ಮಹಾರಾಷ್ಟ್ರ, ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಕಂಪ

Date:

ಅರುಣಾಚಲ ಪ್ರದೇಶ ಮತ್ತು ಮಹಾರಾಷ್ಟ್ರದಲ್ಲಿ ಎರಡು ಬಾರಿ ಭೂಂಕಪ ಸಂಭವಿಸಿದೆ. ಅರುಣಾಚಲ ಪ್ರದೇಶದಲ್ಲಿ ಗುರುವಾರ ಮುಂಜಾನೆ ಎರಡು ಗಂಟೆಗಳ ಅಂತರದಲ್ಲಿ ಭೂಕಂಪಿಸಿದರೆ, ಮಹಾರಾಷ್ಟ್ರದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಮುಂಜಾನೆ 1.49ರ ಸಮಯದಲ್ಲಿ ಪಶ್ಚಿಮ ಕಮೆಂಗ್ ಭಾಗದಲ್ಲಿ 3.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರವು ಅಕ್ಷಾಂಶ 27.38 ಮತ್ತು ರೇಖಾಂಶ 92.77ರಲ್ಲಿ 10 ಕಿಲೋ ಮೀಟರ್ ಆಳದಲ್ಲಿದೆ. ಇದು ಸಂಭವಿಸಿದ ಎರಡು ಗಂಟೆಗಳ ಬಳಿಕ ಮತ್ತೆ ಭೂಕಂಪಿಸಿದೆ.

ಬೆಳಗಿನ ಜಾವ 3.40ಕ್ಕೆ ಪೂರ್ವ ಕಮೆಂಗ್ ಪ್ರದೇಶದಲ್ಲಿ 3.4ರಷ್ಟು ತೀವ್ರತೆಯ ಭೂಕಂಪವಾಗಿದೆ. ಅಕ್ಷಾಂಶ 27.46 ಮತ್ತು ರೇಖಾಂಶ 92.82ರಲ್ಲಿ 5 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಪತ್ತೆಯಾಗಿದೆ ಎಂದು ಭೂಕಂಪಶಾಸ್ತ್ರ ಕೇಂದ್ರ ಎಕ್ಸ್‌ (ಟ್ವೀಟ್) ಮಾಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮಹಾರಾಷ್ಟ್ರದ ಹಿಂಗೋಲಿ ಪ್ರದೇಶದಲ್ಲಿ ಹತ್ತು ನಿಮಿಷಗಳ ಅಂತರದಲ್ಲಿ ಎರಡು ಬಾರಿ ಭೂಂಕಪನ ಸಂಭವಿಸಿದೆ. ಗುರುವಾರ ಮುಂಜಾನೆ 6.08ರ ಸಮಯಕ್ಕೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 4.5ರಷ್ಟು ತೀವ್ರತೆ ಕಂಡುಬಂದಿದೆ. ಇದಾದ ಹತ್ತು ನಿಮಿಷಗಳಲ್ಲೇ 6.19ರ ಹೊತ್ತಿಗೆ ಮತ್ತೆ ಭೂಮಿ ಕಂಪಿಸಿದ್ದು, 3.6ರಷ್ಟು ತೀವ್ರತೆ ದಾಖಲಾಗಿದೆ.

ಮಹಾರಾಷ್ಟ್ರದಲ್ಲಿ ಮತ್ತು ಅರುಣಾಚಲ ಪ್ರದೇಶದಲ್ಲಿ ಎರಡು ಬಾರಿ ಭೂಮಿ ಕಂಪಿಸಿದರೂ ಯಾವುದೇ ಪ್ರಾಣ ಹಾನಿ ಮತ್ತು ಆಸ್ತಿಪಾಸ್ತಿ ಹಾನಿಯ ಬಗ್ಗೆ ವರದಿಯಾಗಿಲ್ಲ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರ, ತೆಲಂಗಾಣದಲ್ಲಿ ರಸ್ತೆ ಅಪಘಾತ: 8 ಸಾವು

ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ...

ದುರಹಂಕಾರಿಗಳಿಗೆ ಭಗವಾನ್ ರಾಮ 241ಕ್ಕೆ ನಿಲ್ಲಿಸಿದ್ದಾನೆ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್‌ ನಾಯಕ ವಾಗ್ದಾಳಿ

ಬಿಜೆಪಿಯ ವಿರುದ್ಧ ಆರ್‌ಎಸ್‌ಎಸ್‌ ನಾಯಕರೊಬ್ಬರು ವಾಗ್ದಾಳಿ ನಡೆಸಿದ್ದು, ಆಡಳಿತ ಪಕ್ಷ ಲೋಕಸಭೆ...

ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ ಮೃತದೇಹಗಳು ಇಂದು ಭಾರತಕ್ಕೆ

ಎರಡು ದಿನಗಳ ಹಿಂದೆ ಕುವೈತ್ ಬೆಂಕಿ ದುರಂತದಲ್ಲಿ ಸಾವಿಗೀಡಾದ 45 ಮಂದಿಯ...

ಶಾಸಕ ಸ್ಥಾನಕ್ಕೆ ಸಿಕ್ಕಿಂ ಸಿಎಂ ಪತ್ನಿ ರಾಜೀನಾಮೆ: ಒಂದು ದಿನದ ಹಿಂದಷ್ಟೆ ಪ್ರೇಮ್ ಸಿಂಗ್‌ ಪ್ರಮಾಣವಚನ

ಒಂದು ದಿನದ ಹಿಂದಷ್ಟೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಸಿಕ್ಕಿಂ ಮುಖ್ಯಮಂತ್ರಿ...