ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿಯಾಗಿ ಕನಿಷ್ಠ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
VIDEO | At least six persons were killed after they stepped down from their train on the tracks and were run over by another train coming from the opposite direction in North Maharashtra's Jalgaon district on Wednesday evening.
— Press Trust of India (@PTI_News) January 22, 2025
Visuals from the spot near Pachora station, where… pic.twitter.com/EKQU5LE50w
ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿ ಹರಡುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹೊರಕ್ಕೆ ಜಿಗಿದು ಹಳಿಯಲ್ಲಿ ನಿಂತಿದ್ದರು. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರ ಮೇಲೆ ಹರಿದಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’; ರೈಲು ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳದ ಕೇಂದ್ರದ ವಿರುದ್ಧ ರಾಹುಲ್ ಕಿಡಿ
ಸಂಜೆ ಸುಮಾರು ಐದು ಗಂಟೆ ಸುಮಾರಿಗೆ ಯಾರೋ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನ ಚೇನ್ ಎಳೆದಿದ್ದು ಪ್ರಯಾಣಿಕರು ಕೆಳಗಿಳಿದಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ.
ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಹಲವು ಮಂದಿ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.
ಇನ್ನು ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿಯನ್ನು ನಂಬಿ ಸುಮಾರು 30ಕ್ಕೂ ಅಧಿಕ ಮಂದಿ ರೈಲಿನಿಂದ ಜಿಗಿದಿದ್ದರು. ಬಹುತೇಕರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಹಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
