ಕರೋಲ್ ಹಾಡುತ್ತಿದ್ದ ಮಕ್ಕಳ ಮೇಲೆ ದಾಳಿ; ಬಿಜೆಪಿ ಮುಖಂಡನ ಸಮರ್ಥನೆ – ಪೋಷಕರ ಆಕ್ರೋಶ

Date:

ಕೇರಳದಲ್ಲಿ ಕ್ರಿಸ್‍ಮಸ್ ಕರೋಲ್ ಹಾಡುತ್ತಿದ್ದ ಮಕ್ಕಳ ಗುಂಪಿನ ಮೇಲೆ ದಾಳಿ ನಡೆದಿದೆ. ದಾಳಿಯನ್ನು ಬಿಜೆಪಿ ಮುಖಂಡ ಸಿ.ಕೃಷ್ಣಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಅತನ ವಿರುದ್ಧ ಸಂತ್ರಸ್ತ ಮಕ್ಕಳ ಪೋಷಕರು ಪ್ರತಿಭಟನೆ ನಡಸಿದ್ದಾರೆ. ಬಿಜೆಪಿ ಮುಖಂಡನ ಧೋರಣೆಯನ್ನು ಸಾರ್ವಜನಿಕರೂ ಖಂಡಿಸಿದ್ದಾರೆ.

- Advertisement -

ಪಾಲಕ್ಕಾಡ್‌ನಲ್ಲಿ ಸಿಪಿಎಂ ಕ್ಷೇತ್ರ ಸಮಿತಿ ಕಚೇರಿಯಿಂದ ಕರೋಲ್ ಆರಂಭಿಸಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಈ ವೇಳೆ, ಗುಂಪೊಂದು ಅವರ ಮೇಲೆ ದಾಳಿ ಮಾಡಿದೆ. ಆ ದಾಳಿಯನ್ನು ಸಮರ್ಥಿಸಿಕೊಂಡಿರುವ ಕೃಷ್ಣಕುಮಾರ್, “ಕರೋಲ್ ತಂಡ ಅಪರಾಧಿಗಳ ಗುಂಪಾಗಿದ್ದು, ಅವರು ಪಾನಮತ್ತರಾಗಿದ್ದರು” ಎಂದು ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಅವರ ಹೇಳಿಕೆಯು ಆಕ್ರೋಶಕ್ಕೆ ಗುರಿಯಾಗಿದೆ. ಮಕ್ಕಳ ಪೋಷಕರು ಮತ್ತು ಸಾರ್ವಜನಿಕರು ಕೃಷ್ಣಕುಮಾರ್ ವಿರುದ್ದ ಪ್ರತಿಭಟನೆ ನಡೆಸಿದ್ದಾರೆ. “ಮಕ್ಕಳು ಪ್ರತಿ ವರ್ಷದಂತೆ ಈ ವರ್ಷವೂ ಕರೋಲ್ ನಡೆಸುತ್ತಿದ್ದರು. ತಂಡದಲ್ಲಿ 10-15 ವರ್ಷ ವಯಸ್ಸಿನ ಮಕ್ಕಳು ಮಾತ್ರವೇ ಇದ್ದರು. ಅವರ ಮೇಲೆ ದಾಳಿ ನಡೆಸಲಾಗಿದೆ. ಅಲ್ಲದೆ, ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.

ಈ ಘಟನೆ ವಿರುದ್ಧ ಜಿಲ್ಲೆಯ ಎಲ್ಲ 2500 ಘಟಕಗಳಲ್ಲಿ ಕೂಡ ಕರೋಲ್ ನಡೆಸಲಾಗುವುದು ಎಂದು ಡಿವೈಎಫ್‍ಐ ಘೋಷಿಸಿದೆ.

ಕ್ರಿಶ್ಚಿಯನ್ ಸಮುದಾಯದ ಬೆಂಬಲ ಪಡೆಯುವಲ್ಲಿ ವಿಫಲವಾಗಿರುವ ಬಿಜೆಪಿ, ಇಂತಹ ಪ್ರತೀಕಾರದ ದಾಳಿಗೆ ಇಳಿದಿದೆ. ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡಲು ಯತ್ನಿಸಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಘಟನೆಯ ಸಂಬಂಧ ಆರ್‌ಎಸ್‌ಎಸ್‌ ಕಾರ್ಯಕರ್ತ ಅಶ್ವಿನ್ ರಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳ್ಳತನ | ಪ್ರಜಾಪ್ರಭುತ್ವದ ಕೊಲೆಗಡುಕರಿಗೆ ‘ಫಾರ್ಮ್-7’ ಮಾರಕ ಅಸ್ತ್ರ!

ಭಾರತೀಯ ಪ್ರಜಾಪ್ರಭುತ್ವದ ಬೆನ್ನೆಲುಬನ್ನೇ ಮುರಿಯುವ, ಪ್ರಜೆಗಳ ಪವಿತ್ರವಾದ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ...

ಪದ್ಮಭೂಷಣ ಸಣ್ಣ ವಿಷಯ, ಅವರನ್ನೇ ಪಿಎಂ ಮಾಡಿ: ಗ್ಯಾನೇಶ್‌ರನ್ನು ಹೊಗಳಿಸಿ ಬಿಜೆಪಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಪಶ್ಚಿಮ...

ನಾಗಾಲ್ಯಾಂಡ್‌ನಲ್ಲಿ ಕಳ್ಳಭಟ್ಟಿ ಹಾವಳಿ; 19 ಮಂದಿ ಬಲಿ, 3 ಸಾವಿರ ಬಾಟಲಿ ವಶ

ಕಳ್ಳಭಟ್ಟಿ ಸೇವಿಸಿ ಕನಿಷ್ಠ 19 ಮಂದಿ ಮೃತಪಟ್ಟಿರುವ ಆಘಾತಕಾರಿ ಘಟನೆ ನಾಗಾಲ್ಯಾಂಡ್‌ನಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ತನಿಖೆಗೆ ಸುಪ್ರೀಂನಲ್ಲಿ ಅರ್ಜಿ; ಆಯೋಗದ ಡೇಟಾಬೇಸ್‌ ಆಡಿಟ್‌ಗೆ ಮನವಿ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ವಿರುದ್ಧದ ಆರೋಪಗಳ ತನಿಖೆಗೆ...