ಜೈಲಿನಲ್ಲಿ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರಕ್ಕೆ ಯತ್ನ; ಜೈಲರ್ ವಿರುದ್ಧ ಪ್ರಕರಣ ದಾಖಲು

Date:

ಜೈಲಿನ ನಿರ್ವಹಣೆಗಾಗಿ ನಿಯೋಜಿಸಲಾಗಿದ್ದ ಮಹಿಲಾ ಅಧಿಕಾರಿಯೊಬ್ಬರ ಮೇಲೆ ಜೈಲರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ನಡೆದಿದೆ. ಆರೋಪಿ ಜೈಲರ್‌ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಸಂತ್ರಸ್ತ ಮಹಿಳಾ ಅಧಿಕಾರಿ ಪೊಲೀಸರಿಗೆ ದೂರು ನೀಡಿದ್ದಾರೆ. “ಜನವರಿ 1ರಂದು ಬಾಗ್‌ಪತ್ ಜಿಲ್ಲಾ ಜೈಲಿನ ಜೈಲರ್, ಆರೋಪಿ ಜಿತೇಂದ್ರ ಕಶ್ಯಪ್ ತನ್ನನ್ನು ಸೂಪರಿಂಟೆಂಡೆಂಟ್ ಕಚೇರಿಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅವರ ದೂರಿನ ಆಧಾರದ ಮೇಲೆ ಬಾಗ್‌ಪತ್ ಜಿಲ್ಲಾ ಜೈಲಿನ ಜೈಲರ್ ಜಿತೇಂದ್ರ ವಿರುದ್ಧ ಅತ್ಯಾಚಾರಕ್ಕೆ ಯತ್ನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಅಮಾನತುಗೊಳಿಸಲಾಗಿದೆ.

ಆರೋಪಿ ಜಿತೇಂದ್ರ ಅವರನ್ನು ಇನ್ನೂ ಬಂಧಿಸಲಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

“ಮಹಿಳಾ ಅಧಿಕಾರಿ ಸಲ್ಲಿಸಿದ ಲಿಖಿತ ದೂರಿನ ಆಧಾರದ ಮೇಲೆ, ಪ್ರಕರಣ ದಾಖಲಿಸಿದ್ದೇವೆ. ದೂರುದಾರರ ವೈದ್ಯಕೀಯ ಪರೀಕ್ಷೆ ಪೂರ್ಣಗೊಂಡಿದ್ದು, ನ್ಯಾಯಾಲಯದಲ್ಲಿ ಅವರ ಹೇಳಿಕೆಯನ್ನು ದಾಖಲಿಸಲಾಗುವುದು. ಜೈಲಿನ ಸಿಸಿಟಿವಿ ದೃಶ್ಯಾವಳಿಯನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸಲಾಗುತ್ತದೆ. ಆರೋಪ ನಿಜವೆಂದು ಸಾಬಿತಾದಲ್ಲಿ, ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಖೇಕ್ರಾ ಸ್ಟೇಷನ್ ಹೌಸ್ ಅಧಿಕಾರಿ ಕೈಲಾಶ್ ಚಂದ್ರ ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ ಜೈಲುಗಳ ಮಹಾನಿರ್ದೇಶಕರು ತನಿಖಾ ತಂಡ ರಚಿಸಿದ್ದಾರೆ. ತಂಡವು ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...