ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ: ಇದು ‘ಕೊಲೆ ಯತ್ನ’ – ಬಿಜೆಪಿ ವಿರುದ್ಧ ಟಿಎಂಸಿ ಸಂಸದರ ಆರೋಪ

Date:

ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಹಾಲಿಸಹರ್‌ನಲ್ಲಿ ಕಸ್ಟಡಿ ಸಾವಿಗೀಡಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಕುಟುಂಬಸ್ಥರನ್ನು ಭೇಟಿ ಮಾಡಲು ತೆರಳುತ್ತಿದ್ದ ಟಿಎಂಸಿ ನಾಯಕಿ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಾರಿನ ಮೇಲೆ ಕಲ್ಲು, ಮಣ್ಣು ಮತ್ತು ಬೂಟುಗಳಿಂದ ದಾಳಿ ನಡೆಸಲಾಗಿದೆ. ಈ ಘಟನೆಯನ್ನು “ಕೊಲೆ ಯತ್ನ” ಎಂದು ಬಣ್ಣಿಸಿರುವ ಟಿಎಂಸಿ ಸಂಸದರು, ಈ ದಾಳಿಯ ಹಿಂದೆ ಬಿಜೆಪಿ ನಾಯಕರು ಮತ್ತು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಕೈವಾಡವಿದೆ ಎಂದು ಆರೋಪಿಸಿದ್ದಾರೆ.

- Advertisement -

ಟಿಎಂಸಿ ಲೋಕಸಭಾ ಸಂಸದ ಕಲ್ಯಾಣ್ ಬ್ಯಾನರ್ಜಿ ಮಾತನಾಡಿ, “ಈ ದಾಳಿಯು ಮಮತಾ ಬ್ಯಾನರ್ಜಿ ಅವರನ್ನು ಕೊಲ್ಲುವ ಉದ್ದೇಶದಿಂದಲೇ ಯೋಜಿತವಾಗಿ ನಡೆಸಲಾದ ಸಂಚು. ಕಾರಿನ ಕಿಟಕಿಗಳು ಮುಚ್ಚಿರದಿದ್ದರೆ ಅವರಿಗೆ ಮಾರಣಾಂತಿಕ ಗಾಯಗಳಾಗುತ್ತಿದ್ದವು. ನೂರಾರು ಬಿಜೆಪಿ ಕಾರ್ಯಕರ್ತರು ಕಲ್ಲುಗಳನ್ನು ತೂರಿದರೂ ಪೊಲೀಸರು ಮೂಕ ಪ್ರೇಕ್ಷಕರಾಗಿದ್ದರು. ಈ ಕೃತ್ಯಕ್ಕೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ನೇರ ನಿರ್ದೇಶನವಿದೆ” ಎಂದು ದೂರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿ: ಟಿಎಂಸಿ ಬಂಡಾಯ: ಸೋನಿಯಾ ಗಾಂಧಿಯನ್ನು ಭೇಟಿಯಾದ ಮಮತಾ ಬ್ಯಾನರ್ಜಿ; ಗುಪ್ತ ಸಭೆ

ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಕೂಡ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, “ಇದು ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಆಡಳಿತ ವ್ಯವಸ್ಥೆಯ ಸಂಪೂರ್ಣ ವೈಫಲ್ಯವನ್ನು ತೋರಿಸುತ್ತದೆ” ಎಂದು ಹೇಳಿದ್ದಾರೆ.

ಕಾಂಚ್ರಾಪಾರಾದ ಟಿಎಂಸಿ ಮಾಜಿ ಕೌನ್ಸಿಲರ್ ಪತಿ ಬಿರ್ಜು ಕೆವೋಟ್ ಅವರನ್ನು ಪೊಲೀಸರು ವಶಕ್ಕೆ ಪಡೆದ ನಂತರ ಅವರು ಮೃತಪಟ್ಟಿದ್ದರು. ಇದು ಕಸ್ಟಡಿ ಸಾವು ಎಂದು ಆರೋಪಿಸಿದ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮಮತಾ ಬ್ಯಾನರ್ಜಿ ತೆರಳುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಸೇರಿದ ಬಿಜೆಪಿ ಪ್ರತಿಭಟನಾಕಾರರು ಕಾರನ್ನು ತಡೆದು “ಚೋರ್” (ಕಳ್ಳಿ) ಎಂಬ ಘೋಷಣೆಗಳನ್ನು ಕೂಗಿ ದಾಳಿ ನಡೆಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಗ್ರಾಮೀಣದಲ್ಲಿ ಕುಡಿಯುವ ನೀರಿನ ಸಮಸ್ಯೆಯೇ? ಹಾಗಾದ್ರೆ ಈ ನಂಬರ್‌ಗೆ ಕರೆ ಮಾಡಿ

ಬೀದರ್ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ಸಂಬಂಧಿಸಿದ ಸಮಸ್ಯೆಗಳು...

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ ಹಾಕಿದ ಮಾಧ್ಯಮಗಳು

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ...

ಕಲಬುರಗಿಯಲ್ಲಿ ಸೆ.27ರಂದು ಬಸವಾದಿ ಶರಣರ ಹಿಂದೂ ಸಮಾವೇಶ : ಕನೇರಿ ಸ್ವಾಮೀಜಿಗೆ ಅನುಮತಿ ಬೇಡ

ಕಲಬುರಗಿಯಲ್ಲಿ ಸೆ. 27ರಂದು ಹಮ್ಮಿಕೊಳ್ಳಲಾಗಿರುವ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ...