ಅಯೋಧ್ಯೆ ದೇಣಿಗೆ ಹಗರಣ: ಇಂದು ಟ್ರಸ್ಟ್‌ನ ನಿರ್ಣಾಯಕ ಸಭೆ; ಸದಸ್ಯರ ನಡುವೆ ಮೊದಲ ಬಾರಿಗೆ ಚುನಾವಣೆ ಸಾಧ್ಯತೆ

Date:

ರಾಮ ಮಂದಿರ ನಿರ್ಮಾಣದ ನಿಧಿಯ ಅವ್ಯವಹಾರದ ಗಂಭೀರ ಆರೋಪಗಳ ಬೆನ್ನಲ್ಲೇ, ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಇಂದು (ಜುಲೈ 6) ಸಂಜೆ ತುರ್ತು ಸಭೆ ಕರೆದಿದೆ. ಈ ಸಭೆಯು ಟ್ರಸ್ಟ್‌ನ ಮುಂದಿನ ಆಡಳಿತಾತ್ಮಕ ಹಾದಿಯನ್ನು ನಿರ್ಧರಿಸುವ ನಿಟ್ಟಿನಲ್ಲಿ ಅತ್ಯಂತ ನಿರ್ಣಾಯಕವಾಗಿದೆ.

- Advertisement -

ಭದ್ರತಾ ದೃಷ್ಟಿಯಿಂದ ಸಭೆಯನ್ನು ಮಣಿ ರಾಮದಾಸ್ ಚಾವ್ನಿಯಿಂದ ರಾಮಮಂದಿರ ಸಂಕೀರ್ಣಕ್ಕೆ ಸ್ಥಳಾಂತರಿಸಲಾಗಿದೆ. ದೇಣಿಗೆ ಹಗರಣದ ವಿವಾದದ ನಂತರ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ ಹೊಣೆ ಹೊತ್ತು ಸಲ್ಲಿಸಿರುವ ರಾಜೀನಾಮೆಗಳ ಬಗ್ಗೆ ಸಭೆಯಲ್ಲಿ ಚರ್ಚೆಯಾಗಲಿದೆ. ಇವರಿಬ್ಬರೂ ಈ ಸಭೆಯಿಂದ ದೂರ ಉಳಿಯುವ ಸಾಧ್ಯತೆಯಿದೆ. ಮೊದಲ ಬಾರಿಗೆ, ಪ್ರಮುಖ ಅಜೆಂಡಾಗಳನ್ನು ನಿರ್ಧರಿಸಲು ಟ್ರಸ್ಟ್ ಸದಸ್ಯರ ನಡುವೆ ಮತದಾನ ಪ್ರಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಸಭೆಯ ಮುನ್ನ ಹೇಳಿಕೆ ನೀಡಿರುವ ಟ್ರಸ್ಟ್‌ನ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿರಿ, ತಾವು ಯಾವುದೇ ಆರ್ಥಿಕ ಅವ್ಯವಹಾರದಲ್ಲಿ ಭಾಗಿಯಾಗಿಲ್ಲ. “ನನಗೆ ಯಾವುದೇ ಚೆಕ್ ಬುಕ್ ಇಲ್ಲ, ನನಗೆ ದೇಣಿಗೆಗಳ ನಿರ್ವಹಣೆಗೆ ಸಂಬಂಧಿಸಿದ ಬ್ಯಾಂಕ್ ಅಧಿಕಾರಗಳಿಲ್ಲ. ದೇವಸ್ಥಾನದ ಎಲ್ಲ ವ್ಯವಹಾರಗಳು ನೇರವಾಗಿ ಬ್ಯಾಂಕ್ ಮೂಲಕವೇ ನಡೆಯುತ್ತವೆ,” ಎಂದು ಅವರು ತಿಳಿಸಿದ್ದಾರೆ.

ಈ ಅವ್ಯವಹಾರವನ್ನು “ಗಂಭೀರ ಪಾಪ” ಎಂದು ಕರೆದಿರುವ ಸ್ವಾಮಿ ಗೋವಿಂದ ದೇವ್ ಗಿರಿ, ವಿಶೇಷ ತನಿಖಾ ತಂಡ (SIT) ನಡೆಸುತ್ತಿರುವ ತನಿಖೆಯನ್ನು ತಾವು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಹೇಳಿದ್ದಾರೆ. ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಭವಿಷ್ಯದಲ್ಲಿ ದೇಣಿಗೆ ಎಣಿಕೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ತಜ್ಞರ ಸಮಿತಿಯ ನೇಮಕವಾಗಬೇಕು ಎಂದು ಒತ್ತಾಯಿಸಿದ್ದಾರೆ.

ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ ದಾಸ್ ಅವರು ಅನಾರೋಗ್ಯದ ಕಾರಣ ಸಭೆಯಲ್ಲಿ ಭಾಗವಹಿಸುವುದು ಅನುಮಾನ. ಇತರ ಸದಸ್ಯರು ವೈಯಕ್ತಿಕವಾಗಿ ಅಥವಾ ವಿಡಿಯೋ ಕಾನ್ಫರೆನ್ಸ್ ಮೂಲಕ ವರ್ಚುವಲ್ ಆಗಿ ಭಾಗವಹಿಸುತ್ತಿದ್ದಾರೆ. ಟ್ರಸ್ಟ್‌ನ ಪ್ರತಿಯೊಂದು ಪೈಸೆಯನ್ನೂ ಪಾರದರ್ಶಕವಾಗಿ ನಿರ್ವಹಿಸುವುದೇ ನಮ್ಮ ಮುಂದಿನ ಗುರಿ ಎಂದು ಟ್ರಸ್ಟ್‌ನ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರಾಮ ಮಂದಿರ ದೇಣಿಗೆ ದೋಖಾ: ಬಯಲಾಯ್ತು ಆರೋಪಿಗಳ ವಾಟ್ಸಾಪ್‌ ಚಾಟ್; ಆಂತರಿಕ ಕಿತ್ತಾಟ ಬಯಲು!

ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೂ, ಅವರ ವಿರುದ್ಧ ನಡೆಯುತ್ತಿರುವ ತನಿಖೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಉತ್ತರ ಪ್ರದೇಶ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (SIT) ಈಗಾಗಲೇ ದೇಣಿಗೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದು, ಆಡಳಿತಾತ್ಮಕ ಲೋಪಗಳ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ಈಗಾಗಲೇ ಎಂಟು ಮಂದಿ ಬಂಧಿತರಾಗಿದ್ದು, ಅವರ ವಿಚಾರಣೆ ಮತ್ತು ಸಂಗ್ರಹಿಸಲಾದ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮಗಳು ನಡೆಯಲಿವೆ. ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರ ಭಾಗವಹಿಸುವಿಕೆ ಅಥವಾ ಮೇಲ್ವಿಚಾರಣೆಯಲ್ಲಿನ ವೈಫಲ್ಯದ ಬಗ್ಗೆ SIT ನಿರಂತರವಾಗಿ ಪರಿಶೀಲಿಸುತ್ತಿದೆ. ಟ್ರಸ್ಟ್‌ನ ಸದಸ್ಯರು ರಾಜೀನಾಮೆಯನ್ನು ಅಂಗೀಕರಿಸಿದ ನಂತರವೂ, ತನಿಖಾ ಸಂಸ್ಥೆಗಳು ತಮ್ಮ ತನಿಖೆಯನ್ನು ಮುಂದುವರಿಸಲಿದ್ದು, ಅಪರಾಧ ಸಾಬೀತಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

ಚುನಾವಣೆ ಬಹಿಷ್ಕರಿಸುವುದಿಲ್ಲ, ವ್ಯವಸ್ಥೆಯಲ್ಲಿನ ಲೋಪಗಳನ್ನು ಜನರ ಮುಂದೆ ಬಯಲಿಗೆಳೆಯುತ್ತೇವೆ: ರಾಹುಲ್ ಗಾಂಧಿ

ಭಾರತದ ಚುನಾವಣಾ ವ್ಯವಸ್ಥೆಯಲ್ಲಿ ಗಂಭೀರ ಲೋಪದೋಷಗಳು ಮತ್ತು ಅಕ್ರಮಗಳು ನಡೆಯುತ್ತಿವೆ ಎಂಬ...

ಬೀದರ್‌ | ಲೇಖಕ ರವಿ ಹಂಜ್‌ ಭಾವಚಿತ್ರಕ್ಕೆ ಬೂಟಿನೇಟು, ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ...