ದೆಹಲಿ ಪ್ರತಿಭಟನೆಯಲ್ಲಿ ಕನಿಷ್ಠ 10 ಮಂದಿಗೆ ಪೆಲೆಟ್ ಗಾಯ: ಆರ್‌ಟಿಐ ಮಾಹಿತಿ

Date:

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಜುಲೈ 20ರಂದು ದೆಹಲಿಯಲ್ಲಿ ನಡೆದ ‘ಚಲೋ ಸಂಸತ್’ ಪ್ರತಿಭಟನಾ ಮೆರವಣಿಗೆಯಲ್ಲಿ ಕನಿಷ್ಠ 10 ಮಂದಿ ಪೆಲೆಟ್‌ ಗುಂಡುಗಳಿಂದ ಗಾಯಗೊಂಡಿರುವುದು ಆರ್‌ಟಿಐ ಮೂಲಕ ಬಹಿರಂಗವಾಗಿದೆ.

- Advertisement -

ತೃಣಮೂಲ ಕಾಂಗ್ರೆಸ್ ನಾಯಕ ಸಾಕೇತ್ ಗೋಖಲೆ ಅವರು ಸಲ್ಲಿಸಿದ್ದ ಆರ್‌ಟಿಐ ಅರ್ಜಿಗೆ ದೆಹಲಿಯ ಎರಡು ಆಸ್ಪತ್ರೆಗಳು ನೀಡಿರುವ ಉತ್ತರದಲ್ಲಿ ಈ ಮಾಹಿತಿ ಲಭ್ಯವಾಗಿದೆ. ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜು, ಪ್ರತಿಭಟನೆಯ ಬಳಿಕ ‘ಪೆಲೆಟ್/ಪ್ರಾಜೆಕ್ಟೈಲ್’ ಗಾಯಗಳೊಂದಿಗೆ 9 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು ಎಂದು ತಿಳಿಸಿದೆ. ಸಫ್ದರ್‌ಜಂಗ್ ಆಸ್ಪತ್ರೆ ಕೂಡ ಇದೇ ರೀತಿಯ ಗಾಯಗೊಂಡ ಒಬ್ಬ ವ್ಯಕ್ತಿ ಚಿಕಿತ್ಸೆ ಪಡೆದಿದ್ದಾಗಿ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಮೂಲಕ ಎರಡೂ ಆಸ್ಪತ್ರೆಗಳ ದಾಖಲೆಗಳ ಪ್ರಕಾರ ಪೆಲೆಟ್‌ ಗಾಯಗೊಂಡವರ ಸಂಖ್ಯೆ ಕನಿಷ್ಠ 10ಕ್ಕೆ ಏರಿಕೆಯಾಗಿದೆ. ಆದರೆ ದೆಹಲಿಯ ಏಮ್ಸ್‌ ಹಾಗೂ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗಳಿಂದ ಇನ್ನೂ ಮಾಹಿತಿ ಬಂದಿಲ್ಲ ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ. ಹೀಗಾಗಿ ಗಾಯಗೊಂಡವರ ಒಟ್ಟು ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಜುಲೈ 20ರಂದು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ‘ಕಾಕ್‌ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ಜಂತರ್ ಮಂತರ್‌ನಿಂದ ಸಂಸತ್‌ ಭವನದತ್ತ ಪ್ರತಿಭಟನಾ ಮೆರವಣಿಗೆ ನಡೆಸಲಾಗಿತ್ತು.

ಪ್ರತಿಭಟನೆ ನಡೆದ ಮರುದಿನ ದೆಹಲಿ ಪೊಲೀಸರು, ಪ್ರತಿಭಟನಾಕಾರರ ವಿರುದ್ಧ ಪೆಲೆಟ್‌ ಗನ್ ಬಳಸಲಾಗಿದೆ ಎಂಬ ವರದಿಗಳನ್ನು ‘ಸುಳ್ಳು ಮತ್ತು ದಾರಿತಪ್ಪಿಸುವಂಥದ್ದು’ ಎಂದು ತಳ್ಳಿಹಾಕಿದ್ದರು. ಆದರೆ ಕೇಂದ್ರ ಮೀಸಲು ಪೊಲೀಸ್ ಪಡೆ (CRPF)ಯ ರ‍್ಯಾಪಿಡ್ ಆಕ್ಷನ್ ಫೋರ್ಸ್‌ (RAF) ದಾಖಲಿಸಿರುವ ಜನರಲ್ ಡೈರಿ ನಮೂದನ್ನು ಉಲ್ಲೇಖಿಸಿ ‘ದಿ ಹಿಂದೂ’ ವರದಿ ಮಾಡಿದ್ದು, ಹಿರಿಯ ದೆಹಲಿ ಪೊಲೀಸ್ ಅಧಿಕಾರಿಯ ಸೂಚನೆಯ ಮೇರೆಗೆ ಪ್ರತಿಭಟನಾಕಾರರತ್ತ ಪೆಲೆಟ್‌ ಗುಂಡು ಹಾರಿಸಲಾಗಿತ್ತು ಎಂದು ಹೇಳಿದೆ.

ಪ್ರತಿಭಟನೆಯಲ್ಲಿ ಪೆಲೆಟ್‌ ಗಾಯಗೊಂಡಿರುವ ಪ್ರಶಾಂತ್ ಕುಮಾರ್ ಸಿಂಗ್ ಹಾಗೂ ಶೇಖ್ ಇರ್ಷಾದ್ ಮನ್ಸೂರ್ ಮಾಜಿ ಗುಪ್ತಚರ ದಳದ ವಿಶೇಷ ನಿರ್ದೇಶಕ ಯಶೋವರ್ಧನ್ ಆಜಾದ್ ಅವರೊಂದಿಗೆ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಪ್ರತಿಭಟನೆಗಳು ಹಾಗೂ ಗುಂಪು ನಿಯಂತ್ರಣದ ಸಂದರ್ಭದಲ್ಲಿ ಪೆಲೆಟ್‌ ಗನ್ ಬಳಕೆಯನ್ನು ನಿಷೇಧಿಸಬೇಕು ಎಂದು ಅವರು ಅರ್ಜಿ ಸಲ್ಲಿಸಿದ್ದಾರೆ.

ಈ ನಡುವೆ, ಸಾಕೇತ್ ಗೋಖಲೆ ಅವರು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ, ಈ ಹಿಂದೆ ಜುಲೈ 20ರ ಪ್ರತಿಭಟನೆಯಲ್ಲಿ ಐವರಿಗೆ ಪೆಲೆಟ್‌ ಗಾಯಗಳಾಗಿವೆ ಎಂಬ ವರದಿಗಳಿದ್ದವು. ಆದರೆ ಆಸ್ಪತ್ರೆಗಳ ದಾಖಲೆಗಳ ಪ್ರಕಾರ ದೃಢಪಟ್ಟ ಸಂಖ್ಯೆ ಕನಿಷ್ಠ 10 ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾರ್ಖಂಡ್‌ ಪ್ರತಿಭಟನೆ | ಪೊಲೀಸರ ಮೇಲೆ ಕಲ್ಲು ತೂರಿದ್ದು ಬಿಜೆಪಿ ಕಾರ್ಯಕರ್ತರೇ?; ಕಾಂಗ್ರೆಸ್‌ ಆರೋಪವೇನು?

ಪೆಲೆಟ್‌ ಗನ್ ಬಳಕೆಯ ಕುರಿತು ಸರ್ಕಾರ ಮತ್ತು ಪೊಲೀಸರ ವಿರುದ್ಧವೂ ಅವರು ಪ್ರಶ್ನೆಗಳನ್ನು ಎತ್ತಿದ್ದಾರೆ. ರಾಜಧಾನಿ ದೆಹಲಿಯಲ್ಲೇ ಶಸ್ತ್ರಾಸ್ತ್ರವಿಲ್ಲದ ಪ್ರತಿಭಟನಾಕಾರರ ಮೇಲೆ ಪೆಲೆಟ್‌ ಗನ್ ಬಳಸಲಾಗಿದೆ ಎಂಬ ಆರೋಪವಿದ್ದು, ಗಾಯಗೊಂಡವರ ಅಧಿಕೃತ ಸಂಖ್ಯೆಯನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಆರ್‌ಟಿಐ ಉತ್ತರದ ಪ್ರಕಾರ, ಲೇಡಿ ಹಾರ್ಡಿಂಜ್ ಮೆಡಿಕಲ್ ಕಾಲೇಜಿಗೆ ಪ್ರತಿಭಟನೆಯ ಬಳಿಕ 81 ಮಂದಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ 46 ಮಂದಿ ಪ್ರತಿಭಟನಾಕಾರರು ಹಾಗೂ 35 ಮಂದಿ ಪೊಲೀಸ್ ಸಿಬ್ಬಂದಿ. ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ 25 ಪೊಲೀಸ್ ಸಿಬ್ಬಂದಿ ಹಾಗೂ ನಾಲ್ವರು ಪ್ರತಿಭಟನಾಕಾರರು ಚಿಕಿತ್ಸೆ ಪಡೆದಿದ್ದಾರೆ.

ಆಸ್ಪತ್ರೆಗಳ ದಾಖಲೆಗಳು ಪೆಲೆಟ್‌ ಗಾಯಗಳ ಕುರಿತು ಹೊಸ ಮಾಹಿತಿಯನ್ನು ನೀಡಿರುವ ಬೆನ್ನಲ್ಲೇ, ಪ್ರತಿಭಟನಾಕಾರರ ಮೇಲೆ ಪೆಲೆಟ್‌ ಗನ್ ಬಳಸಲಾಗಿದೆಯೇ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಈ ಕುರಿತು ಸರ್ಕಾರ ಮತ್ತು ಪೊಲೀಸ್ ಇಲಾಖೆಯಿಂದ ಇನ್ನಷ್ಟು ಸ್ಪಷ್ಟ ಮಾಹಿತಿ ಹೊರಬರುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...