ರಾಮಮಂದಿರ ಲೂಟಿ: ಆರೋಪಿಗಳ ಪರ ವಾದಿಸದಿರಲು ಅಯೋಧ್ಯೆಯ ವಕೀಲರ ನಿರ್ಧಾರ

Date:

ಅಯೋಧ್ಯೆಯ ರಾಮಮಂದಿರ ದೇಣಿಗೆ ಲೂಟಿ ಪ್ರಕರಣದ ಆರೋಪಿಗಳ ಪರವಾಗಿ ವಾದಿಸದಿರಲು ಅಯೋಧ್ಯೆಯ ವಕೀಲರು ನಿರ್ಧರಿಸಿದ್ದಾರೆ. ಸೋಮವಾರ ನಡೆಯಲಿರುವ ಫೈಜಾಬಾದ್ ಬಾರ್ ಅಸೋಸಿಯೇಷನ್‌ನ ಸಾಮಾನ್ಯ ಸಭೆಯಲ್ಲಿ ರಾಮಮಂದಿರ ದೇಣಿಗೆ ದುರಪಯೋಗ ಆರೋಪಿಗಳ ಪ್ರಕರಣವನ್ನು ಕೈಗೆತ್ತಿಕೊಳ್ಳದಿರಲು ಸರ್ವಾನುಮತದ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಂಘದ ಅಧ್ಯಕ್ಷೆ ಕಾಳಿಕಾ ಮಿಶ್ರಾ ತಿಳಿಸಿದ್ದಾರೆ.

- Advertisement -

2005ರಲ್ಲಿ ರಾಮ ಮಂದಿರದ ಮೇಲೆ ಭಯೋತ್ಪಾದಕ ದಾಳಿಯ ಆರೋಪಿಗಳನ್ನು ಫೈಜಾಬಾದ್ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಅಯೋಧ್ಯೆಯ ವಕೀಲರು ಇದೇ ರೀತಿಯ ನಿರ್ಧಾರವನ್ನು ತೆಗೆದುಕೊಂಡಿದ್ದರು. ಇದೀಗ ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣದಲ್ಲಿಯೂ ಇದೇ ನಿರ್ಧಾರ ಕೈಗೊಳ್ಳಲು ಮುಂದಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಇದನ್ನೂ ಓದಿ: ರಾಮಮಂದಿರ ಲೂಟಿ | ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ: ಟ್ರಸ್ಟ್ ಸ್ಪಷ್ಟನೆ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಬಾರ್ ಅಸೋಸಿಯೇಷನ್ ​​ಕಾರ್ಯದರ್ಶಿ ಶೈಲೇಂದ್ರ ಜೈಸ್ವಾಲ್, “ರಾಮಮಂದಿರದ ದೇಣಿಗೆ ಕಳ್ಳತನದಿಂದ ನಮ್ಮ ಭಾವನೆಗಳಿಗೆ ನೋವುಂಟಾಗಿದೆ. ಬಂಧಿತ ಆರೋಪಿಗಳ ಪರವಾಗಿ ವಾದಿಸದಿರಲು ಫೈಜಾಬಾದ್‌ನ ವಕೀಲರು ಒಪ್ಪಿಕೊಂಡಿದ್ದಾರೆ. ಈ ವಿಷಯದಲ್ಲಿ, ಬಾರ್ ಅಸೋಸಿಯೇಷನ್ ​​ಅಧ್ಯಕ್ಷರು ಮತ್ತು ಬಾರ್‌ನ ಸಾಮಾನ್ಯ ಸಭೆ ನಿರ್ಧಾರ ತೆಗೆದುಕೊಳ್ಳುತ್ತದೆ. ಇದರ ನಂತರ, ಮುಂದಿನ ಕಾರ್ಯತಂತ್ರವನ್ನು ಸಿದ್ಧಪಡಿಸಲಾಗುತ್ತದೆ” ಎಂದು ತಿಳಿಸಿದ್ದಾರೆ.

“ಕೆಲವು ಜನರ ಕೃತ್ಯದಿಂದಾಗಿ, ಅಯೋಧ್ಯೆಯ ನಿವಾಸಿಗಳು ಇಡೀ ಪ್ರಪಂಚದಾದ್ಯಂತ ಕೆಟ್ಟ ಹೆಸರು ಪಡೆಯುಂತಾಗಿದೆ. ಬುಲ್ಡೋಜರ್ ನೀತಿಯನ್ನು ಪಾಲಿಸಿ ಈ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಹಿರಿಯ ವಕೀಲ ರಾಜೇಂದ್ರ ಚೌಧರಿ ಹೇಳಿದರು.

ಸದ್ಯ ರಾಮಮಂದಿರ ಲೂಟಿ ವಿಚಾರದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಾಮಮಂದಿರದಲ್ಲಿ ಎಲ್ಲ ನಿರ್ವಹಣೆಯನ್ನು ಬಿಜೆಪಿ, ಆರ್‌ಎಸ್‌ಎಸ್‌, ಸಂಘಪರಿವಾರ ನಡೆಸುತ್ತಿದೆ. ಬಿಜೆಪಿ ರಾಮನ ಹೆಸರಲ್ಲಿ ಭಕ್ತರ ಹಣ ದೋಚಿದೆ ಎಂದು ವಿಪಕ್ಷಗಳು ಆರೋಪಿಸಿವೆ. ಎಫ್‌ಐಆರ್‌ನಲ್ಲಿ ಆರ್‌ಎಸ್‌ಎಸ್‌ನ ಪ್ರಮುಖರ ಹೆಸರು ಇಲ್ಲದಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಬೆಳಗಾವಿ | ಸಾವಿನ ಕದ ತಟ್ಟಿ ಬಂದ ರೈತನ ಮಗನಿಗೆ 12 ಚಿನ್ನದ ಪದಕ

ಬದುಕು ಮುಗಿಯಿತು ಎಂದುಕೊಂಡಿದ್ದ ಕ್ಷಣದಿಂದಲೇ ಹೊಸ ಬದುಕಿನತ್ತ ಹೆಜ್ಜೆ ಇಟ್ಟರು. ಸಾವಿನ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...