ಅಸ್ಸಾಂ ಪ್ರವಾಹ | ಸಾವಿನ ಸಂಖ್ಯೆ 58ಕ್ಕೆ ಏರಿಕೆ; 23 ಲಕ್ಷ ಜನರ ಜೀವನ ಅತಂತ್ರ

Date:

ಅಸ್ಸಾಂನಲ್ಲಿ ಕಳೆದ ಒಂದು ತಿಂಗಳಿನಿಂದ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಪ್ರವಾಹದಿಂದಾಗಿ ರಾಜ್ಯದಾದ್ಯಂತ 58 ಜನರು ಸಾವನ್ನಪ್ಪಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎಎಸ್‌ಡಿಎಂಎ) ವರದಿ ಮಾಡಿದೆ.

- Advertisement -

ಎಎಸ್‌ಡಿಎಂಎ ಪ್ರಕಾರ, ಶನಿವಾರ ಇನ್ನೂ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಸಾವಿನ ಸಂಖ್ಯೆ 58ಕ್ಕೆ ಏರಿಕೆಯಾಗಿದೆ. ಧುಬ್ರಿ, ಕ್ಯಾಚಾರ್ ಮತ್ತು ದರ್ರಾಂಗ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹಲವರು ಜೀವ ಬಲಿಪಡೆದಿರುವ ಪ್ರವಾಹವು ಮೂಲಸೌಕರ್ಯಗಳಿಗೆ ವ್ಯಾಪಕ ಹಾನಿ ಮಾಡಿದೆ. ರಸ್ತೆಗಳು ಹಾಳಾಗಿವೆ. ಬೆಳೆ ನಾಶವಾಗಿದ್ದು, ಜಾನುವಾರುಗಳೂ ಸಾವನ್ನಪ್ಪಿವೆ. ಸಾವಿರಾರು ಜನರು ನಿರಾಶ್ರಿತರಾಗಿದ್ದು, 23 ಲಕ್ಷಕ್ಕೂ ಹೆಚ್ಚು ಜನರನ್ನು ಪ್ರವಾಹವು ಬಾಧಿಸಿದೆ.

ಜುಲೈ 6 ರಂದು, ಚರೈಡಿಯೊ ಜಿಲ್ಲೆಯಲ್ಲಿ ಇಬ್ಬರು ಮತ್ತು ಗೋಲ್‌ಪಾರಾ, ಮೊರಿಗಾಂವ್, ಸೋನಿತ್‌ಪುರ ಹಾಗೂ ತಿನ್ಸುಕಿಯಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಪ್ರವಾಹದಲ್ಲಿ ಸಾವನ್ನಪ್ಪಿದ್ದಾರೆ ಎಂದು ಎಎಸ್‌ಡಿಎಂಎ ಹೇಳಿದೆ.

ರಾಜ್ಯದ 29 ಜಿಲ್ಲೆಗಳಲ್ಲಿ 23 ಲಕ್ಷ ಜನರು ಪ್ರವಾಹದಿಂದ ಬಾಧಿತರಾಗಿದ್ದರೆ, ಧುಬ್ರಿ ಜಿಲ್ಲೆವೊಂದರಲ್ಲೇ 7,97,918 ಜನರು ಬಾಧಿತರಾಗಿದ್ದಾರೆ ಎಂದು ಎಎಸ್‌ಡಿಎಂಎ ತಿಳಿಸಿದೆ.

ಬ್ರಹ್ಮಪುತ್ರ ನದಿ ಸೇರಿದಂತೆ ಹತ್ತು ನದಿಗಳು ಉಕ್ಕಿ ಹರಿಯುತ್ತಿವೆ. ಹಲವೆಡೆ, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಬ್ರಹ್ಮಪುತ್ರ ನದಿಯ ನೀರಿನ ಮಟ್ಟವು ನೇಮತಿಘಾಟ್, ತೇಜ್ಪುರ್, ಧುಬ್ರಿ ಮತ್ತು ಗೋಲ್ಪಾರಾದಲ್ಲಿ ಅಪಾಯದ ಮಟ್ಟಕ್ಕಿಂತ ಹೆಚ್ಚಿದೆ. ಪ್ರವಾಹದಿಂದಾಗಿ ರಾಜ್ಯದ 3,535 ಗ್ರಾಮಗಳು ಮುಳುಗಿದ್ದು, 68,768.5 ಹೆಕ್ಟೇರ್ ಬೆಳೆ ಪ್ರದೇಶಕ್ಕೆ ಹಾನಿಯಾಗಿದೆ.

27 ಜಿಲ್ಲೆಗಳಲ್ಲಿ 577 ಪರಿಹಾರ ಶಿಬಿರಗಳು ಮತ್ತು ವಿತರಣಾ ಕೇಂದ್ರಗಳನ್ನು ತೆರೆಯಲಾಗಿದ್ದು, 5,26,000ಕ್ಕೂ ಹೆಚ್ಚು ಜನರು ಆಶ್ರಯ ಪಡೆಯುತ್ತಿದ್ದಾರೆ.

ಮತ್ತೊಂದೆಡೆ, ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಪ್ರವಾಹದಿಂದ ಆರು ಘೇಂಡಾಮೃಗಗಳು ಸೇರಿದಂತೆ 114 ಕಾಡು ಪ್ರಾಣಿಗಳು ಸಾವನ್ನಪ್ಪಿವೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಗುವಾಹಟಿಯ ಜ್ಯೋತಿನಗರ ಪ್ರದೇಶಕ್ಕೆ ಭೇಟಿ ನೀಡಿದ್ದು, ಪ್ರವಾಹದಿಂದಾಗಿ ಚರಂಡಿಗೆ ಬಿದ್ದು ನಾಪತ್ತೆಯಾದ ಅಭಿನಾಶ್ ಸರ್ಕಾರ್ ಅವರ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ. ಅಭಿನಾಶ್‌ಗಾಗಿ ರಕ್ಷಣಾ ತಂಡಗಳು ಮೂರು ದಿನಗಳಿಂದ ಹುಡುಕಾಟ ನಡೆಸುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...