ಫೆಡರೇಶನ್ ಅಧ್ಯಕ್ಷರಾಗಲು ಬಿಜೆಪಿಯ ಬಬಿತಾ ಫೋಗಟ್ ಕುಸ್ತಿಪಟುಗಳ ಪ್ರತಿಭಟನೆಗೆ ಉತ್ತೇಜನ ನೀಡಿದರು: ಸಾಕ್ಷಿ ಮಲಿಕ್

Date:

ಬಿಜೆಪಿಯ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆಯನ್ನು ಆರಂಭಿಸಲು ಕುಸ್ತಿಪಟುಗಳನ್ನು ಉತ್ತೇಜಿಸಿದವರು ಬಿಜೆಪಿ ನಾಯಕಿ ಬಬಿತಾ ಫೋಗಟ್ ಎಂದು ಒಲಿಂಪಿಕ್ ಕುಸ್ತಿಪಟು ಸಾಕ್ಷಿ ಮಲಿಕ್ ಸೋಮವಾರ ಹೇಳಿದ್ದಾರೆ. ಬಬಿತಾ ಫೋಗಟ್ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷೆಯಾಗಲು ಬಯಸಿದ್ದರು. ಆದ್ದರಿಂದ ಉತ್ತೇಜನ ನೀಡಿದರು ಎಂದು ದೂರಿದ್ದಾರೆ.

- Advertisement -

ಇಂಡಿಯಾ ಟುಡೆ ಟಿವಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಸಾಕ್ಷಿ ಮಲಿಕ್, “ಬಬಿತಾ ಫೋಗಟ್ ಹಲವು ಕುಸ್ತಿಪಟುಗಳೊಂದಿಗೆ ಸಭೆ ನಡೆಸಿದ್ದಾರೆ. ಫೆಡರೇಶನ್‌ನೊಳಗೆ ಕಿರುಕುಳ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರತಿಭಟಿಸುವಂತೆ ಒತ್ತಾಯಿಸಿದರು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಬಬಿತಾ ಫೋಗಟ್ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟಿಸುವ ಆಲೋಚನೆಯೊಂದಿಗೆ ನಮ್ಮನ್ನು ಸಂಪರ್ಕಿಸಿದರು. ಬಬಿತಾ ಫೋಗಟ್ ತಮ್ಮದೇ ಆದ ಅಜೆಂಡಾವನ್ನು ಹೊಂದಿದ್ದರು. ಅವರು ಡಬ್ಲ್ಯುಎಫ್‌ಐ ಅಧ್ಯಕ್ಷರಾಗಲು ಬಯಸಿದ್ದರು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ‘ಸಾಕ್ಷಿ ಮಲಿಕ್‌ ಬಗ್ಗೆ ಹೆಮ್ಮೆ ಪಡುತ್ತೇನೆ’ : ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿ ಮತ್ತೊಬ್ಬ ಕುಸ್ತಿಪಟು ಪ್ರಧಾನಿಗೆ ಪತ್ರ

“ನಮ್ಮ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ನೀಡಿದೆ ಎಂಬ ವದಂತಿಗಳಿವೆ. ಆದರೆ ಅದು ಸುಳ್ಳು. ವಾಸ್ತವವಾಗಿ, ಇಬ್ಬರು ಬಿಜೆಪಿ ನಾಯಕರಾದ ಬಬಿತಾ ಫೋಗಟ್ ಮತ್ತು ತಿರತ್ ರಾಣಾ ಹರಿಯಾಣದಲ್ಲಿ ಪ್ರತಿಭಟನೆಗೆ ಅನುಮತಿ ಪಡೆಯಲು ನಮಗೆ ಸಹಾಯ ಮಾಡಿದರು” ಎಂದು ಸಾಕ್ಷಿ ಮಲಿಕ್ ಹೇಳಿದ್ದಾರೆ.

ಇನ್ನು ಈ ಸಂದರ್ಭದಲ್ಲೆ ಲೈಂಗಿಕ ಕಿರುಕುಳ ನಡೆಯುತ್ತಿದ್ದದ್ದು ಹೌದು ಎಂದು ಸಾಕ್ಷಿ ಮಲಿಕ್ ಸ್ಪಷ್ಟಪಡಿಸಿದ್ದಾರೆ. “ಈ ಪ್ರತಿಭಟನೆಯು ಬಬಿತಾ ಫೋಗಟ್ ಸಲಹೆಯ ಮೇರೆಗೆ ನಡೆದಿದ್ದರೂ ಕೂಡಾ ಸಂಪೂರ್ಣವಾಗಿ ಅವರ ಪ್ರಭಾವವಿಲ್ಲ. ಫೆಡರೇಶನ್‌ನಲ್ಲಿ ಲೈಂಗಿಕ ಕಿರುಕುಳ ಮತ್ತು ದೌರ್ಜನ್ಯದಂತಹ ಗಂಭೀರ ಸಮಸ್ಯೆಗಳಿವೆ ಎಂದು ನಮಗೆ ತಿಳಿದಿತ್ತು” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

ಬಿಜೆಪಿಯ ಮಾಜಿ ಸಂಸದರೂ ಆಗಿರುವ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಕಳೆದ ವರ್ಷ ಹಲವು ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ತನಿಖೆಗೆ ಒತ್ತಾಯಿಸಿ ವಾರಗಳವರೆಗೆ ಪ್ರತಿಭಟನೆ ನಡೆಸಿದ್ದರು.

ಬಾಲ್ಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ

ಹರಿಯಾಣದ 32 ವರ್ಷ ವಯಸ್ಸಿನ ಕುಸ್ತಿಪಟು ತನ್ನ ಟ್ಯೂಷನ್ ಶಿಕ್ಷಕರಿಂದ ಕಿರುಕುಳಕ್ಕೊಳಗಾಗಿದ್ದ ಬಗ್ಗೆಯೂ ಮಾತನಾಡಿದ್ದಾರೆ. “ಇದು ನನ್ನ ತಪ್ಪು ಎಂದು ನಾನು ಭಾವಿಸಿದ್ದರಿಂದ ನಾನು ಅದನ್ನು ನನ್ನ ಮನೆಯವರಿಗೆ ಹೇಳಲು ಸಾಧ್ಯವಾಗಲಿಲ್ಲ. ನನ್ನ ಶಾಲಾ ದಿನಗಳಲ್ಲಿ ನನ್ನ ಟ್ಯೂಷನ್ ಶಿಕ್ಷಕರು ನನಗೆ ಕಿರುಕುಳ ನೀಡುತ್ತಿದ್ದರು. ಅವರು ನನ್ನನ್ನು ಕರೆಯುತ್ತಿದ್ದರು. ಕೆಲವೊಮ್ಮೆ ನನ್ನನ್ನು ಮುಟ್ಟಲು ಪ್ರಯತ್ನಿಸುತ್ತಿದ್ದರು. ನಾನು ನನ್ನ ಟ್ಯೂಷನ್‌ಗೆ ಹೋಗಲು ಭಯಪಡುತ್ತಿದ್ದೆ. ಆದರೆ ನಾನು ಎಂದಿಗೂ ನನ್ನ ತಾಯಿಗೆ ಹೇಳಲು ಸಾಧ್ಯವಾಗಲಿಲ್ಲ” ಎಂದು ವಿವರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....