ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ; ಬಿಜೆಪಿ ಶಾಸಕನ ಪುತ್ರನ ವಿರುದ್ಧ ಎಫ್‌ಐಆರ್‌

Date:

ದಲಿತ ವಿದ್ಯಾರ್ಥಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಗುಜರಾತ್ ಬಿಜೆಪಿ ಶಾಸಕ ಗೀತಾಬಾ ಜಡೇಜಾ ಅವರ ಪುತ್ರ ಗಣೇಶ್ ಜಡೇಜಾ ಮತ್ತು ಇತರರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ ಹಲ್ಲೆಗೊಳಗಾದ ವಿದ್ಯಾರ್ಥಿ ನಾಯಕನ ತಂದೆಗೆ ಜುನಾಗಢದ ಬಿಜೆಪಿ ಮುಖಂಡನೊಬ್ಬ ರಾಜಿ ಮಾಡಿಕೊಳ್ಳಲು ಆಮಿಷವೊಡ್ಡಿರುವ ಆಡಿಯೋ ರೆಕಾರ್ಡಿಂಗ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ದಲಿತ ಮತ್ತು ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಸಂಘಟನೆಯ ನಾಯಕ ಸಂಜಯ್ ಸೋಲಂಕಿ ಅವರನ್ನು ಬಿಜೆಪಿ ಶಾಸಕನ ಪುತ್ರ ಗಣೇಶ್ ಜಡೇಜಾ ಮತ್ತು ಇತರರು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಜಯ್ ಅವರ ತಂದೆ ರಾಜು ಸೋಲಂಕಿ ಅವರಿಗೆ ಬಿಜೆಪಿ ಮುಖಂಡ, ಜುನಾಗಢದ ಉಪಮೇಯರ್ ಗಿರೀಶ್ ಕೋಟೆಚಾ ಕರೆ ಮಾಡಿ, ಆಮಿಷವೊಡ್ಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಿಮ್ಮ ಹುಡುಗ ಯಾರೊಂದಿಗಾದರೂ ಜಗಳವಾಡಿದ್ದಾನೆಯೇ? ರಾಜೀ ಮಾಡಿಕೊಳ್ಳಲು ನಿಮಗೆ ಸಿಗಬೇಕದ್ದು, ಸಿಗುತ್ತದೆ. ತೆಗೆದುಕೊಳ್ಳಬೇಕಾದದ್ದನ್ನು ತೆಗೆದುಕೊಳ್ಳಿ. ಆದರೆ ಸಮಸ್ಯೆಯನ್ನು ಪರಿಹರಿಸಿ” ಎಂದು ಕೋಟೆಚಾ ಆಮಿಷವೊಡ್ಡಿರುವುದು ಆಡಿಯೋ ರೆಕಾರ್ಡ್‌ನಲ್ಲಿ ಸೆರೆಯಾಗಿದೆ.

ಇದಕ್ಕೆ ಕೋಪದಿಂದ ಪ್ರತಿಕ್ರಿಯಿಸಿದ ಸೋಲಂಕಿ, “ಒಮ್ಮೆ ನಾನು ಅವನನ್ನು (ಬಿಜೆಪಿ ಶಾಸಕನ ಪುತ್ರ) ಕೋಲಿನಿಂದ ಹೊಡೆದ ಬಳಿಕ, ಸಮಸ್ಯೆಯನ್ನು ಪರಿಹರಿಸುತ್ತೇನೆ” ಎಂದು ಹೇಳಿದ್ದಾರೆ.

ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಎಫ್‌ಐಆರ್‌ನ ಪ್ರಕಾರ, 26 ವರ್ಷದ ಸಂಜಯ್ ಸೋಲಂಕಿ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ, ಜಡೇಜಾ ಅವರ ಕಾರು ಆತನ ಮೇಲೆರಗಿದಂತೆ ಹಾದು ಹೋಗಿದೆ. ಹೀಗಾಗಿ, ಸೋಲಂಕಿ ಎಚ್ಚರಿಕೆಯಿಂದ ಚಲಾಯಿಸುವಂತೆ ಚಡೇಜಾಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ಜಡೇನಾ ಮತ್ತು ಅತನ ಸಂಗಡಿಗರು ಸೋಲಂಕಿಯನ್ನು ಹಿಂಬಾಲಿಸಿ, ಅತನ ಮನೆಯಲ್ಲಿಯೇ ಹಲ್ಲೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...

UPI ವಹಿವಾಟಿನ ಮೇಲಿನ ಶುಲ್ಕಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ

ಅಕ್ಟೋಬರ್ 15ರಿಂದ ಜಾರಿಗೆ ಬರಲಿರುವ 2,000 ರೂ.ಗಿಂತ ಹೆಚ್ಚಿನ ಯುಪಿಐ ವಹಿವಾಟುಗಳ...

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...