ಅಸ್ಸಾಂ, ಕೇರಳ, ಪುದುಚೇರಿ ವಿಧಾನಸಭಾ ಚುನಾವಣೆ: ಮತಗಟ್ಟೆಯತ್ತ ಹರಿದುಬರುತ್ತಿರುವ ಜನಸಾಗರ

Date:

ಅಸ್ಸಾಂ, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಯ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಭರ್ಜರಿಯಾಗಿ ಆರಂಭವಾಗಿದೆ. ಒಟ್ಟು 296 ಕ್ಷೇತ್ರಗಳಿಗೆ (ಕೇರಳದ 140, ಅಸ್ಸಾಂನ 126 ಹಾಗೂ ಪುದುಚೇರಿಯ 30) ಏಕಕಾಲದಲ್ಲಿ ಮತದಾನ ನಡೆಯುತ್ತಿದ್ದು, ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟಗಳ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮತದಾರರಿಗೆ ಕರೆ ನೀಡಿದ್ದಾರೆ. ಎಲ್ಲಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ಹಾಗೂ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.

- Advertisement -

ಅಸ್ಸಾಂ
ಅಸ್ಸಾಂನಲ್ಲಿ ಒಟ್ಟು 126 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, 2.5 ಕೋಟಿ ಮತದಾರರು 722 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಹ್ಯಾಟ್ರಿಕ್ ಸಾಧಿಸಲು ಹೊರಟಿದ್ದು, ಕಾಂಗ್ರೆಸ್ ನಾಯಕ ಗೌರವ್ ಗೊಗೊಯಿ ಅಧಿಕಾರ ಹಿಡಿಯಲು ಶ್ರಮಿಸುತ್ತಿದ್ದಾರೆ. ಶರ್ಮಾ ಅವರು ಜಲುಕ್ಬಾರಿ ಕ್ಷೇತ್ರದಿಂದ ಹಾಗೂ ಗೌರವ್ ಗೊಗೊಯಿ ಜೋರ್ಹತ್‌ನಿಂದ ಸ್ಪರ್ಧಿಸಿದ್ದಾರೆ. 2021ರ ಚುನಾವಣೆಯಲ್ಲಿ ಎನ್‌ಡಿಎ 76 ಸ್ಥಾನಗಳನ್ನು ಗೆದ್ದು ಆಡಳಿತಕ್ಕೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಕೇರಳ
ಕೇರಳದಲ್ಲಿ 140 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, 883 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಇಲ್ಲಿ 2.71 ಕೋಟಿ ಮತದಾರರಿದ್ದಾರೆ. ಆಡಳಿತಾರೂಢ ಎಲ್.ಡಿ.ಎಫ್ ಮತ್ತು ಯು.ಡಿ.ಎಫ್ ಮಧ್ಯೆ ನೇರ ಪೈಪೋಟಿ ಇದ್ದು, ಸಿಎಂ ಪಿಣರಾಯಿ ವಿಜಯನ್ (ಧರ್ಮಡಂ ಕ್ಷೇತ್ರ) ನೇತೃತ್ವದ ಎಲ್.ಡಿ.ಎಫ್ ಕೂಡ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದೆ. ವಿ.ಡಿ. ಸತೀಶನ್ (ಪರವೂರ್), ಕೆ.ಕೆ. ಶೈಲಜಾ (ಪೇರಾವೂರ್) ಹಾಗೂ ಬಿಜೆಪಿಯ ರಾಜೀವ್ ಚಂದ್ರಶೇಖರ್ (ನೇಮಂ ಕ್ಷೇತ್ರ) ಸ್ಪರ್ಧೆಯಲ್ಲಿದ್ದಾರೆ. ಎಲ್.ಡಿ.ಎಫ್ ತನ್ನ ಕಲ್ಯಾಣ ಯೋಜನೆಗಳ ಮೇಲೆ ನಂಬಿಕೆ ಇಟ್ಟಿದೆ. ಕಳೆದ 2021ರ ಚುನಾವಣೆಯಲ್ಲಿ ಎಲ್.ಡಿ.ಎಫ್ 97 ಸ್ಥಾನಗಳನ್ನು ಗೆದ್ದಿತ್ತು.

ಇದನ್ನು ಓದಿದ್ದೀರಾ? ಅಮೆರಿಕದ ಸಾಮ್ರಾಜ್ಯಶಾಹಿ ಅಹಂಕಾರಕ್ಕೆ ಇರಾನ್ ಸಡ್ಡು: ವಾಷಿಂಗ್ಟನ್ ಮುಂದಿಟ್ಟ 10 ಕಠಿಣ ಹಕ್ಕೊತ್ತಾಯಗಳು

ಪುದುಚೇರಿ ಮತ್ತು ಉಪಚುನಾವಣೆಗಳು
ಪುದುಚೇರಿಯ 30 ಕ್ಷೇತ್ರಗಳಲ್ಲಿ 9.5 ಲಕ್ಷ ಮತದಾರರು 294 ಅಭ್ಯರ್ಥಿಗLu ಕಣದಲ್ಲಿದ್ದಾರೆ. ಎನ್‌ಡಿಎ ಒಕ್ಕೂಟ ಸಿಎಂ ಎನ್. ರಂಗಸಾಮಿ (ತಟ್ಟಂಚಾವಡಿ ಮತ್ತು ಮಂಗಳಂ ಕ್ಷೇತ್ರ) ನೇತೃತ್ವದಲ್ಲಿ ‘ಡಬಲ್-ಎಂಜಿನ್’ ಸರ್ಕಾರದ ಆಧಾರದ ಮೇಲೆ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿದ್ದು, ಕಾಂಗ್ರೆಸ್-ಡಿಎಂಕೆ ನೇತೃತ್ವದ ಇಂಡಿಯಾ ಒಕ್ಕೂಟ ಇದನ್ನು ತೀವ್ರವಾಗಿ ಎದುರಿಸುತ್ತಿದೆ. ವಿಶೇಷವೆಂದರೆ ನಟ ವಿಜಯ್ ಅವರ ಟಿ.ವಿ.ಕೆ ಪಕ್ಷ ಕೂಡ ಮೂರನೇಯ ಶಕ್ತಿಯಾಗಿ ಚುನಾವಣಾ ಕಣಕ್ಕಿಳಿದಿದೆ. ಇದರ ಜೊತೆಗೆ, ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಸೇರಿದಂತೆ 5 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ಕೂಡ ನಡೆಯುತ್ತಿದೆ.ಈ ಚುನಾವಣೆಯ ಫಲಿತಾಂಶ ಮೇ 4 ರಂದು ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...