ಅಸ್ಸಾಂ | ಅರಣ್ಯ ಭೂಮಿ ತೆರವು ಕಾರ್ಯಾಚರಣೆ; 2,070 ಕಾಂಕ್ರೀಟ್ ರಚನೆಗಳ ನೆಲಸಮ

Date:

ಅಸ್ಸಾಂನ ಗೋಲ್ಪಾರಾ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದಲ್ಲಿ ಅರಣ್ಯ ಭೂಮಿಯ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಪೈಕಾನ್ ಮೀಸಲು ಅರಣ್ಯದಲ್ಲಿ 140 ಹೆಕ್ಟೇರ್‌ಗಳಿಗೂ ಹೆಚ್ಚು ಒತ್ತುವರಿಯಾದ ಅರಣ್ಯ ಭೂಮಿಯನ್ನು ಸರ್ಕಾರ ಮರಳಿ ಪಡೆಯಲು ಕಾರ್ಯಾಚರಣೆ ಆರಂಭಿಸಿದೆ. ಮುಖ್ಯವಾಗಿ, ಮಾನವ-ಆನೆ ಸಂಘರ್ಷವನ್ನು ತಡೆಗಟ್ಟಲು ಮತ್ತು ಪರಿಸರ ಸಮತೋಲನವನ್ನು ಪುನಃಸ್ಥಾಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

- Advertisement -

ಜುಲೈ 10ರೊಳಗೆ ಒತ್ತುವರಿದಾರರು ಸ್ವಯಂಪ್ರೇರಿತವಾಗಿ ಅರಣ್ಯ ಭೂಮಿಯನ್ನು ಖಾಲಿ ಮಾಡಲು ಗಡುವು ನೀಡಲಾಗಿತ್ತು. ಗಡುವು ಮುಗಿದ ಬೆನ್ನಲ್ಲೇ, ಹೈಕೋರ್ಟ್ ಆದೇಶಕ್ಕೆ ಅನುಗುಣವಾಗಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕೃಷ್ಣೈ ವ್ಯಾಪ್ತಿಯ ಎರಡು ಪ್ರಮುಖ ವಲಯಗಳಾದ ಬಿದ್ಯಾಪಾರಾ ಮತ್ತು ಬೆಟ್ಬರಿಯಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಅಲ್ಲಿ ಹಲವಾರು ಕುಟುಂಬಗಳು ವರ್ಷಗಳಿಂದ ಕಾನೂನುಬಾಹಿರವಾಗಿ ವಾಸಿಸುತ್ತಿದ್ದಾರೆ ಎಂದು ಸರ್ಕಾರ ಆರೋಪಿಸಿದೆ.

“ನಾವು 149 ಹೆಕ್ಟೇರ್ ಪ್ರದೇಶವನ್ನು ತೆರವುಗೊಳಿಸುತ್ತಿದ್ದೇವೆ. ಕಾರ್ಯಾಚರಣೆಗಾಗಿ ಹಲವಾರು ಜೆಸಿಬಿಗಳನ್ನು ಬಳಸುತ್ತಿದ್ದು, ಭಾನುವಾರ ಕಾರ್ಯಾಚರಣೆಯನ್ನು ಪೂರ್ಣಗೊಳಿಸುವ ಗುರಿ ಇದೆ. ತೆರವು ಪ್ರಕ್ರಿಯೆಯಲ್ಲಿ ಸುಮಾರು 2,070 ಕಾಂಕ್ರೀಟ್ ರಚನೆಗಳನ್ನು ಕಿತ್ತುಹಾಕಬೇಕಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ | ಸುಪ್ರೀಂ ಆದೇಶ: ಪರ-ವಿರೋಧಗಳ ವಾಗ್ವಾದ

“ದೇಶಾದ್ಯಂತ ನಡೆದ ಮಾನವ-ಆನೆ ಸಂಘರ್ಷ ಪ್ರಕರಣಗಳಿಗೆ ಹೋಲಿಸಿದರೆ, ಗೋಲ್ಪಾರಾ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅರಣ್ಯ ಭೂಮಿಯ ಮೇಲಿನ ಎಲ್ಲ ಅತಿಕ್ರಮಣಗಳನ್ನು ತೆಗೆದುಹಾಕುವಂತೆ ಹೈಕೋರ್ಟ್ ನಮಗೆ ನಿರ್ದೇಶನ ನೀಡಿದೆ” ಎಂದು ಗೋಲ್‌ಪಾರದ ಜಿಲ್ಲಾ ಅರಣ್ಯ ಅಧಿಕಾರಿ (ಡಿಎಫ್‌ಒ) ತೇಜಶ್ ಮರಿಸ್ವಾಮಿ ಹೇಳಿದ್ದಾರೆ.

ತೆರವು ಕಾರ್ಯಾಚರಣೆಗೆ ಮುಂಚಿತವಾಗಿ, ಅರಣ್ಯ ಇಲಾಖೆ ಮತ್ತು ಅಸ್ಸಾಂ ಪೊಲೀಸರ ಜಂಟಿ ತಂಡಗಳು ತೀವ್ರ ಗಸ್ತು ತಿರುಗುತ್ತಿವೆ. ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಭೂಮಿಯನ್ನು ತೊರೆಯುವಂತೆ ಸೂಚಿಲಾಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ಶಾಂತಿಯುತವಾಗಿ ಹೊರಹೋಗುವಂತೆ ಅಧಿಕಾರಿಗಳು ಒತ್ತಾಯಿಸುತ್ತಿದ್ದಾರೆ.

ತೆರವು ಕಾರ್ಯಾಚರಣೆಯು ಅರಣ್ಯದ ಪರಿಸರ ಸಮಗ್ರತೆ ಮತ್ತು ವನ್ಯಜೀವಿ ಕಾರಿಡಾರ್‌ಗಳನ್ನು ರಕ್ಷಿಸುವ ಸಂರಕ್ಷಣಾ ಪ್ರಯತ್ನದ ಭಾಗವಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...