ಅಯೋಧ್ಯೆ ತೀರ್ಪು ಜಾತ್ಯತೀತತೆ ಎತ್ತಿಹಿಡಿಯಲಿಲ್ಲ: ಮಾಜಿ ಸುಪ್ರೀಂ ನ್ಯಾಯಾಧೀಶ ನಾರಿಮನ್

Date:

ರಾಮ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞ ಆರ್‌ಎಫ್ ನಾರಿಮನ್ ನಿರಾಶೆ ವ್ಯಕ್ತಪಡಿಸಿದ್ದಾರೆ. “ಈ ತೀರ್ಪು ಇದು ಜಾತ್ಯತೀತ ತತ್ವಕ್ಕೆ ನ್ಯಾಯ ಒದಗಿಸಿಲ್ಲ” ಎಂದು ಅಭಿಪ್ರಾಯಿಸಿದ್ದಾರೆ.

- Advertisement -

ಮಾಜಿ ಸಿಜೆಐ ಎಎಂ ಅಹ್ಮದಿ ಅವರ ಸ್ಮರಣಾರ್ಥ ಸ್ಥಾಪಿಸಲಾದ ಅಹ್ಮದಿ ಫೌಂಡೇಶನ್‌ನ ಉದ್ಘಾಟನಾ ಭಾಷಣವನ್ನು ಮಾಡಿದ ನ್ಯಾಯಮೂರ್ತಿ ನಾರಿಮನ್, 2019ರ ಅಯೋಧ್ಯೆ ತೀರ್ಪಿನಲ್ಲಿ ಎತ್ತಿಹಿಡಿಯಲಾದ ಪೂಜಾ ಸ್ಥಳಗಳ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇನ್ನು ಈ ಸಂದರ್ಭದಲ್ಲೇ ಬಾಬರಿ ಮಸೀದಿ ಧ್ವಂಸ ಪ್ರಕರಣದ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದ ಸಿಬಿಐ ವಿಶೇಷ ನ್ಯಾಯಾಧೀಶ ಸುರೇಂದ್ರ ಯಾದವ್ ಅವರಿಗೆ ನಿವೃತ್ತಿಯ ನಂತರ ಉತ್ತರ ಪ್ರದೇಶದಲ್ಲಿ ಲೋಕಾಯುಕ್ತ ಹುದ್ದೆ ಹೇಗೆ ಸಿಕ್ಕಿತು ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

ಇದನ್ನು ಓದಿದ್ದೀರಾ? ಅಯೋಧ್ಯೆ ವಿವಾದ | ಮೂಲದಾವೆಯಲ್ಲಿ ದೇವರೇ ಕಕ್ಷಿದಾರ; ದೇವರನ್ನೇ ಪರಿಹಾರ ಕೇಳಿದ ಸಿಜೆಐ

‘ಜಾತ್ಯತೀತತೆ ಮತ್ತು ಭಾರತೀಯ ಸಂವಿಧಾನ’ ಕುರಿತು ಮಾತನಾಡಿದ ಅವರು, “ಜಾತ್ಯತೀತತೆಗೆ ಅದರ ಅರ್ಹತೆಯನ್ನು ನೀಡಲಾಗಿಲ್ಲ, ಇದು ನ್ಯಾಯದ ದೊಡ್ಡ ವಿಡಂಬನೆಯಾಗಿದೆ” ಎಂದು ಅಭಿಪ್ರಾಯಿಸಿದರು. ಈ ವೇಳೆ ಅಯೋಧ್ಯೆ ತೀರ್ಪನ್ನು ಉಲ್ಲೇಖಿಸಿದರು.

ಮಸೀದಿ ಧ್ವಂಸ ಕಾನೂನುಬಾಹಿರ ಎಂದು ಹೇಳಿರುವ ನ್ಯಾಯಾಲಯ ಅದೇ ವಿವಾದಿತ ಭೂಮಿಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ತೀರ್ಪಿನ ವೇಳೆ ನೀಡಿದ ಕಾರಣವನ್ನು ಒಪ್ಪಲಾಗದು ಎಂದರು.

“ಇಂದು ನಾವು ಅಲ್ಲಲ್ಲಿ ಇಂತಹ ಸಮಸ್ಯೆಗಳನ್ನು ಕಾಣುತ್ತಿದ್ದೇವೆ. ಮಸೀದಿಗಳು ಮಾತ್ರವಲ್ಲದೆ ದರ್ಗಾಗಳ ವಿರುದ್ಧವೂ ಎಲ್ಲೆಡೆ ದಾವೆ ಹೂಡಲಾಗುತ್ತಿದೆ. ನನ್ನ ಪ್ರಕಾರ, ಇವೆಲ್ಲವೂ ಕೋಮು ಉದ್ವಿಗ್ನತೆಗೆ ಕಾರಣವಾಗಬಹುದು” ಎಂದು ಆತಂಕ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...