ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್ 1 ರಂದು ನಡೆಯಲಿದೆ.
ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ ಮತ ಎಣಿಕೆ ಅಕ್ಟೋಬರ್ 4 ರಂದು ನಡೆಯಲಿದೆ. ಎರಡೂ ರಾಜ್ಯಗಳ ವಿಧಾನಸಭೆಯು 90 ಕ್ಷೇತ್ರಗಳನ್ನು ಹೊಂದಿವೆ.
ಜಮ್ಮು ಕಾಶ್ಮೀರದಲ್ಲಿ ಮೊದಲ ಹಂತದಲ್ಲಿ 24 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದರೆ, ಎರಡನೇ ಹಂತದಲ್ಲಿ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತ್ತು ಮೂರನೇ ಹಂತದಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಇದೇ ಸಮಯದಲ್ಲಿ 90 ವಿಧಾನಸಭಾ ಕ್ಷೇತ್ರಗಳಿರುವ ಹರ್ಯಾಣದ ವಿಧಾನಸಭಾ ಚುನಾವಣೆಯನ್ನೂ ಘೋಷಿಸಲಾಗಿದೆ. ಇಲ್ಲಿ
ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಸೆ.12ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದರೆ, ಸೆ.16ರಂದು ನಾಮಪತ್ರ
ಹಿಂಪಡೆಯಲು ಕೊನೆಯ ದಿನವಾಗಿದೆ. ಅಕ್ಟೋಬರ್ 1ರಂದು ಮತದಾನ ನಡೆಯಲಿದ
ಜಮ್ಮು ಕಾಶ್ಮೀರ ರಾಜ್ಯವನ್ನು 2019 ರಲ್ಲಿ, ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿ ಸಂವಿಧಾನದ 370 ವಿಧಿಯಲ್ಲಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗಿತ್ತು. ಅಂದಿನಿಂದ ಜಮ್ಮು ಮತ್ತು ಕಾಶ್ಮೀರವು ಲೆಫ್ಟಿನೆಂಟ್ ಗವರ್ನರ್ ಆಳ್ವಿಕೆಯಲ್ಲಿದೆ.


