ಭಾರತ-ಪಾಕ್ ಗಡಿ ಬಳಿಯ ಚೆಕ್‌ಪಾಯಿಂಟ್‌ನಲ್ಲಿ ಪಂಜಾಬ್‌ನ ಇಬ್ಬರು ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆ

Date:

ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಬಳಿಯ ಚೆಕ್‌ಪಾಯಿಂಟ್‌ನಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಪಂಜಾಬ್ ಪೊಲೀಸ್ ಸಿಬ್ಬಂದಿ ನಿಗೂಢವಾಗಿ ಶವವಾಗಿ ಪತ್ತೆಯಾಗಿದ್ದಾರೆ.

- Advertisement -

ಗುರುದಾಸ್‌ಪುರ ಜಿಲ್ಲೆಯ ದೋರಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಅಡಿಯಾನ್ ಗ್ರಾಮದಲ್ಲಿ ಕರ್ತವ್ಯದಲ್ಲಿದ್ದ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಎಎಸ್‌ಐ ಗುರ್ನಾಮ್ ಸಿಂಗ್ ಮತ್ತು ಗೃಹರಕ್ಷಕ ದಳದ ಜವಾನ್ ಅಶೋಕ್ ಕುಮಾರ್ ಅವರು ಹೊರಠಾಣೆಯಾಗಿ ಕಾರ್ಯನಿರ್ವಹಿಸುವ ಕೋಣೆಯೊಳಗೆ ಶವಗಳು ಪತ್ತೆಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಭಾರತೀಯರನ್ನು ಕೊಂದರೆ ಬೆಲೆ ತೆರಬೇಕಾಗುತ್ತದೆ: ಪಾಕಿಸ್ತಾನಕ್ಕೆ ಶಶಿ ತರೂರ್ ಎಚ್ಚರಿಕೆ

ತಡರಾತ್ರಿ ಅಪರಿಚಿತ ದಾಳಿಕೋರರು ಗುಂಡಿಕ್ಕಿ ಕೊಂದಿರಬಹುದು ಎಂದು ಹೇಳಲಾಗಿದೆ. ಆದರೆ ಇನ್ನೂ ಸಿಬ್ಬಂದಿ ಪರಸ್ಪರ ಗುಂಡು ಹಾರಿಸಿಕೊಂಡಿದ್ದಾರೆಯೇ ಅಥವಾ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಗುರುದಾಸ್‌ಪುರ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಉಪ ಮಹಾನಿರೀಕ್ಷಕ (ಗಡಿ) ಸಂದೀಪ್ ಗೋಯೆಲ್, ಗುರುದಾಸ್‌ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ, ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜಿಂದರ್ ಮನ್ಹಾಸ್ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

“ಇಬ್ಬರ ಕೊಲೆ ಹೇಗೆ ನಡೆದಿದೆ, ಯಾರು ನಡೆಸಿದ್ದು ಎಂಬ ಬಗ್ಗೆ ನಾವು ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತಿದ್ದೇವೆ. ಪ್ರಕರಣದಲ್ಲಿ ಯಾರಾದರೂ ಭಾಗಿಯಾಗಿದ್ದರೆ, ಅವರ ವಿರುದ್ಧ ಕ್ರಮಕೈಗೊಳ್ಳಲಾಗುವುದು. ವಿಧಿವಿಜ್ಞಾನ ತಂಡಗಳು ಸ್ಥಳವನ್ನು ಪರಿಶೀಲಿಸಿವೆ” ಎಂದು ಸಂದೀಪ್ ಗೋಯೆಲ್ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಭಾರತ-ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ: ಡೊನಾಲ್ಡ್ ಟ್ರಂಪ್ ಪುನರುಚ್ಚಾರ

ಇನ್ನು ಗುರುದಾಸ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಮಾತನಾಡಿ, “ಪೊಲೀಸರು ಅಪರಾಧ ಸ್ಥಳವನ್ನು ಸುತ್ತುವರೆದಿದ್ದಾರೆ” ಎಂದು ಹೇಳಿದ್ದಾರೆ. ದರೋಡೆಕೋರರು ಅಥವಾ ಭಯೋತ್ಪಾದಕರ ಕೃತ್ಯದ ಆಯಾಮದಲ್ಲಿಯೂ ತನಿಖೆ ಮುಂದುವರೆದಿದೆ. ಆರಂಭಿಕ ವರದಿಗಳು ಇಬ್ಬರು ಪೊಲೀಸರು ವಾಗ್ವಾದಕ್ಕೆ ಇಳಿದಿರಬಹುದು, ನಂತರ ಗುಂಡು ಹಾರಿಸಿದ್ದಾರೆ ಎಂಬ ಅನುಮಾನವನ್ನು ಹುಟ್ಟಿಸಿದೆ. ಆದರೆ ಪೊಲೀಸರು ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿದೆ ಮತ್ತು ಈವರೆಗೆ ಯಾವುದೇ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ಹೇಳಿದ್ದಾರೆ.

ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಯಾನ್ ಗ್ರಾಮವನ್ನು ‘ವೈಬ್ರಂಟ್ ವಿಲೇಜ್’ ಎಂದು ಗುರುತಿಸಿದೆ. ಕೇಂದ್ರ ಪ್ರಾಯೋಜಿತ ಯೋಜನೆ ಇದಾಗಿದ್ದು, ಚೀನಾ ಸೇರಿದಂತೆ ಪಾಕಿಸ್ತಾನ, ನೇಪಾಳ, ಬಾಂಗ್ಲಾದೇಶ, ಭೂತಾನ್ ಮತ್ತು ಮ್ಯಾನ್ಮಾರ್ ಗಡಿಯಲ್ಲಿರುವ ದೂರದ ಗ್ರಾಮಗಳ ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಮತ್ತು ಜನರ ಜೀವನ ಮಟ್ಟವನ್ನು ಸುಧಾರಿಸುವ ಗುರಿಯನ್ನು ವೈಬ್ರಂಟ್ ವಿಲೇಜ್ ಯೋಜನೆ ಹೊಂದಿದೆ. ಘಟನೆ ನಡೆದ ಪ್ರದೇಶವು ಭಾರತ-ಪಾಕ್ ಗಡಿಯಿಂದ ಸುಮಾರು 2 ಕಿ.ಮೀ ದೂರದಲ್ಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...