ಆಂಧ್ರಪ್ರದೇಶ: ಲಾರಿಗೆ ಮುಖಾಮುಖಿ ಡಿಕ್ಕಿಯಾಗಿ ಖಾಸಗಿ ಬಸ್‌ಗೆ ಬೆಂಕಿ; 14 ಮಂದಿ ಸಜೀವ ದಹನ

Date:

ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ಪರಿಣಾಮ ಎರಡೂ ವಾಹನಗಳಿಗೆ ಬೆಂಕಿ ಹೊತ್ತಿಕೊಂಡು ಕನಿಷ್ಠ 14 ಜನರು ಸಜೀವ ದಹನವಾಗಿರುವ ಭೀಕರ ದುರಂತ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

- Advertisement -

ಪ್ರಾಥಮಿಕ ವರದಿಗಳ ಪ್ರಕಾರ, ವಾಹನಗಳು ಡಿಕ್ಕಿಯಾದ ರಭಸಕ್ಕೆ ಕೆಲವೇ ನಿಮಿಷಗಳಲ್ಲಿ ಬೃಹತ್ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮವಾಗಿ ಬಸ್ಸಿನಲ್ಲಿದ್ದ 14 ಪ್ರಯಾಣಿಕರು ಬೆಂಕಿಗಾಹುತಿಯಾಗಿದ್ದಾರೆ. ಗಾಯಗೊಂಡಿರುವ ಸುಮಾರು 20 ಮಂದಿಯಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನು ಓದಿದ್ದೀರಾ? ಅಸ್ಸಾಂ ವಿಧಾನಸಭಾ ಚುನಾವಣೆ: ಪಕ್ಷಾಂತರಿಗಳಿಗೆ ಪಾಠ ಕಲಿಸುತ್ತಾರೆಯೇ ಮತದಾರರು?

ಮಾಹಿತಿ ಲಭ್ಯವಾದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ತ್ವರಿತಗತಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದರು. ಗಾಯಾಳುಗಳನ್ನು ಮಾರ್ಕಾಪುರ ಆಸ್ಪತ್ರೆ ಸೇರಿದಂತೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೀಡಾದ ಬಸ್ ನೆರೆಯ ತೆಲಂಗಾಣದ ಜಗಿತಿಯಾಲ್‌ನಿಂದ ಪ್ರಕಾಶಂ ಜಿಲ್ಲೆಯ ಪೊದಿಲಿಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಸದ್ಯ ಘಟನೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದ್ದು, ಮೃತರ ಗುರುತು ಪತ್ತೆಹಚ್ಚುವ ಕಾರ್ಯ ಹಾಗೂ ಸಂತ್ರಸ್ತರಿಗೆ ಮತ್ತು ಬದುಕುಳಿದವರಿಗೆ ಅಗತ್ಯ ನೆರವು ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುದ್ದೇಬಿಹಾಳ | ದಾಸೋಹಿ ರೈತ ಉತ್ಪಾದಕ ಸಹಕಾರಿ ಸಂಘದ ಆರ್ಥಿಕ ಚಟುವಟಿಕೆ: ಗವಿಸಿದ್ದೇಶ್ವರ ಶ್ರೀಗಳಿಂದ ಚಾಲನೆ

ರೈತರೇ ಮಾಲೀಕರಾಗಿ, ರೈತರ ಆರ್ಥಿಕ ಸಬಲೀಕರಣವನ್ನೇ ಕೇಂದ್ರವಾಗಿಟ್ಟುಕೊಂಡು ಅಸ್ತಿತ್ವಕ್ಕೆ ಬಂದಿರುವ ದಾಸೋಹಿ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...