ಅಸ್ಸಾಂನಲ್ಲಿ 5.1 ತೀವ್ರತೆಯ ಭೂಕಂಪನ

Date:

ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ ಸೋಮವಾರ ನಸುಕಿನಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾಪನ ಕೇಂದ್ರ (ಎನ್ಸಿಎಸ್) ಪ್ರಕಟಿಸಿದೆ. ಮಂಜಾನೆ 4 ಗಂಟೆ 17 ನಿಮಿಷಕ್ಕೆ ಭೂಕಂಪ ಸಂಭವಿಸಿದ್ದು, ಇದರ ಕೇಂದ್ರಬಿಂದು 50 ಕಿಲೋಮೀಟರ್ ಆಳದಲ್ಲಿತ್ತು. 26.37 ಡಿಗ್ರಿ ಉತ್ತರ ಅಕ್ಷಾಂಶ ಹಾಗೂ 92.29 ಡಿಗ್ರಿ ಪೂರ್ವ ರೇಖಾಂಶದಲ್ಲಿ ಕೇಂದ್ರ ಬಿಂದು ಇತ್ತು ಎಂದು ಎನ್ಸಿಎಸ್ ಸ್ಪಷ್ಟಪಡಿಸಿದೆ.

- Advertisement -

ಯಾವುದೇ ಸಾವು ನೋವು ಅಥವಾ ಆಸ್ತಿ ಪಾಸ್ತಿಗಳಿಗೆ ಹಾನಿಯಾದ ವಿವರಗಳು ತಕ್ಷಣಕ್ಕೆ ಲಭ್ಯವಿಲ್ಲ. ಕೇಂದ್ರ ಅಸ್ಸಾಂನಲ್ಲಿ ಕೂಡಾ ನಿವಾಸಿಗಳಿಗೂ ಅಲ್ಪ ಅಥವಾ ಸಾಮಾನ್ಯ ಪ್ರಮಾಣದ ಕಂಪನದ ಅನುಭವವಾಗಿದೆ ಎಂದು ಮೂಲಗಳು ಹೇಳಿವೆ. ಅಧಿಕಾರಿಗಳು ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಮಧ್ಯ-ಪಶ್ಚಿಮ ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳು, ಇಡೀ ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ಹಲವಾರು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ‘ಕಾಮುಕರ’ ವಿರುದ್ಧ ಕುಡುಗೋಲು ಹಿಡಿದ ಮಹಿಳಾ ಶಕ್ತಿ!

ಮಧ್ಯ-ಪೂರ್ವ ಭೂತಾನ್, ಚೀನಾದ ಕೆಲವು ಭಾಗಗಳು ಮತ್ತು ಬಾಂಗ್ಲಾದೇಶಗಳು ಸಹ ಕಂಪನಕ್ಕೆ ಒಳಗಾಗಿವೆ ಎಂದು ವರದಿಗಳು ಹೇಳಿವೆ.

ಭೂಕಂಪದ ಅನುಭವವಾದ ನಂತರ ಜನರು ನಿದ್ರೆಯಿಂದ ಮನೆಗಳಿಂದ ಹೊರಗೆ ಓಡಿ ಬಂದರು ಎನ್ನಲಾಗಿದೆ.

ಈಶಾನ್ಯ ಪ್ರದೇಶವು ಭೂಕಂಪನ ವಲಯದಲ್ಲಿ ಬರುವುದರಿಂದ ಅಲ್ಲಿ ಆಗಾಗ ಭೂಮಿ ಕಂಪಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಜಂತರ್‌ ಮಂತರ್‌ನಲ್ಲಿ ವರದಿಗಾರರಿಗೂ ಪೊಲೀಸರ ನಿರ್ಬಂಧ

ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿ ಪೊಲೀಸರು ಮೊಳೆಗಳು, ಬ್ಯಾರಿಕೇಡ್‌ಗಳು ಹಾಗೂ...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...