ಅಸ್ಸಾಂ | ಬ್ರಹ್ಮಪುತ್ರ ನದಿ ನೀರಿನ ಮಟ್ಟ ಏರಿಕೆ; ಸಂಕಷ್ಟದಲ್ಲಿ 22 ಜಿಲ್ಲೆಯ 3.40 ಲಕ್ಷ ಮಂದಿ

Date:

ಅಸ್ಸಾಂ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು ಪ್ರವಾಹ ಹೆಚ್ಚಾಗಿದೆ.

ಪ್ರವಾಹ ಪರಿಸ್ಥಿತಿಯಿಂದ 22 ಜಿಲ್ಲೆಗಳ 3.40 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೊಳಗಾಗಿದ್ದಾರೆ. ಕನಿಷ್ಠ 105 ಗ್ರಾಮಗಳು ತೊಂದರೆಗೀಡಾಗಿದೆ. ಮೋರಿಗಾಂವ್ ಜಿಲ್ಲೆಯಲ್ಲಿ ಪ್ರವಾಹವು 3,059 ಹೆಕ್ಟೇರ್‌ಗೂ ಹೆಚ್ಚು ಕೃಷಿ ಭೂಮಿ ಮುಳುಗಡೆಯಾಗಿದೆ.

“ಪ್ರವಾಹದಿಂದ ರಾಜ್ಯದಾದ್ಯಂತ ಸುಮಾರು 22,000 ಹೆಕ್ಟೇರ್ ಬೆಳೆಯನ್ನು ಮುಳುಗಿಸಿದೆ. ನಮ್ಮ ರೈತರಿಗೆ ಸಹಾಯ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಹಿಂದೆ ಸಂತ್ರಸ್ತ ರೈತರು ಸರ್ಕಾರದಿಂದ ಏನನ್ನೂ ಪಡೆದಿಲ್ಲ. ಆದರೆ ನಮ್ಮ ಸರ್ಕಾರ ರೈತರಿಗೆ ಪರಿಹಾರ ನೀಡಲಿದೆ. ನಾವು ಎಲ್ಲ ಜಿಲ್ಲೆಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ” ಎಂದು ಅಸ್ಸಾಂನ ಕೃಷಿ ಸಚಿವ ಅತುಲ್ ಬೋರಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಗುರುಗ್ರಾಮ | ‘ನಿಮಗಿರುವುದು ಕೇವಲ 2 ದಿನ’; ಮುಸ್ಲಿಮರ ಏರಿಯಾದಲ್ಲಿ ಬೆದರಿಕೆಯ ಪೋಸ್ಟರ್‌ಗಳು

ಶಿವಸಾಗರ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಧುಬ್ರಿ, ಗೋಲ್‌ಪಾರಾ, ಗುವಾಹಟಿ, ತೇಜ್‌ಪುರ್ ಮತ್ತು ನೇಮತಿಘಾಟ್‌ ಜಿಲ್ಲೆಗಳಲ್ಲಿ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಮಜುಲಿಯು ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, 65,035 ಜನರು ಪ್ರವಾಹಕ್ಕೆ ಸಿಲುಕಿದ್ದಾರೆ. ಗೋಲ್ಪಾರಾ 58,439, ಮೋರಿಗಾಂವ್ 44,181, ಬಿಸ್ವನಾಥ್ 36,671, ಶಿವಸಾಗರ್ 28,669 ಮತ್ತು ಲಖಿಂಪುರ ಜಿಲ್ಲೆಗಳಲ್ಲಿ 24,594 ಮಂದಿ ತೊಂದರೆಗೊಳಗಾಗಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜಿಲ್ಲಾಡಳಿತಗಳು 153 ಪರಿಹಾರ ಶಿಬಿರಗಳನ್ನು ಆರಂಭಿಸಲಾಗಿದೆ. ರಾಜ್ಯದಲ್ಲಿ ಒಟ್ಟು 22,000 ಹೆಕ್ಟೇರ್‌ ಕೃಷಿ ಭೂಮಿ ಪ್ರವಾಹದಿಂದ ಮುಳುಗಡೆಯಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ...

ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ...

ಒಡಿಶಾ| ಮೇಲ್ಸೇತುವೆಯಿಂದ ಬಿದ್ದ ಬಸ್‌; ಐವರು ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ...