ತನ್ನ ಸ್ನೇಹಿತೆ ಮೇಲೆಯೇ ಹಲ್ಲೆಗೈದು ಅತ್ಯಾಚಾರ ಎದಗಿದ್ದ ಆರೋಪದ ಮೇಲೆ 20 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಮನೆಯ ಅಕ್ರಮ (ಒತ್ತುವರಿ ಮಾಡಿ ನಿರ್ಮಾಣ) ಭಾಗವನ್ನು ಅಧಿಕಾರಿಗಳು ಕೆಡವಿದ್ದಾರೆ.
ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ಅಯಾನ್ ಖಾನ್ ಜೊತೆ ಹತ್ತು ದಿನಗಳಿಂದ ವಾಸವಾಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. ತನ್ನನ್ನು ವಿವಾಹವಾಗುವಂತೆ ಕೇಳಿದಾಗ, ಆತ ಹಲ್ಲೆ ನಡೆಸಿದ್ದಾನೆ, ಬೆಲ್ಟ್‌ನಿಂದ ಥಳಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.
ಆರೋಪಿ ತನ್ನ ಬೈಕ್‌ನಲ್ಲಿ 60 ಲೀಟರ್ ದೇಶೀ ಮದ್ಯ ಸಾಗಿಸುತ್ತಿದ್ದಾಗ ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆತನ ವಿರುದ್ಧ ಅತ್ಯಾಚಾರ, ಹಲ್ಲೆ ಮತ್ತು ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ಆತನ ಮನೆಯ ಅಕ್ರಮ ಭಾಗವನ್ನು ಭಾನುವಾರ ಅಧಿಕಾರಿಗಳು ಕೆಡವಿದ್ದಾರೆ.