ಅಯೋಧ್ಯೆ ರಾಮಮಂದಿರ ದೇಣಿಗೆ ಅಕ್ರಮ ಪ್ರಕರಣ: ಚಂಪತ್‌ ರಾಯ್‌ಗೆ ಎಸ್‌ಐಟಿ ಕ್ಲೀನ್‌ಚಿಟ್‌

Date:

ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಹಾಗೂ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಕ್ಲೀನ್‌ಚಿಟ್ ನೀಡಿದೆ.

- Advertisement -

​ದೇಣಿಗೆ ಅಕ್ರಮಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಎಸ್‌ಐಟಿಯ ಮೊದಲ ವರದಿಯನ್ನು ಉತ್ತರ ಪ್ರದೇಶ ಸರ್ಕಾರದ ಗೃಹ ಇಲಾಖೆಯು ಕೂಲಂಕಷವಾಗಿ ಪರಿಶೀಲಿಸಿದ್ದು, ಮುಂದಿನ ಅಗತ್ಯ ಕ್ರಮಗಳಿಗಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಹಸ್ತಾಂತರಿಸಿದೆ. ಈ ತನಿಖಾ ವರದಿಯಲ್ಲಿ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಮಾಜಿ ಟ್ರಸ್ಟಿ ಅನಿಲ್ ಮಿಶ್ರಾ ಅವರ ಹೆಸರುಗಳಿಲ್ಲ ಎಂದು ಉನ್ನತ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

​ಮಂದಿರಕ್ಕೆ ಹರಿದುಬಂದ ದೇಣಿಗೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಬೆನ್ನಲ್ಲೇ, ನೈತಿಕ ಹೊಣೆ ಹೊತ್ತು ಚಂಪತ್ ರಾಯ್ ಮತ್ತು ಅನಿಲ್ ಮಿಶ್ರಾ ಅವರು ಜೂನ್ 27ರಂದು ಟ್ರಸ್ಟ್‌ನ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರು.

​ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಟ್ರಸ್ಟ್ ಮಾಡಿಕೊಂಡ ಮನವಿಯ ಮೇರೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿರ್ದೇಶನದಂತೆ ಜೂನ್ 13ರಂದು ಎಸ್‌ಐಟಿ ರಚಿಸಲಾಗಿತ್ತು. ಲಖನೌ ವಿಭಾಗೀಯ ಆಯುಕ್ತ ವಿಜಯ್ ವಿಶ್ವಾಸ್ ಪಂತ್ ನೇತೃತ್ವದ ಈ ತಂಡದಲ್ಲಿ ಲಖನೌ ವಲಯದ ಐಜಿಪಿ ಕಿರಣ್ ಎಸ್. ಮತ್ತು ಹಣಕಾಸು ಇಲಾಖೆಯ ವಿಶೇಷ ಕಾರ್ಯದರ್ಶಿ ನೀಲ್ ರತನ್ ಕುಮಾರ್ ಸದಸ್ಯರಾಗಿದ್ದರು.

​ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ, ಜೂನ್ 23ರಂದು ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಜೂನ್ 25ರಂದು ಅಯೋಧ್ಯೆಯಲ್ಲಿ ಅಧಿಕೃತವಾಗಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದೀಗ ಪೂರ್ಣ ಪ್ರಮಾಣದ ವರದಿ ಸಲ್ಲಿಕೆಯಾಗಿದ್ದು, ಮಾಜಿ ಪದಾಧಿಕಾರಿಗಳು ಆರೋಪಮುಕ್ತರಾಗಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...