ಬಾಬಾ ರಾಮ್‌ದೇವ್ ‘ಶರಬತ್ ಜಿಹಾದ್’ ಹೇಳಿಕೆ; ದೆಹಲಿ ಹೈಕೋರ್ಟ್ ತರಾಟೆ

Date:

ಸ್ವಯಂ ಘೋಷಿತ ಯೋಗ ಗುರು ಬಾಬಾರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯವನ್ನು ‘ಶರಬತ್‌ ಜಿಹಾದ್‌’ ಎಂದು ಕರೆದಿದ್ದರು. ಅವರ ಹೇಳಿಕೆ ಕುರಿತು ದೆಹಲಿ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ‘ಹೇಳಿಕೆಗಳ ಬಗ್ಗೆ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ ಆದೇಶ ನೀಡಬೇಕಾಗುತ್ತದೆ’ ಎಂದು ಕೋರ್ಟ್‌ ಎಚ್ಚರಿಕೆ ನೀಡಿದೆ.

- Advertisement -

ಇತ್ತೀಚೆಗೆ, ಪತಂಜಲಿ ಬ್ರಾಂಡ್‌ನ ‘ಗುಲಾಬ್ ಶರಬತ್‌’ ಪ್ರಚಾರ ಮಾಡಿದ್ದ ರಾಮ್‌ದೇವ್ ಅವರು ಹಮ್‌ದರ್ದ್‌ ಪಾನೀಯಾ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. “ಹಮ್‌ದರ್ದ್‌ನ ರೂಹ್ ಅಫ್ಜಾ (ಶರಬತ್‌) ಮಾರಾಟದಿಂದ ಗಳಿಸಿದ ಹಣವನ್ನು ಮದರಸಾಗಳು ಮತ್ತು ಮಸೀದಿಗಳ ನಿರ್ಮಾಣಕ್ಕೆ ಬಳಸಲಾಗಿದೆ. ಅದು ಶರಬತ್ ಜಿಹಾದ್” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾಮ್‌ದೇವ್ ಹೇಳಿಕೆ ವಿರುದ್ಧ ‘ಹಮ್‌ದರ್ದ್ ನ್ಯಾಷನಲ್‌ ಫೌಂಡೇಶನ್‌ ಇಂಡಿಯಾ’ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಅಮಿತ್‌ ಬನ್ಸಾಲ್‌, “ಬಾಬಾ ರಾಮ್‌ದೇವ್‌ ಅವರ ಹೇಳಿಕೆಯು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತಂದಿದೆ. ಅವರು ನೀಡಿರುವ ಹೇಳಿಕೆ ಅಸಮರ್ಥನೀಯವಾದದ್ದು. ಇಂತಹ ಹೇಳಕೆಗಳ ಬಗ್ಗೆ ರಾಮ್‌ದೇವ್‌ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ ಆದೇಶ ನೀಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ವಿಚಾರಣೆ ವೇಳೆ ಹಮ್‌ದರ್ದ್‌ ಸಂಸ್ಥೆ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೊಹಟಿಗೆ, ‘ರಾಮ್‌ದೇವ್ ಹೇಳಿಕೆಯು ಸಮುದಾಯದ ನಡುವೆ ಬಿರುಕು ಸೃಷ್ಟಿತ್ತದೆ. ಇದು ದ್ವೇಷ ಭಾಷಣವಾಗಿದೆ. ರಾಮ್‌ದೇವ್‌ ಅವರು ತಮ್ಮ ಉದ್ಯಮದ ಬಗ್ಗೆ ಗಮನ ಹರಿಸಲಿ, ಮತ್ತೊಂದು ಸಂಸ್ಥೆಗೆ ಯಾಕೆ ತೊಂದರೆ ಕೊಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...