ಯುವ ಕಾಂಗ್ರೆಸ್ ಅಧ್ಯಕ್ಷನ ವಿರುದ್ಧದ ಪ್ರಕರಣ: ತನಿಖೆಗೆ ಮಧ್ಯಂತರ ತಡೆ ನೀಡಲು ಗುವಾಹಟಿ ಹೈಕೋರ್ಟ್ ನಕಾರ

Date:

  • ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ಘನತೆಗೆ ಧಕ್ಕೆ ಪ್ರಕರಣ
  • ನ್ಯಾ. ಅಜಿತ್ ಬೋರ್ತಕೂರ್ ಏಕಸದಸ್ಯ ಪೀಠದಿಂದ ವಿಚಾರಣೆ

ಅಸ್ಸಾಂ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷೆಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶಿವಮೊಗ್ಗದ ಶ್ರೀನಿವಾಸ್‌ ಬಿ.ವಿ ಅವರ ವಿರುದ್ಧದ ತನಿಖೆಗೆ ಮಧ್ಯಂತರ ತಡೆ ನೀಡಲು ಗುವಾಹಟಿ ಹೈಕೋರ್ಟ್‌ ನಿರಾಕರಿಸಿದೆ.

“ಶ್ರೀನಿವಾಸ್‌ ಅವರು ಅಶ್ಲೀಲ ಮಾತುಗಳಿಂದ ನನಗೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ. ಇದರ ಬಗ್ಗೆ ಕಾಂಗ್ರೆಸ್‌ ಹಿರಿಯ ನಾಯಕರಿಗೆ ಹೇಳಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆಂದು ಎಚ್ಚರಿಕೆ ನೀಡಿದ್ದಾರೆ” ಎಂದು ಆರೋಪಿಸಿ ಅಸ್ಸಾಂ ಯುವ ಕಾಂಗ್ರೆಸ್‌ ಅಧ್ಯಕ್ಷೆ ದೂರು ದಾಖಲಿಸಿದ್ದರು.

ಅವರ ಆರೋಪವನ್ನು ತಳ್ಳಿಹಾಕಿದ್ದ ಶ್ರೀನಿವಾಸ್, “ಕೆಲವರು ರಾಜಕೀಯ ಕಾರಣಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ದೂರಿನ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಖುದ್ದು ಹಾಜರಾಗುವಂತೆ ನೋಟಿಸ್‌ ನೀಡಿದ್ದು, ತನಿಖೆಗೆ ಮಧ್ಯಂತರ ತಡೆ ನೀಡಬೇಕು” ಎಂದು ಕೋರಿ ಗುಹವಾಟಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? : ಹಿರಿಯೂರು ಕ್ಷೇತ್ರ | ಮೈಮರೆತ ಕಾಂಗ್ರೆಸ್‌, ಎಚ್ಚೆತ್ತ ಬಿಜೆಪಿ, ಚಿಗುರಿದ ಜೆಡಿಎಸ್

ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಜಿತ್ ಬೋರ್ತಕೂರ್ ಏಕಸದಸ್ಯ ಪೀಠ, ”ಸಿಆರ್‌ಪಿಸಿ ಸೆಕ್ಷನ್ 164ರ ಅಡಿಯಲ್ಲಿ ದಾಖಲಾದ ಕೇಸ್‌ ಡೈರಿ ಮತ್ತು ಸಂತ್ರಸ್ತೆಯ ಹೇಳಿಕೆಯನ್ನು ಪರಿಶೀಲಿಸಿದ ನಂತರವೇ ಮಧ್ಯಂತರ ತಡೆ ಮನವಿಯನ್ನು ಪರಿಗಣಿಸಲಾಗುವುದು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಶ್ರೀನಿವಾಸ್ ಪರ ಹಿರಿಯ ನ್ಯಾಯವಾದಿ ಕೆ.ಎನ್ ಚೌಧರಿ ವಾದ ಮಂಡಿಸಿದರೆ, ಅಸ್ಸಾಂ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಡಿ ಸೈಕಿಯಾ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಎಂ ಫುಕನ್ ವಾದ ಮಂಡಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾನು ರಾಜ್ಯಕ್ಕೆ ಭೇಟಿ ನೀಡುವುದು ಡಿ ಕೆ ಶಿವಕುಮಾರ್‌ಗೆ ಸಹಿಸಲು ಆಗುತ್ತಿಲ್ಲ: ಎಚ್‌ ಡಿ ಕುಮಾರಸ್ವಾಮಿ

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಹೇಳಿಕೆಗಳಲ್ಲಿ ತಾಳಮೇಳವಿಲ್ಲ, ಸ್ಥಿರತೆ ಇಲ್ಲ. ಅವರೊಬ್ಬ...

ಧನ್ಯ ರಾಜೇಂದ್ರನ್ ವಿರುದ್ಧದ ಅವಹೇಳನಕಾರಿ ವೀಡಿಯೊ, ಪೋಸ್ಟ್‌ಗಳನ್ನು ತೆಗೆದುಹಾಕಲು ಹೈಕೋರ್ಟ್ ಆದೇಶ

'ದಿ ನ್ಯೂಸ್ ಮಿನಿಟ್' ಸಂಸ್ಥಾಪಕಿ ಧನ್ಯ ರಾಜೇಂದ್ರನ್ ಮತ್ತು ಡಿಜಿಪಬ್ ನ್ಯೂಸ್...

ನೀಟ್ ಪ್ರಕರಣ | ಶಿಕ್ಷಣ ಸಚಿವರು ತಮ್ಮನ್ನು ಹೊರತುಪಡಿಸಿ ಎಲ್ಲರನ್ನೂ ದೂಷಿಸಿದ್ದಾರೆ: ರಾಹುಲ್ ಗಾಂಧಿ

ನೀಟ್ ಪ್ರಕರಣದಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮನ್ನು ಹೊರತುಪಡಿಸಿ...