿವರು ನೀಡಿದ ಭರವಸೆಯ ಪ್ರಕಾರ, ಮುಂದಿನ ಐದು ವರ್ಷಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಸರ್ಕಾರಿ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಬಿಜೆಪಿ ಹೊಂದಿದೆ. ಈಗಾಗಲೇ ಒಂದು ಲಕ್ಷಕ್ಕೂ ಹೆಚ್ಚು ಯುವಜನರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ 10 ಲಕ್ಷ ಯುವಜನರಿಗೆ ತಲಾ 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಬಿಜೆಪಿ ಹೊಂದಿದೆ ಎಂದು ವಿವರಿಸಿದ್ದಾರೆ.

2021 ರಿಂದ 615 ಸ್ಟಾರ್ಟ್‌ಅಪ್‌ಗಳಿಗೆ ನೆರವು ನೀಡಲಾಗಿದ್ದು, ಎಂಎಸ್‌ಎಂಇ ವಲಯವು 82 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಮೂಲಕ ತಳಮಟ್ಟದ ಉದ್ಯಮಶೀಲತೆಯನ್ನು ವಿಸ್ತರಿಸಿದೆ ಎಂದು ಸಚಿವರು ಹೇಳಿಕೊಂಡಿದ್ದಾರೆ.

ಇದುವರೆಗೆ ಬಿಜೆಪಿ ‘ಜಾತಿ, ಮಾತಿ ಮತ್ತು ಭೇಟಿ’ (ಸಮುದಾಯ, ಭೂಮಿ ಮತ್ತು ಅಡಿಪಾಯ) ಎಂಬ ಘೋಷಣೆಯಡಿ ಧ್ರುವೀಕರಣದ ರಾಜಕಾರಣ ಮಾಡಿತ್ತು. ವಿಶೇಷವಾಗಿ ಬಂಗಾಳಿ ಮಾತನಾಡುವ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ನಡೆಸಲಾದ ಒತ್ತುವರಿ ತೆರವು ಕಾರ್ಯಾಚರಣೆಗಳ ಮೂಲಕ ಮತ ಸೆಳೆಯಲು ಪ್ರಯತ್ನಿಸಿತ್ತು. ಶುಕ್ರವಾರ, ಕೂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಪ್ರಚಾರದಲ್ಲಿ ನುಸುಳುಕೋರರನ್ನು ಹೊರಹಾಕುವ ಮಾತನ್ನೇ ಆಡಿದ್ದರು. ಆದರೆ, ರಾಜಕೀಯ ವಿಶ್ಲೇಷಕರ ಪ್ರಕಾರ ನುಸುಳುಕೋರರ ವಿಚಾರ ಈಗ ಯುವ ಮತದಾರರನ್ನು ಹೆಚ್ಚು ಆಕರ್ಷಿಸುತ್ತಿಲ್ಲ. ಬದಲಿಗೆ, ನಾಡಿನ ಜನಪ್ರಿಯ ಗಾಯಕ ದಿ. ಜುಬೀನ್ ಗಾರ್ಗ್ ಅವರ ಸಾವಿನ ಪ್ರಕರಣದಲ್ಲಿನ ತನಿಖೆ ಮತ್ತು ನ್ಯಾಯದಲ್ಲಿ ಆಗುತ್ತಿರುವ ವಿಳಂಬದ ಬಗ್ಗೆ ಯುವಜನತೆ ಹೆಚ್ಚು ಆಕ್ರೋಶಗೊಂಡಿದ್ದಾರೆ. ಈಗ ಬಿಜೆಪಿ ತನ್ನ ಹಿಂದುತ್ವ ಮತ್ತು ನುಸುಳುಕೋರರ ವಿಷಯಕ್ಕಿಂತ ಉದ್ಯೋಗ ಮತ್ತು ಯುವ ಕಲ್ಯಾಣದ ಮಾತಿಗೆ ಶರಣಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಶಾಲೆ ಮಾನವೀಯ ಮೌಲ್ಯ ಬೆಳೆಸುವ ಸ್ಫೂರ್ತಿಯ ಕೇಂದ್ರ

ಶಿಕ್ಷಣವೆಂಬುದು ಕೇವಲ ಶಾಲೆಯಲ್ಲಿ ಕಲಿಯುವ ಪಾಠಗಳಿಗೆ ಸೀಮಿತವಾಗದೆ, ಸಂಗೀತ, ಸಾಹಿತ್ಯ, ಅಭಿನಯ...

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಈ ದಿನ ಸಂಪಾದಕೀಯ | ಎದ್ದು ನಿಂತ ಯುವಜನತೆ, ಹೊಸ ಬೆಳವಣಿಗೆಯತ್ತ ಭಾರತ

ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ, ಸರ್ಕಾರ ರಚನೆ, ಆಡಳಿತ ನಡೆಸುವುದಷ್ಟೇ ಅಲ್ಲ, ದನಿ...