ಅಸ್ಸಾಂ | ಉಗ್ರ ಸಂಘಟನೆ ULFA-I ಮುಖ್ಯಸ್ಥ ಪರೇಶ್ ಬರುವಾ ಮನೆ ಬಳಿ ಗುಂಡಿನ ಸದ್ದು

Date:

ಅಸ್ಸಾಂನ ಉಗ್ರಗಾಮಿ ಸಂಘಟನೆ ‘ಉಲ್ಫಾ-ಇಂಡಿಪೆಂಡೆಂಟ್’ (ULFA-I – ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್) ಮುಖ್ಯಸ್ಥ ಪರೇಶ್ ಬರುವಾ ಅವರ ತಂದೆಯ ಮನೆ ಬಳಿ ಗುಂಡಿನ ದಾಳಿ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಸ್ಸಾಂನ ದಿಬ್ರುಗಢ ಜಿಲ್ಲೆಯ ಜೆರಾಯ್ ಗಾಂವ್‌ನಲ್ಲಿರುವ ಮನೆಯ ಬಳಿ ಗುಂಡು ಹಾರಿಸಲಾಗಿದೆ ಎಂದು ಕುಟುಂಬ ಸದಸ್ಯರು ತಿಳಿಸಿರುವುದಾಗಿ ವರದಿಯಾಗಿದೆ.

- Advertisement -

ಪರೇಶ್ ಬರುವಾ ಅವರ ಸಹೋದರ ಬಿಮಲ್ ಬರುವಾ ನೀಡಿರುವ ಮಾಹಿತಿ ಪ್ರಕಾರ, ಮಧ್ಯರಾತ್ರಿಯ ಸುಮಾರಿಗೆ ಮನೆಯ ಸಮೀಪ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ ಸದ್ದು ಕೇಳಿಬಂದಿದೆ. ಆದರೆ, ಈ ಕೃತ್ಯ ಎಸಗಿದವರು ಯಾರು ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಮನೆಯ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾಗಳಿದ್ದರೂ, ಕತ್ತಲೆಯ ಕಾರಣದಿಂದಾಗಿ ಯಾವುದೇ ದೃಶ್ಯಗಳು ಸೆರೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಈ ಘಟನೆಯು ಕೇವಲ ಕಾಕತಾಳೀಯವಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪ್ರಮುಖ ಕಾರಣ, ಪರೇಶ್ ಬರುವಾ ಅವರ ಆಪ್ತ ಸಹಾಯಕನಾಗಿದ್ದ ಅರುಣೋದೋಯ್ ದೊಹೋಟಿಯಾ (ಅರುಣೋದೋಯ್ ಅಸೋಂ) ಅವರು ಮರಳಿ ತಮ್ಮ ಗ್ರಾಮಕ್ಕೆ ಬಂದ ಎರಡೇ ದಿನಗಳಲ್ಲಿ ಈ ಗುಂಡಿನ ಸದ್ದು ಕೇಳಿಬಂದಿದೆ. ದೊಹೋಟಿಯಾ ಅವರು ಕೆಲವು ತಿಂಗಳ ಹಿಂದಷ್ಟೇ ಶರಣಾಗತರಾಗಿದ್ದರು ಮತ್ತು ಇತ್ತೀಚೆಗಷ್ಟೇ ಮ್ಯಾನ್ಮಾರ್‌ನ ಉಗ್ರಗಾಮಿ ಶಿಬಿರಗಳಿಂದ ವಾಪಸ್ ಆಗಿದ್ದರು ಎನ್ನಲಾಗಿದೆ.

ಯಾರು ಈ ಪರೇಶ್ ಬರುವಾ?

ಪರೇಶ್ ಬರುವಾ ಅಸ್ಸಾಂನ ಪ್ರತ್ಯೇಕತಾವಾದಿ ಹೋರಾಟದಲ್ಲಿ ಗುರುತಿಸಿಕೊಂಡಿರುವ ಉಗ್ರ ಸಂಘಟನೆಯ ನಾಯಕ. ದಶಕಗಳಿಂದ ಭಾರತ ಸರ್ಕಾರದ ವಿರುದ್ಧ ಸಶಸ್ತ್ರ ಹೋರಾಟ ನಡೆಸುತ್ತಿರುವ ಈತ ಪ್ರಸ್ತುತ ಮ್ಯಾನ್ಮಾರ್-ಚೀನಾ ಗಡಿ ಭಾಗದಲ್ಲಿ ತಲೆಮರೆಸಿಕೊಂಡಿದ್ದಾರೆ ಎನ್ನುವ ಅನುಮಾನಗಳಿವೆ.

ಇದನ್ನೂ ಓದಿ: ‘ಆರ್‌ಎಸ್‌ಎಸ್‌-ಬಿಜೆಪಿ ನಂಟು, ನ್ಯಾಯ ಸಿಗುವ ನಂಬಿಕೆ ಇಲ್ಲ’: ನ್ಯಾಯಮೂರ್ತಿಗಳ ಬದಲಾವಣೆಗೆ ಕೇಜ್ರಿವಾಲ್ ಪಟ್ಟು

ಅಸ್ಸಾಂನ ಬಹುತೇಕ ಉಗ್ರಗಾಮಿ ಸಂಘಟನೆಗಳು ಈಗಾಗಲೇ ಕೇಂದ್ರ ಸರ್ಕಾರದೊಂದಿಗೆ ಶಾಂತಿ ಒಪ್ಪಂದ ಮಾಡಿಕೊಂಡಿವೆ. ಆದರೆ, ಪರೇಶ್ ಬರುವಾ ನೇತೃತ್ವದ ಈ ಗುಂಪು ಮಾತ್ರ ಇನ್ನೂ ಮಾತುಕತೆಗೆ ಒಪ್ಪಿಲ್ಲ. ಇಂತಹ ಸಮಯದಲ್ಲಿಯೇ ಅವರ ಮನೆಯ ಬಳಿ ಗುಂಡಿನ ಸದ್ದು ಕೇಳಿಬಂದಿರುವುದು ಶಾಂತಿ ಮಾತುಕತೆಯ ಪ್ರಯತ್ನಗಳಿಗೆ ಅಡ್ಡಿಪಡಿಸುವ ಸಂಚು ಇರಬಹುದು ಎಂದು ಶಂಕಿಸಲಾಗಿದೆ.

ಸದ್ಯ ಈ ಘಟನೆಯ ಕುರಿತು ಚಬುರಾ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾರೋ ಉದ್ದೇಶಪೂರ್ವಕವಾಗಿ ಕಾನೂನು ಸುವ್ಯವಸ್ಥೆ ಕೆಡಿಸಲು ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಲಿಮಿಟೇಷನ್ ಮಸೂದೆ: 50% ಸ್ಥಾನ ಹೆಚ್ಚಳ ಅಥವಾ ಜನಸಂಖ್ಯೆ ಆಧಾರಿತ ವಿಂಗಡಣೆ; ಡಿಎಂಕೆಗೆ ಕೇಂದ್ರದ ಬೆದರಿಕೆ

ಕೇಂದ್ರ ಸರ್ಕಾರದ ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ...

ಕ್ಷೇತ್ರ ಮರುವಿಂಗಡಣೆ ಮಸೂದೆ: ಎಲ್ಲ ರಾಜ್ಯಗಳ ಸ್ಥಾನ 50% ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು...

ತನಿಖೆಗೆ ಸಿಜೆಐ ಸೂಚಿಸಿದ್ದ ನ್ಯಾಯಾಧೀಶರೇ ಈಗ ಜಾರ್ಖಂಡ್ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ!

ಪ್ರಾಮಾಣಿಕತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ದೂರುಗಳ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ...

ನೀರಿನ ಗುಣಮಟ್ಟ ವಿವಾದ: ಲ್ಯಾಬ್ ವರದಿ ವ್ಯತ್ಯಾಸದ ತನಿಖೆಗೆ ಬಿಸ್ಲೆರಿ ಆಗ್ರಹ!

ಪಶ್ಚಿಮ ಬಂಗಾಳದ ಘಟಕದಿಂದ ಸಂಗ್ರಹಿಸಲಾದ ತನ್ನ ಪ್ಯಾಕೇಜ್ಡ್ ಕುಡಿಯುವ ನೀರಿನ ಮಾದರಿಗಳು...