ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟು, ಹಲವು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಸ್ಪೋಟಕ್ಕೆ ಕಾರಣ ತಿಳಿದುಬಂದಿಲ್ಲ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜೇಶ್ ಕುಮಾರ್ ಶ್ರೀವಾತ್ಸವ, ಕೌಶಂಬಿ ಜಿಲ್ಲೆಯ ಬರ್‌ವಾರಿಯಲ್ಲಿದ್ದ ಕಾರ್ಖಾನೆ ಮಾರಾಟ ಹಾಗೂ ತಯಾರಿಗೆಗೆ ಪರವಾನಗಿ ಪಡೆದುಕೊಂಡಿತ್ತು. ಘಟನೆಯಲ್ಲಿ ನಾಲ್ವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ. ಕೆಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಪಕ್ಷ ನಾಯಕ ಅಶೋಕ್ ಮತ್ತು ಸಾರ್ವಜನಿಕ ಸಭ್ಯತೆ
ಸದ್ಯ ಬೆಂಕಿಯು ನಿಯಂತ್ರಣಕ್ಕೆ ಬಂದಿದ್ದು, ಪ್ರಕರಣವನ್ನು ದಾಖಲಿಸಲಾಗಿದೆ. ಮಾಧ್ಯಮಗಳಲ್ಲಿರುವ ದೃಶ್ಯದಂತೆ ಬೆಂಕಿಯಿಂದಾಗಿ ಹೊಗೆಯು ಆಕಾಶದೆತ್ತರಕ್ಕೆ ಆವರಿಸಿದೆ. ಸ್ಥಳೀಯರು ಮತ್ತು ಪೊಲೀಸರು ಬೆಂಕಿಯನ್ನು ನಂದಿಸುತ್ತಿದ್ದಾರೆ.
ಈ ತಿಂಗಳ ಆರಂಭದಲ್ಲಿ ಕೂಡ ಮಧ್ಯ ಪ್ರದೇಶದ ಹಾರ್ದ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವುಂಟಾಗಿ 11 ಮಂದಿ ಮೃತಪಟ್ಟು 170ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
