ವಿಧಾನಸಭೆ ಚುನಾವಣೆಗೆ ಸಜ್ಜಾದ ಅಸ್ಸಾಂ, ಕೇರಳ, ಪುದುಚೆರಿ: ಇಂದು ಒಂದೇ ಹಂತದ ಹಣಾಹಣಿ

Date:

ಅಸ್ಸಾಂ, ಕೇರಳ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಇಂದು ಏಪ್ರಿಲ್ 9ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಎಲ್ಲ ಪಕ್ಷಗಳು ಭರ್ಜರಿಯಾಗಿ ಪ್ರಚಾರ ನಡೆಸಿದ್ದು, ನಿನ್ನೆ ಪ್ರಚಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ.

- Advertisement -

ಒಂದೇ ಹಂತದ ಹಣಾಹಣಿ ನಡೆಯಲಿದೆ. ಬೆಳಿಗ್ಗೆ 7:00ರಿಂದ ಸಂಜೆ 6:00ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಮೇ 4ರಂದು ಮತ ಎಣಿಕೆ ನಡೆಯಲಿದೆ. ಮತದಾರರ ಗುರುತಿನ ಚೀಟಿ ಇಲ್ಲದಿದ್ದರೆ, ಆಧಾರ್‌ ಕಾರ್ಡ್ ಮೂಲಕ ಮತದಾನ ಮಾಡಬಹುದಾಗಿದೆ. ಮತದಾರರಿಗೆ ಯಾವುದೇ ಮಾಹಿತಿ ಬೇಕಿದ್ದಲ್ಲಿ 1950 ಸಹಾಯವಾಣಿಗೆ ಕರೆ ಮಾಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ವಿವಾದಗಳ ಗೊಚ್ಚೆಯಲ್ಲಿ ಸಿಲುಕಿರುವ ಕೇರಳ ಬಿಜೆಪಿ: ಮತ ಬ್ಯಾಂಕ್‌ಗಾಗಿ ತೊಳಲಾಟ

ಕೇರಳದಲ್ಲಿ ಯುಡಿಎಫ್, ಎಲ್‌ಡಿಎಫ್ ಜಿದ್ದಾಜಿದ್ದಿ ಸೆಣಸು

ಕೇರಳದಲ್ಲಿ ಸಿಪಿಐಎಂ ನೇತೃತ್ವದ ಎಲ್‌ಡಿಎಫ್ ಮತ್ತು ಕಾಂಗ್ರೆಸ್ ಯುಡಿಎಫ್ ನಡುವೆ ಜಿದ್ದಾಜಿದ್ದಿ ಸೆಣಸಾಟ ಇರಲಿದೆ. ಆದರೆ ಈ ಬಾರಿ ಮೂರನೇ ಪ್ರಬಲ ಶಕ್ತಿಯಾಗಿ ಹೊರಹೊಮ್ಮುವ ಪ್ರಯತ್ನದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಇದೆ. ಬಹುತೇಕ ಚುನಾವಣಾ ತಜ್ಞರ ಪ್ರಕಾರ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ತೀವ್ರ ಪೈಪೋಟಿ ಇರುವ ಸಾಧ್ಯತೆಯಿದೆ.

ಇನ್ನು ಕೇರಳದಲ್ಲಿ ಒಟ್ಟು 140 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ. 1.45 ಲಕ್ಷಕ್ಕೂ ಹೆಚ್ಚು ವೃದ್ಧ ನಾಗರಿಕರು (85+) ಮತ್ತು 62,240 ಪಿಡಬ್ಲ್ಯೂಡಿ ಮತದಾರರಿಗೆ ಮನೆಯಲ್ಲೇ ಮತದಾನ ಮಾಡಲು ಇಸಿಐ ಅನುಮೋದನೆ ನೀಡಿದೆ. ಮೊದಲ ಬಾರಿಗೆ ಮತದಾನ ಮಾಡುವವರ (18-19 ವರ್ಷದೊಳಗಿನವರು) ಸಂಖ್ಯೆ 4,66,408 ಆಗಿದೆ.

ಅಸ್ಸಾಂನಲ್ಲಿ ಬಿಜೆಪಿಗೆ ಅಧಿಕಾರ ಉಳಿಸುವ ಸವಾಲು

ಅಸ್ಸಾಂನಲ್ಲಿ 2021ರಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿತ್ತು. ಆದರೆ ಈ ಬಾರಿ ಒಂದೇ ಹಂತದಲ್ಲಿ ಎಲ್ಲ 126 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಸರಿಸುಮಾರು 2.49 ಕೋಟಿ ಮಂದಿ ಅಸ್ಸಾಂನಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಈ ಪೈಕಿ ಮೊದಲ ಬಾರಿಗೆ ಮತದಾನ ಮಾಡುವವರ (18-19 ವರ್ಷದೊಳಗಿನವರು) ಒಟ್ಟು ಸಂಖ್ಯೆ 6,42,314 ಆಗಿದೆ. ರಾಜ್ಯದಲ್ಲಿ 3,716 ಮಹಿಳಾ-ನಿರ್ವಹಣೆಯ ಮತದಾನ ಕೇಂದ್ರಗಳನ್ನು ಹೊಂದಿದೆ.

ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಈ ಬಾರಿ ಅಸ್ಸಾಂನಲ್ಲಿ ‘ಹ್ಯಾಟ್ರಿಕ್’ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಆದರೆ ಸರ್ಕಾರ ಉಳಿಸುವುದು ಸವಾಲೂ ಹೌದು. ಎನ್‌ಡಿಎ ಅಸೋಮ್ ಗಣ ಪರಿಷತ್ (AGP) ಮತ್ತು ಯುನೈಟೆಡ್ ಪೀಪಲ್ಸ್ ಪಾರ್ಟಿ ಲಿಬರಲ್ (UPPL) ನೊಂದಿಗೆ ಮೈತ್ರಿ ಮಾಡಿಕೊಂಡು 90 ರಿಂದ 100 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ನಿರುದ್ಯೋಗ, ಬೆಲೆ ಏರಿಕೆ ಮತ್ತು ಭೂಹಕ್ಕುಗಳ ವಿತರಣೆಯಂತಹ ಜನಸಾಮಾನ್ಯರ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿದೆ. ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಗೌರವ್ ಗೊಗೊಯ್ ಅವರು 126 ಕ್ಷೇತ್ರಗಳಲ್ಲಿ 72-73 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಕೇರಳ ಚುನಾವಣೆಗೂ ಮುನ್ನ ಪಕ್ಷಗಳ ಸಂಕಟ: ಬಂಡಾಯ- ಪಕ್ಷಾಂತರ- ಉಚ್ಚಾಟನೆ ಸಂಕಷ್ಟ

ಕೇಂದ್ರಾಡಳಿತ ಪ್ರದೇಶ ಪುದುಚೆರಿಯಲ್ಲಿ ಚುನಾವಣೆ

ಕೇಂದ್ರಾಡಳಿತ ಪ್ರದೇಶ ಪುದುಚೆರಿ ತನ್ನ 30 ಸದಸ್ಯ ಬಲದ ವಿಧಾನಸಭಾ ಚುನಾವಣೆಗೆ ಸಿದ್ಧವಾಗಿದೆ. ಅರ್ಹ ವೃದ್ಧ ಮತದಾರರಲ್ಲಿ ಸುಮಾರು ಶೇ. 34ರಷ್ಟು ಮಂದಿ ಮನೆಯಲ್ಲೇ ಮತದಾನ ಮಾಡುವ ಸೌಲಭ್ಯವನ್ನು ಆರಿಸಿಕೊಂಡಿದ್ದಾರೆ. ಈ ವಾರದ ಆರಂಭದಲ್ಲೇ ಈ ಮತದಾನ ಪೂರ್ಣಗೊಂಡಿದೆ.

ಸಾಮಾನ್ಯವಾಗಿ ಪುದುಚೆರಿ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಡಿಎಂಕೆ ಮತ್ತು ಎನ್.ಆರ್. ಕಾಂಗ್ರೆಸ್ ನಡುವೆ ನೇರ ಪೈಪೋಟಿ ಕಂಡುಬರುತ್ತದೆ. ಈ ಬಾರಿ ಬಿಜೆಪಿಯು ತನ್ನ ನೆಲೆಯನ್ನು ವಿಸ್ತರಿಸಲು ಗಂಭೀರ ಪ್ರಯತ್ನ ನಡೆಸುತ್ತಿರುವುದರಿಂದ ಸ್ಪರ್ಧೆಯು ಮತ್ತಷ್ಟು ಕುತೂಹಲಕಾರಿಯಾಗಿದೆ.

ಇನ್ನುಳಿದಂತೆ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಎಲ್ಲ 234 ವಿಧಾನಸಭಾ ಕ್ಷೇತ್ರಗಳಿಗೂ ಏಪ್ರಿಲ್ 23ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಆದರೆ ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಮತದಾನವು ಏಪ್ರಿಲ್ 23ರಂದು ನಡೆಯಲಿದ್ದು ಒಟ್ಟು 152 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಎರಡನೇ ಹಂತದ ಮತದಾನವು ಏಪ್ರಿಲ್ 29ರಂದು ಉಳಿದ 142 ಕ್ಷೇತ್ರಗಳಿಗೆ ನಡೆಯಲಿದೆ. ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ಮೇ 4ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೈಬೀರಿಯಾ ಗುಹೆಯಲ್ಲಿ ಹಿಮಯುಗದ ರಹಸ್ಯ ಬಯಲು: 4 ಲಕ್ಷ ವರ್ಷಗಳ ಹಿಂದಿನ ಅಜ್ಞಾತ ಜೀವಿ ಪತ್ತೆ!

ದಕ್ಷಿಣ ಸೈಬೀರಿಯಾದ ಗುಹೆಗಳಲ್ಲಿ ದೊರೆತ ಸಾಮಾನ್ಯ ಮೂಳೆಯ ತುಣುಕುಗಳು ಇದೀಗ ವಿಕಾಸನದ...

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...