ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಅಸ್ಸಾಂ ಸಚಿವರ ಮಗಳ ಪ್ರತಿಭಟನೆ: ನನ್ನ ಮಗನೂ ವಿರುದ್ಧ ಮಾತನಾಡಬಹುದೆಂದ ಸಿಎಂ ಶರ್ಮಾ

Date:

ಅಸ್ಸಾಂ ಸಚಿವ ಕೇಶಬ್ ಮಹಂತ ಅವರ ಮಗಳು ಗುವಾಹಟಿಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಒತ್ತಾಯಿಸಿ ನಡೆದಿದ್ದ ವಿದ್ಯಾರ್ಥಿ ಪ್ರತಿಭಟನೆಯಲ್ಲಿ ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿರುವುದು ಅಸ್ಸಾಂ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -

ಈ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಈ ಸಂಬಂಧ ಸಚಿವರನ್ನು ಅನಗತ್ಯವಾಗಿ ಪೀಡಿಸಬೇಡಿ ಎಂದು ಸಾರ್ವಜನಿಕರಲ್ಲಿ ಮತ್ತು ಮಾಧ್ಯಮಗಳಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಮಕ್ಕಳ ಸಿದ್ಧಾಂತ ಅಥವಾ ಕ್ರಿಯೆಗಳಿಗೆ ಹೆತ್ತವರನ್ನು ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಸೋದರ ತೇಜ್, ಇತರರ ಬಿಡುಗಡೆ ಮಾಡದಿದ್ದರೆ ತೀವ್ರ ಹೋರಾಟ: ಸಿಎಂ ಸಾಮ್ರಾಟ್‌ಗೆ ತೇಜಸ್ವಿ ಯಾದವ್ ಗಡುವು

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಬೆಂಬಲ ಸೂಚಿಸಿ ಹಾಗೂ ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಗುವಾಹಾಟಿಯ ‘ಚಾಚಲ್’ ಪ್ರತಿಭಟನಾ ಸ್ಥಳದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿತ್ತು. ಕಠಿಣ ಪೊಲೀಸ್ ಹಾಗೂ ಸಿಆರ್‌ಪಿಎಫ್ ಬಂದೋಬಸ್ತ್ ನಡುವೆ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ಯುವಕರು ಭಾಗವಹಿಸಿದ್ದರು.

ಈ ಪ್ರತಿಭಟನೆಯಲ್ಲಿ ಅಸ್ಸಾಂನ ಕಂದಾಯ ಮತ್ತು ವಿಪತ್ತು ನಿರ್ವಹಣಾ ಸಚಿವ ಹಾಗೂ ಬಿಜೆಪಿ ಮಿತ್ರಪಕ್ಷವಾದ ‘ಅಸೋಂ ಗಣ ಪರಿಷತ್’ (AGP) ನಾಯಕ ಕೇಶಬ್ ಮಹಂತ ಅವರ ಪುತ್ರಿ ದಿಬೀಸಾ ಮಹಂತ ಭಾಗವಹಿಸಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸದ್ಯ ಸಚಿವ ಕೇಶಬ್ ಮಹಂತ ಈ ಘಟನೆಯ ಕುರಿತು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ನಿಂದ (UK) ಎರಡು ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿರುವ ದಿಬೀಸಾ, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗವನ್ನು ಖಂಡಿಸಿದ್ದರು.

“ವಿದ್ಯಾರ್ಥಿಗಳು ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಬಯಸಿದ್ದರು. ಅವರ ಧೈರ್ಯವನ್ನು ನೋಡಿ ನಾನೂ ಇಲ್ಲಿಗೆ ಬರಲು ಪ್ರೇರೇಪಿತಳಾದೆ” ಎಂದು ಅವರು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದರು.

“ಇದು ತುಂಬಾ ದುಃಖಕರ ವಿಚಾರ. ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ನನಗೆ ಎಷ್ಟು ನೋವುಂಟಾಗಿದೆ ಎಂಬುದನ್ನು ವ್ಯಕ್ತಪಡಿಸಲೂ ಸಾಧ್ಯವಿಲ್ಲ. ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನೆ ಮಾಡಲು ಬಯಸಿದ್ದರು. ಆದರೆ ಹಿಂಸೆ ನಡೆದಿದೆ. ಲಾಠಿ ಚಾರ್ಜ್ ನಡೆದಿದೆ, ಅಶ್ರುವಾಯು ಪ್ರಯೋಗ ನಡೆದಿದೆ. ಆದರೆ ಆ ದಿನ ಹಾಜರಿದ್ದ ಮತ್ತು ತಮ್ಮ ಧೈರ್ಯವನ್ನು ತೋರಿಸಿದ ಪ್ರತಿಯೊಬ್ಬ ವಿದ್ಯಾರ್ಥಿಯ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ. ಅವರು ನನಗೆ ಇಲ್ಲಿಗೆ ಬರಲು ಸ್ಫೂರ್ತಿ ನೀಡಿದರು” ಎಂದು ಹೇಳಿದ್ದಾರೆ.

ಶನಿವಾರ ರಾತ್ರಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, “ಮಕ್ಕಳು ಬೆಳೆದು ದೊಡ್ಡವರಾದ ಮೇಲೆ ಅವರ ನಿರ್ಧಾರಗಳಿಗೆ ಹೆತ್ತವರನ್ನು ಹೊಣೆಗಾರರನ್ನಾಗಿ ಮಾಡುವುದು ತಪ್ಪಾಗುತ್ತದೆ. ನನ್ನ ಸ್ವಂತ ಸಹೋದರನೇ ನಾನು ಹೇಳುವ ಅನೇಕ ವಿಷಯಗಳನ್ನು ಒಪ್ಪುವುದಿಲ್ಲ. ನನ್ನ ಮಕ್ಕಳೂ ಸಹ ನನ್ನ ಕೆಲವು ಅಭಿಪ್ರಾಯಗಳನ್ನು ಒಪ್ಪುವುದಿಲ್ಲ. ನಾಳೆ ನನ್ನ ಮಗನೇನಾದರೂ ಸರ್ಕಾರದ ವಿರುದ್ಧ ಮಾತನಾಡಿದರೆ ಆಶ್ಚರ್ಯ ಪಡಬೇಕಿಲ್ಲ. ಆತ ಭವಿಷ್ಯದಲ್ಲಿ ವಕೀಲನಾಗಲಿದ್ದು, ನನಗೆ ಇಷ್ಟವಿಲ್ಲದ ಜನರ ಪರವಾಗಿಯೂ ವಾದಿಸಬಹುದು” ಎಂದು ಸಮರ್ಥಿಸಿಕೊಂಡಿದ್ದಾರೆ.

“ದಿಬೀಸಾ ಮೋದಿಜೀ ವಿರುದ್ಧ ಮಾತನಾಡಿರುವುದು ನನಗೆ ಬೇಸರ ತಂದಿದೆ. ಮುಂದೊಮ್ಮೆ ಆಕೆಯನ್ನು ಭೇಟಿಯಾದಾಗ ಈ ಬಗ್ಗೆ ಮಾತನಾಡುತ್ತೇನೆ. ಆಕೆ ಹೇಳಿದ್ದು ತಪ್ಪು ಇರಬಹುದು, ಆದರೆ ಅದಕ್ಕಾಗಿ ಆಕೆಯ ತಂದೆಯನ್ನು (ಸಚಿವರನ್ನು) ಏಕೆ ಪೀಡಿಸಬೇಕು?” ಎಂದು ಶರ್ಮಾ ಪ್ರಶ್ನಿಸಿದ್ದಾರೆ.

ಇನ್ನು ಪ್ರತಿಭಟನೆಗೆ ಸಂಬಂಧಿಸಿದಂತೆ ಅಸ್ಸಾಂ ಪೊಲೀಸರು ದೇಶದ ಸಾರ್ವಭೌಮತ್ವ ಮತ್ತು ಅಖಂಡತೆಗೆ ಧಕ್ಕೆ ತಂದಿರುವ ಆರೋಪ ಹಾಗೂ ಸಂಚು ರೂಪಿಸಿದ ಆರೋಪದಡಿ ಕನಿಷ್ಠ ಆರು ಜನರನ್ನು ಬಂಧಿಸಿದ್ದಾರೆ. ಈ ನಡುವೆ, ದೇಶಾದ್ಯಂತ ಯುವಜನರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ನಾಡಿನ ಹಿರಿಯ ಸಾಹಿತಿಗಳು, ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿತೈಷಿಗಳ ಒತ್ತಾಯದ...

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...