ಮಹಾರಾಷ್ಟ್ರ | ಕರ್ನಾಟಕ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಕನಿಷ್ಠ ಆರು ಮಂದಿ ದುರ್ಮರಣ

Date:

ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿ ಬುಧವಾರ ಸಂಜೆ ಕರ್ನಾಟಕ ಎಕ್ಸ್‌ಪ್ರೆಸ್‌ ಡಿಕ್ಕಿಯಾಗಿ ಕನಿಷ್ಠ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

- Advertisement -

ಲಕ್ನೋದಿಂದ ಮುಂಬೈಗೆ ತೆರಳುತ್ತಿದ್ದ ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿ ಹರಡುತ್ತಿದ್ದಂತೆ ಪ್ರಯಾಣಿಕರು ರೈಲಿನಿಂದ ಹೊರಕ್ಕೆ ಜಿಗಿದು ಹಳಿಯಲ್ಲಿ ನಿಂತಿದ್ದರು. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್ ರೈಲು ಪ್ರಯಾಣಿಕರ ಮೇಲೆ ಹರಿದಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’; ರೈಲು ಅಪಘಾತಗಳ ಬಗ್ಗೆ ಎಚ್ಚೆತ್ತುಕೊಳ್ಳದ ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಸಂಜೆ ಸುಮಾರು ಐದು ಗಂಟೆ ಸುಮಾರಿಗೆ ಯಾರೋ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನ ಚೇನ್ ಎಳೆದಿದ್ದು ಪ್ರಯಾಣಿಕರು ಕೆಳಗಿಳಿದಿದ್ದಾರೆ. ಈ ವೇಳೆ ಕರ್ನಾಟಕ ಎಕ್ಸ್‌ಪ್ರೆಸ್‌ ಡಿಕ್ಕಿ ಹೊಡೆದಿದೆ ಎಂದು ಕೇಂದ್ರ ರೈಲ್ವೆಯ ಮುಖ್ಯ ವಕ್ತಾರ ಸ್ವಪ್ನಿಲ್ ನೀಲಾ ತಿಳಿಸಿದ್ದಾರೆ.

ಅಪಘಾತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಹಲವು ಮಂದಿ ಗಾಯಗಳಾಗಿದ್ದು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ.

ಇನ್ನು ಪುಷ್ಪಕ್ ಎಕ್ಸ್‌ಪ್ರೆಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂಬ ವದಂತಿಯನ್ನು ನಂಬಿ ಸುಮಾರು 30ಕ್ಕೂ ಅಧಿಕ ಮಂದಿ ರೈಲಿನಿಂದ ಜಿಗಿದಿದ್ದರು. ಬಹುತೇಕರಿಗೆ ಗಾಯಗಳಾಗಿವೆ ಎಂದು ಹೇಳಲಾಗಿದೆ. ಹಲವು ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಅಧಿಕವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ: ‘ನಿರ್ಭಯಾ ಪ್ರಕರಣವನ್ನು ನೆನಪಿಸುವ ಭೀಕರತೆ’ ಎಂದ ಸುಪ್ರೀಂ ಕೋರ್ಟ್

ದೆಹಲಿ-ಎನ್‌ಸಿಆರ್ ವ್ಯಾಪ್ತಿಯಲ್ಲಿ ಚಲಿಸುವ ಬಸ್‌ನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಭೀಕರ...

ದೆಹಲಿ | ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದಕ್ಕೆ ಹಲ್ಲೆ; ಯುವಕನ ಕಪಾಳಕ್ಕೆ ಹೊಡೆದ ದುರಹಂಕಾರಿ ಸಚಿವ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

3 ದಿನಗಳ ಬ್ಯಾಂಕ್ ಮುಷ್ಕರ ವಾಪಸ್: ವಾರಕ್ಕೆ 5 ದಿನ ಕೆಲಸದ ಪರಿಶೀಲನೆಗೆ ಸಮಿತಿ

ಸಾರ್ವಜನಿಕ ವಲಯದ ಬ್ಯಾಂಕ್‌ ನೌಕರರ ಒಕ್ಕೂಟವು (ಯುಎಫ್‌ಬಿಯು) ಸೋಮವಾರದಿಂದ ಹಮ್ಮಿಕೊಂಡಿದ್ದ ಮೂರು...