ಮಳೆಗೆ ತತ್ತರಿಸಿದ ಅಸ್ಸಾಂ: 22,000ಕ್ಕೂ ಹೆಚ್ಚು ಜನರ ಬದುಕು ಅತಂತ್ರ, ರೈಲು ಸಂಚಾರ ಬಂದ್

Date:

ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಅಸ್ಸಾಂಗೆ ಆಪತ್ತಾಗಿ ಪರಿಣಮಿಸಿದೆ. ಅಸ್ಸಾಂನ 6 ಜಿಲ್ಲೆಗಳಲ್ಲಿ ಪ್ರವಾಹದ ಅಬ್ಬರ ಜೋರಾಗಿದೆ. ಸುಮಾರು 22,000 ಜನರ ಜೀವನ ಅತಂತ್ರವಾಗಿದೆ. ಜತೆಗೆ ರೈಲುಸಂಪರ್ಕವೂ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.

- Advertisement -

ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಇತ್ತೀಚಿನ ವರದಿಯ ಪ್ರಕಾರ, ಧೇಮಾಜಿ, ನಲ್ಬಾರಿ, ದಿಬ್ರುಗಢ್, ಚಿರಂಗ್, ಲಖಿಂಪುರ್ ಮತ್ತು ಕೊಕ್ರಾಜಾರ್ ಜಿಲ್ಲೆಗಳು ಪ್ರವಾಹದ ಅಪಾಯಕ್ಕೆ ಸಿಲುಕಿವೆ. ಒಟ್ಟು 22,124 ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪೈಕಿ ಧೇಮಾಜಿ ಜಿಲ್ಲೆಯ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಅಲ್ಲಿನ 15,483ಕ್ಕೂ ಹೆಚ್ಚು ಜನರು ಪ್ರವಾಹದ ದವಡೆಗೆ ಸಿಲುಕಿ ಪರದಾಡುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಪ್ರವಾಹದ ಆರ್ಭಟಕ್ಕೆ ಹಳ್ಳಿಗಳು ಮತ್ತು ಕೃಷಿ ಭೂಮಿಗಳು ಜಲಾವೃತವಾಗಿರುವುದು ಮಾತ್ರವಲ್ಲದೆ, ಸಾರಿಗೆ ಸಂಪರ್ಕವೂ ಸಂಪೂರ್ಣ ಕಡಿತಗೊಂಡಿದೆ. ನದಿಯ ಸತತ ಸವೆತದಿಂದಾಗಿ ಅರ್ಚಿಪಥರ್ ಮತ್ತು ಸಿಮೆನ್ ಚಾಪರಿ ನಿಲ್ದಾಣಗಳ ನಡುವಿನ ಪ್ರಮುಖ ರೈಲ್ವೆ ಸೇತುವೆಯ ಪಿಲ್ಲರ್‌ವೊಂದು ಹಾನಿಗೊಳಗಾಗಿದೆ.

ಇದನ್ನೂ ಓದಿ: ಶೇ.75ರಷ್ಟು ಕುಸಿದ ಆಜ್‌ತಕ್‌, ಇಂಡಿಯಾ ಟುಡೇ ಲಾಭ!

ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ರೈಲು ಸಂಚಾರವನ್ನು ಮುಂದಿನ ಸೂಚನೆವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಈಶಾನ್ಯ ಗಡಿ ರೈಲ್ವೆ ವಕ್ತಾರರು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇರಿಸಿದ್ದಾರೆ. ನಿರಂತರ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸ್ಥಳೀಯ ಆಡಳಿತ ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...