ಅಯೋಧ್ಯೆಯ ರಾಮ ಮಂದಿರಕ್ಕೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತನಿಖೆ ಆರಂಭಿಸಲಾಗಿದೆ. ದೇವಾಲಯ ಸಂಕೀರ್ಣದ ಸುತ್ತಲೂ ಮತ್ತು ಅಯೋಧ್ಯೆ, ಬಾರಾಬಂಕಿ ಮತ್ತು ನೆರೆಯ ಜಿಲ್ಲೆಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಅಯೋಧ್ಯೆಯ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಸೈಬರ್ ಸೆಲ್ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದೆ. ಸೋಮವಾರ ರಾತ್ರಿ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಇಮೇಲ್ ಬಂದಿದೆ.
ಇದನ್ನು ಓದಿದ್ದೀರಾ? ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ
ಜೈಶ್-ಎ-ಮೊಹಮ್ಮದ್‌ನಂತಹ ಭಯೋತ್ಪಾದಕ ಗುಂಪುಗಳಿಂದ ಹಲವು ಬೆದರಿಕೆಗಳು ಬಂದಿದೆ. ಈ ಹಿಂದೆಯೂ ಇದೇ ರೀತಿ ಬೆದರಿಕೆಗಳು ಬಂದಿತ್ತು. ಭದ್ರತೆಯನ್ನೂ ಹೆಚ್ಚಿಸಲಾಗಿತ್ತು. ಮುಸ್ಲಿಮರ ಹೆಸರಲ್ಲಿ ಇಬ್ಬರು ಹಿಂದೂ ಯುವಕರು ಬಾಂಬ್ ಬೆದರಿಕೆ ಹಾಕಿ ಕೋಮು ಗಲಭೆ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ಅವರನ್ನು ಬಂಧಿಸಲಾಗಿತ್ತು.
ಸದ್ಯ ಇಮೇಲ್ ಬೆದರಿಕೆ ನಕಲಿಯೇ, ನಿಜವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಆದರೆ ಯಾವುದೇ ಅಹಿತಕರ ಘಟನೆ ನಡೆಯುವುದನ್ನು ತಪ್ಪಿಸಲು ಭದ್ರತೆಯನ್ನು ಇನ್ನಷ್ಟೂ ಹೆಚ್ಚಿಸಲಾಗಿದೆ ಎಂದು ವರದಿಯಾಗಿದೆ.
